DCM D.K.Shivakumar to visit Nelamangala on June 28

ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿಕೆ ಶಿವಕುಮಾರ್

ಮೈಸೂರು: “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು.

ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ, “ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು.

ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ” ಎಂದರು.

ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ, “ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ” ಎಂದರು.

ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದರು.

“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದರು.

ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದರು.

63 ನೇ ಹುಟ್ಟುಹಬ್ಬ ಆಚರಣೆಗೆ ಶುಭಸುದ್ದಿ ನೀಡುವಿರಾ ಎಂದು ಕೇಳಿದಾಗ, “ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ಹೊರಗಡೆ ಹೋಗುವುದು ಬೇಡವೆಂದು ನಮ್ಮ ಕುಟುಂಬ ಸದಸ್ಯರ ಜೊತೆ ರಾಜ್ಯದ ಅರಣ್ಯ ಸಂಪತ್ತು ವೀಕ್ಷಣೆ ಮಾಡಿದ್ದೇನೆ. ಈ ಬಗ್ಗೆ ನಿಮ್ಮೆಲ್ಲರ ಆಶೀರ್ವಾದವಿರಲಿ” ಎಂದರು.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!