ಹೈದರಾಬಾದ್: ಕಟ್ಟಡವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ (Fire accident) 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದಾರಣ ಘಟನೆ ಹೈದರಾಬಾದ್ ಚಾರ್ ಮಿನಾರ್ ಬಳಿ ಭಾನುವಾರ ಮುಂಜಾನೆ ನಡೆದಿದೆ.
ವಿಷಯ ತಿಳಿದು 11 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿವೆ.
ಕಟ್ಟಡದ ಒಳಗೆ ಇನ್ನಷ್ಟು ಮಂದಿ ಸಿಲುಕಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.
ಬೆಂಕಿ ಅನಾಹುತಕ್ಕೆ ಕಾರಣ ಇದುವರೆಗೂ ತಿಳಿದುಬಂದಿಲ್ಲ.
ಗುಲ್ಜಾರ್ ಹೌಸ್ ಹೆಸರಿನ ಈ ಕಟ್ಟಡದಲ್ಲಿ ಮುಂಜಾನೆ 6.00 ರ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಕೊಂಡಿತ್ತು. ಘಟನೆಯಲ್ಲಿ ಗಂಭೀರವಾಗಿ ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೀರ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಗುಲ್ಜಾರ್ ಹೌಸ್ನಲ್ಲಿ