ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಿಂದೂ ಮುಸ್ಲಿಂ (Hindu Muslim) ಯುವ ಜೋಡಿ ಪ್ರೀತಿಸಿ ಮದುವೆಯಾಗಿದ್ದಾರೆ. ಧರ್ಮ ಬೇರೆ ಬೇರೆಯಾಗಿದ್ದರಿಂದ ಹುಡುಗಿ ಮನೆಯವರು ವಿರೋಧ ವ್ಯಕ್ತಪಡಿಸಿದ ಕಾರಣ ಯುವ ಜೋಡಿ ಪೊಲೀಸರ ಮೊರೆ ಹೋಗಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.
ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇಶ್ವರ ಗ್ರಾಮಕ್ಕೆ ಸೇರಿದ ನಜ್ಞಾ ಎಂಬ ಯುವತಿ ಚಿಕ್ಕಬಳ್ಳಾಪುರ ತಾಲೂಕಿನ ಯಾಪಲಹಳ್ಳಿ ಗ್ರಾಮದ ಹರೀಶ್ ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು.
ವಿರೋಧ: ಚಿಕ್ಕಬಳ್ಳಾಪುರೆದ ಖಾಸಗಿ ಕಂಪನಿಯಲ್ಲಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿದ್ದು, ನಜ್ಞಾಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತವಾಗಿದೆ.
ಹೀಗಾಗಿ ಇಬ್ಬರೂ ತಾಲೂಕಿನ ಪೊಶೇಟ್ಟಿಹಳ್ಳಿ ಬಳಿಯ ದೇವಸ್ಥಾನವೊಂದರಲ್ಲಿ ಮದುವೆಯಾಗಿ, ನಂತರ ರಕ್ಷಣೆ ನೀಡುವಂತೆ ಶುಕ್ರವಾರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಷೆ ಈ ಪ್ರಕರಣವನ್ನ ಮಹಿಳಾ ಠಾಣೆಗೆ ವರ್ಗಾಯಿಸಿ ವಿಚಾರಣೆ ನಡೆಸಿ ರಕ್ಷಣೆ ನೀಡುವಂತೆ ಶಿಪಾರಸು ಮಾಡಿದ್ದಾರೆ.