ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಹೋಬಳಿಯ ಉಜ್ಜನಿ ಹೊಸಹಳ್ಳಿಯ (Ujjani Hosahalli) ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ನಾಳೆ (ಮೇ.17) ನಡೆಯಲಿದೆ ಎಂದು ದೇವಾಲಯದ ದರ್ಮದರ್ಶಿ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ತಿಳಿಸಿದ್ದಾರೆ.
ಬ್ರಹ್ಮರಥೋತ್ಸವದ ಅಂಗವಾಗಿ ಮೇ.15ರಿಂದ ಮೇ.19ರವರೆಗೆ ಅಭಿಷೇಕ, ಅರ್ಚನೆ, ಮಹಾಗಣಪತಿ ಪೂಜೆ, ಅಂಕುರಾರ್ಪಣೆ, ಧ್ವಜಾರೋಹಣ, ಕಲ್ಯಾಣೋತ್ಸವ, ಧೂಳೋತ್ಸವ, ಪಲ್ಲಕಿ ಉತ್ಸವ, ಡೊಳ್ಳು ಕುಣಿತ, ಉಯ್ಯಾಲೋತ್ಸವ, ಶಯನೋತ್ಸವ, ಗ್ರಾಮೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಮೇ.17 ರಂದು ಮಧ್ಯಾಹ್ನ 12ರಿಂದ 01ಗಂಟೆಯೊಳಗೆ ಸಲ್ಲುವ ಶುಭ ಅಭಿಜನ್ ಮುಹೂರ್ತದಲ್ಲಿ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯಲಿದೆ.
ಇದೇ ದಿನ ಸಂಜೆ ಗುಂಡಮ್ಮ ಕಥಾ ಅಥವಾ ಸಾಸಲು ಚಿನ್ನಮ್ಮ ಕಥಾ ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ತಿಳಿಸಿದ್ದಾರೆ.