ಬೆಂಗಳೂರು: ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಬೆಂಗಳೂರಿನ ಇಸ್ಕಾನ್ (ISKCON) ಸೊಸೈಟಿಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ಪೀಠ ಶುಕ್ರವಾರ ತೀರ್ಪು ನೀಡಿದೆ.
ಬೆಂಗಳೂರಿನಲ್ಲಿರುವ ಐತಿಹಾಸಿಕ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ಕುರಿತು ಇಸ್ಕಾನ್ ಮುಂಬೈ ಪರ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಸ್ಕಾನ್ ಬೆಂಗ ಳೂರಿನ ಅರ್ಜಿಯನ್ನು ಸುಪ್ರೀಂ ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.