Separate MSME department to be formed: Chief Minister Siddaramaiah

ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ದಿನಗಳಲ್ಲಿ ಎಂ.ಎಸ್.ಎಂ.ಇ (MSME) ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಸಭೆ ಕರೆದು ಈ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಉದ್ಯೋಗಗಳಿಗೆ ಅಭ್ಯರ್ಥಿಗಳಿಗನ್ನು ತರಬೇತಿ ನೀಡಿ ತಯಾರು ಮಾಡಬೇಕು. ಕೌಶಲ್ಯಾಭಿವೃದ್ಧಿ ಅತ್ಯಗತ್ಯ ಎಂದು ಮನಗಂಡು ಈ ನಿಟ್ಟಿನಲ್ಲಿ ರಾಜ್ಯ ಅಭಿವೃದ್ಧಿಯಾಗುತ್ತಿದೆ ಎಂದರು.

ಸಂಘಟನೆಯ ದೃಷ್ಟಿಯಿಂದ ಅಮೃತ ಮಹೋತ್ಸವ ಪ್ರಮುಖವಾದ ಮೈಲಿಗಲ್ಲು

1947 ರಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಆರಾಧ್ಯ ಅವರು15 ಜನ ಸದಸ್ಯಯರನ್ನೊಳಗೊಂಡ ಈ ಸಂಸ್ಥೆಯನ್ನು ಸಣ್ಣ ಕೊಠಡಿಯೊಂದರಲ್ಲಿ ಪ್ರಾರಂಭಿಸಿದ್ದು, ಇಂದು 13 ಸಾವಿರ ಸದಸ್ಯರನ್ನು ಹೊಂದಿದೆ.

ಅಮೃತ ಮಹೋತ್ಸವ ಸಮಾರಂಭದಲ್ಲಿ ಕನಿಷ್ಠ ಒಂದು ಸಾವಿರ ಜನರಾದರೂ ಭಾಗವಹಿ ಸಬೇಕಿತ್ತು ಎಂದು ಅಭಿಪ್ರಾಯ ಪಟ್ಟರು. ಸಂಘಟನೆಯ ದೃಷ್ಟಿಯಿಂದ ರಜತ, ಸುವರ್ಣ ಹಾಗೂ ಅಮೃತ ಮಹೋತ್ಸವ ಪ್ರಮುಖವಾದ ಮೈಲಿಗಲ್ಲುಗಳು. ಸಂಸ್ಥೆಯ ಸದಸ್ಯತ್ವ ಒಂದು ಲಕ್ಷಕ್ಕೆ ಏರಲಿ ಎಂದ ಮುಖ್ಯಮಂತ್ರಿಗಳು ಎಂ.ಎಸ್.ಎಂ. ಇ ಗಳು ಬೆಳೆದಂತೆಲ್ಲ ರಾಜ್ಯದ ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಕಾಸಿಯಾ ರಾಜ್ಯದ ಅಭಿವೃದ್ಧಿಯ ಪಾಲುದಾರ

ಕಾಸಿಯಾ ಕೇವಲ ಉದ್ಯೋಗದಾತ ಮಾತ್ರವಲ್ಲದೆ ರಾಜ್ಯದ ಅಭಿವೃದ್ಧಿಯ ಪಾಲುದಾರ ಕೂಡ ಹೌದು. ರಾಜ್ಯದ ಅಭಿವೃದ್ಧಿಯಾದಂತೆ ತಲಾದಾಯ ಕೂಡ ಹೆಚ್ಚಾಗುತ್ತದೆ. ಕರ್ನಾಟಕ ಅಭಿವೃದ್ಧಿಶೀಲ ರಾಜ್ಯ. 20 ಲಕ್ಷ ಕ್ಕೂ ಹೆಚ್ಚು ಎಂ.ಎಸ್.ಎಂ. ಇ ಗಳು ಸೇರಿ 185 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಜಿಸಲಾಗಿದೆ. ಇದು ಇನ್ನೂ ಹೆಚ್ಚಾಗಬೇಕೆಂದು ಬಯಸುತ್ತೇನೆ ಎಂದರು

ಕೃಷಿ ಕ್ಷೇತ್ರವನ್ನು ಬಿಟ್ಟರೆ ಹೆಚ್ಚು ಉದ್ಯೋಗ ನೀಡುವುದು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು

ಕರ್ನಾಟಕದಲ್ಲಿ 7 ಕೋಟಿ ಜನಸಂಖ್ಯೆ ಇದೆ. ಕೃಷಿ ಕ್ಷೇತ್ರವನ್ನು ಬಿಟ್ಟರೆ ಹೆಚ್ಚು ಉದ್ಯೋಗ ನೀಡುವುದು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು. ಹಿಂದೆ ದಾಬಸ್ ಪೇಟೆಯಲ್ಲಿ 400 ಎಕರೆ ಕಾಸಿಯಾದವರಿಗೆ ಮಂಜೂರು ಮಾಡಿದ್ದನ್ನು ಸಿಎಂ ಸ್ಮರಿಸಿದರು.

ಮಾರುಕಟ್ಟೆ ದರದ ಅರ್ಧದಷ್ಟು ದರದಲ್ಲಿ ಇದನ್ನು ಮಂಜೂರು ಮಾಡಿದ್ದು, ಕೌಶಲ್ಯ ಅಭಿವೃದ್ಧಿ ನೀಡುವ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು
ಸರ್ಕಾರ ಮೊದಲಿನಿಂದಲೂ ಕಾಸಿಯಾ ಸಂಸ್ಥೆಗೆ ಬೆಂಬಲ ನೀಡುತ್ತಾ ಬಂದಿದೆ.

ಉತ್ಪಾದನಾ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ರಾಷ್ಟ್ರ ನಿರ್ಮಾಣದಲ್ಲಿ ತೊಡಗಬೇಕು.ಈ ಬಗ್ಗೆ ಆಸಕ್ತಿ ಮತ್ತು ಶಕ್ತಿ ಎರಡೂ ಇರಬೇಕು ಎಂದರು.ರಾಜ್ಯದ ಜನಸಂಖ್ಯೆಯನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಬೇಕು.ಆಗ ಮಾತ್ರ ಸಮಾನತೆ ತರಲು ಸಾಧ್ಯ ಎಂದರು. ಅರ್ಹತೆ ಇಲ್ಲದವರಿಗೆ ತರಬೇತಿ ನೀಡಬೇಕು. ಕೆಲಸಕ್ಕೆ ಯೋಗ್ಯರನ್ನಾಗಿಸಬೇಕು ಎಂದರು.

ಕರ್ನಾಟಕ ಆರ್ಥಿಕವಾಗಿ ಬೆಳವಣಿಗೆಯಾಗುತ್ತದೆ ಎಂದರು. ರಾಜ್ಯದಿಂದ 4.50 ಲಕ್ಷ ಕೋಟಿ ತೆರಿಗೆ ಕೇಂದ್ರಕ್ಕೆ ಹೋಗುತ್ತಿದೆ. 65-70ಸಾವಿರ ಕೋಟಿ ಮಾತ್ರ ನಮಗೆ ವಾಪಸ್ಸು ಬರುತ್ತದೆ. ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ ಎಂದು ರಾಜ್ಯಕ್ಕೆ ಅನ್ಯಾಯವಾಗಬಾರದು ಎಂದರು.

ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ. ರಾಜ್ಯಗಳು ಸೊರಗಿದರೆ ಕೇಂದ್ರವೂ ಸೊರಗುತ್ತದೆ ಎಂದರು. ಕೇಂದ್ರ ಸರ್ಕಾರ ಕನಿಷ್ಠ 50% ತೆರಿಗೆಯ ಪಾಲನ್ನು ರಾಜ್ಯಕ್ಕೆ ಕೊಡಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ಹೂಡಿಕೆಗೂ ಕಾನೂನು ಸುವ್ಯಸ್ಥೆಗೂ ನೇರವಾದ ಸಂಬಂಧವಿದೆ

ದೇಶದಲ್ಲಿ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದರು. ರಾಜ್ಯದಲ್ಲಿ ಕೈಗಾರಿಕೆ ಬೆಳವಣಿಗೆಗೆ ಯತ್ನಿಸಲಾಗುತ್ತಿದೆ. ಕೈಗಾರಿಕೆಗಳ ಹೂಡಿಕೆಗೂ ಕಾನೂನು ಸುವ್ಯಸ್ಥೆಗೂ ನೇರವಾದ ಸಂಬಂಧವಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಣ್ಣ ಕೈಗಾರಿಕೆಗಳ ಹಾಗು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣ ಬಸಪ್ಪ ದರ್ಶನಾಪುರ, ಶಾಸಕ ರಘುಮೂರ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ , ಕಾಸಿಯಾ ಅಧ್ಯಕ್ಷ ರಾಜಗೋಪಾಲ್, ಉಪಾಧ್ಯಕ್ಷ, ಗಣೇಶ್ ರಾವ್ ಉಪಸ್ಥಿತರಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!