There is no shortage of funds for guarantee schemes: CmSiddaramaiah

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ: ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಕೆಲಸವನ್ನು ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿಗಳ ಆದೇಶ ಹೊರತಾಗಿಯೂ , ಕೆಲಸ ಮುಂದುವರೆದಿರುವ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದರು.

ಗ್ಯಾರಂಟಿಗಳಿಗೆ ಹಣದ ಕೊರತೆಯಿಲ್ಲ

ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ ಎಂದರು.

ಹೊಸಪೇಟೆಯಲ್ಲಿ ಎರಡು ವರ್ಷದ ಸಾಧನಾ ಸಮಾವೇಶ

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ ಎಂದರು.

ಆಡಳಿತಾತ್ಮಕ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ರಚನೆ

ಗ್ರೇಟರ್ ಬೆಂಗಳೂರು ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸುತ್ತಿರುವ ಬಗ್ಗೆ ಉತ್ತರಿಸಿ, ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಅಂದಿನ ಬಿಜೆಪಿಯ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ರವರು ಯೋಜಿಸಿದ್ದರು.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದು, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟಸಾಧ್ಯ. ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರಪಾಲಿಕೆಗಳನ್ನು ರಚಿಸಬೇಕೆಂಬ ಚಿಂತನೆಯಿಂದ ನನ್ನ ಹಿಂದಿನ ಮುಖ್ಯಮಂತ್ರಿಯ ಅವಧಿಯಲ್ಲಿ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಆದ್ದರಿಂದ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದರು.

ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ

ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅನರ್ಹತೆಯ ಕುರಿತ ಪ್ರಶ್ನೆಗೆ ಉತ್ತರಿಸಿ, ನ್ಯಾಯಾಲಯ ಅವರಿಗೆ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ. ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ ಎಂದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು

2008-2013ರವರೆಗೆ ವಿರೋಧಪಕ್ಷದ ನಾಯಕನಾಗಿ , ಲೋಕಾಯುಕ್ತ ಸಂತೋಷ್ ಹೆಗಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಅಂದು ಬಿಜೆಪಿಸರ್ಕಾರದ ಅದನ್ನು ವಿರೋಧಿಸಿತ್ತು. ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ತಿಳಿಸಿದರು.

ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ಸದಾ ವಿರೋಧಿಸಿದ್ದೇನೆ

ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದರು ಎಂದು ಜನಾರ್ಧನ ರೆಡ್ಡಿಯವರ ಹೇಳಿಕೆಯ ಬಗ್ಗೆ ಪ್ರತಿಕ್ರಯಿಸಿ, ಅವರ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ.

ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವುದಾಗಿ ಸಿಎಅಮ ತಿಳಿಸಿದರು.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!