Rainwater disruption; DCM DK Shivakumar visits

ಮಳೆ‌ ನೀರಿನಿಂದ ಅವಾಂತರ; ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರು: “ಮಳೆ ನೀರಿನಿಂದ ಉಂಟಾಗುವ ಅವಘಡಗಳನ್ನು ತಪ್ಪಿಸಲು ಮೊದಲೇ ಸಜ್ಜಾಗಿದ್ದೆವು. ನಾವು ಶೇ. 70 ರಷ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ. ಈಗಾಗಲೇ ಇಡೀ ಬೆಂಗಳೂರಿನಾದ್ಯಂತ 197 ಕಿಮೀ ಉದ್ದದ ಮಳೆನೀರುಗಾಲುವೆ ನಿರ್ಮಾಣದ ಕೆಲಸ ನಡೆಯುತ್ತಿದೆ.” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ಬಿಬಿಎಂಪಿ ಮುಖ್ಯ ಕಚೇರಿಯ ವಾರ್ ರೂಮಲ್ಲಿ ಮಾಧ್ಯಮದವರ ಜತೆ ಸೋಮವಾರ ಸಂಜೆ ಮಾತನಾಡಿದರು.

“ನಾನು ಬೆಂಗಳೂರಿನ ಜವಾಬ್ದಾರಿ ತೆಗೆದುಕೊಂಡ ನಂತರ ಮಳೆ ನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 210 ಪ್ರದೇಶಗಳನ್ನು ಗುರುತಿಸಲಾಯಿತು. 166 ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ ‌ಮಾಡಲಾಗಿದೆ. ಇನ್ನು 44 ಪ್ರದೇಶಗಳಲ್ಲಿ ಕೆಲಸ ಬಾಕಿಯಿದ್ದು ಇದರಲ್ಲಿ 24 ಪ್ರದೇಶಗಳಲ್ಲಿ ಕೆಲಸ ನಡೆಯುತ್ತಿದೆ.

ಸಂಚಾರಿ ಪೊಲೀಸರು ಮಳೆ ಬಂದಾಗ ಸಮಸ್ಯೆ ಉಂಟಾಗುವ 132 ಪ್ರದೇಶಗಳನ್ನು ಗುರುತಿಸಿದ್ದಾರೆ. ಇದರಲ್ಲಿ ಏಪ್ರಿಲ್ ವೇಳೆಗೆ 82 ಪ್ರದೇಶಗಳಲ್ಲಿ ಸಮಸ್ಯೆ ನಿವಾರಣೆ ಮಾಡಿದ್ದೇವೆ. 41 ಕೆಲಸಗಳು ಬಾಕಿ ಉಳಿದಿವೆ. ಮಳೆನೀರುಗಾಲುವೆಗೆ ಎಂದೇ 2 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ” ಎಂದು ಹೇಳಿದರು.

“ಮಳೆ ಎಂಬುದು ಪ್ರಕೃತಿಯ ನಿಯಮ. ನಾವು ಜನಸಾಮಾನ್ಯರ ಬದುಕಿನ ಬಗ್ಗೆ ಕಾಳಜಿ ಹೊಂದಿದ್ದೇವೆ. ಉಂಟಾಗಿರುವ ಸಮಸ್ಯೆಗಳನ್ನು ನಿವಾರಣೆ ಮಾಡಲು ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಬೆಂಗಳೂರಿನ ಜನತೆ ಯಾವುದೇ ಕಾರಣಕ್ಕೂ ಗಾಬರಿಗೆ ಒಳಗಾಗುವುದು ಬೇಡ” ಎಂದರು.

“ದುರಾದೃಷ್ಟವಶಾತ್ ಮಹಿಳೆಯೊಬ್ಬರ ಮೇಲೆ ಖಾಸಗಿ ಪ್ರದೇಶದಲ್ಲಿದ್ದ ಕಟ್ಟಡದ ಗೋಡೆ ಬಿದ್ದು ಮೃತಪಟ್ಟಿದ್ದಾರೆ. ನಮಗೂ ನಮ್ಮ ಜವಾಬ್ದಾರಿಯ ಬಗ್ಗೆ ಅರಿವಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಸಿಲ್ಕ್‌ ಬೋರ್ಡ್, ಹೆಬ್ಬಾಳದ‌ ನಂತರದ‌ ಭಾಗ, ಯಲಹಂಕ ಇಲ್ಲೆಲ್ಲೇ ಹೆಚ್ಚು ಮಳೆ ಸುರಿದಿದೆ. ಇಲ್ಲಿ ಒಂದೆರಡು ಕಡೆ ರೈಲ್ವೇ ಅಂಡರ್ ಪಾಸ್ ಕೆಲಸ ನಡೆಯುತ್ತದೆ. ಆದ ಕಾರಣ ನೀರು ನಿಂತು ಹೆಚ್ಚು ತೊಂದರೆಯಾಗುತ್ತಿದೆ. ಆದ್ದರಿಂದ ಆ ಇಲಾಖೆಯವರ ಜೊತೆ ಸಮನ್ವಯ ಸಾಧಿಸಿ ಕೆಲಸ ಮಾಡಲಾಗುವುದು” ಎಂದರು.

ಹತಾಶೆಯ ಮನುಷ್ಯರು

ಕುಮಾರಸ್ವಾಮಿ ಗ್ರೇಟರ್ ಬೆಂಗಳೂರಲ್ಲ ಲೂಟರ್ ಬೆಂಗಳೂರು ಎಂದು ಕರೆದಿರುವ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಹಾಗೂ ಬಿಜೆಪಿಯ ನಾಯಕರು ಹತಾಶೆಯ ಮನುಷ್ಯರು” ಎಂದರು.

ನಿಮ್ಮನ್ನ ಅಥವಾ ಸರ್ಕಾರವನ್ನು ನೋಡಿ ಹತಾಶೆಗೆ ಒಳಗಾಗಿದ್ದಾರೆಯೇ ಎಂದಾಗ, “ನಾನು ಹಾಗೂ ಸರ್ಕಾರ ಎರಡೂ ನೋಡಿ ಹತಾಶರಾಗಿದ್ದಾರೆ. ನಾವು ಇಷ್ಟೊಂದು ಸಾಧನೆ ಮಾಡಿದ್ದೇವೆ. ಅವರಿಗೆ ಏನನ್ನೂ ಹೇಳಿಕೊಳ್ಳಲು ಆಗುತ್ತಿಲ್ಲವಲ್ಲ. ಜೋಕರ್ ಆಟವಾಡಲು ನನಗೆ ಚಾನ್ಸ್ ಸಿಗಲಿಲ್ಲವಲ್ಲ ಎಂದು ಸಂಕಟ” ಎಂದರು.

ಡಿಕೆ ಶಿವಕುಮಾರ್ ರಿಯಲ್‌ ಎಸ್ಟೇಟ್‌ ಮಾಡುವವರು ಎನ್ನುವ ಬಿಜೆಪಿಯವರ ಟೀಕೆಯ ಬಗ್ಗೆ ಕೇಳಿದಾಗ, “ನಾನು ಇಲ್ಲಿ ಅದನ್ನು ಮಾತನಾಡುವುದಿಲ್ಲ. ಬೇರೆ ವೇದಿಕೆಯಲ್ಲಿ ಮಾತನಾಡುತ್ತೇನೆ. ಆರ್.ಅಶೋಕ್ ಹಾಗು ವಿರೋಧ ಪಕ್ಷದ ಯಾರನ್ನಾದರೂ ಕರೆಯಿರಿ ಮಾಧ್ಯಮಗಳ ಮುಂದೆಯೇ ಚರ್ಚೆ ನಡೆಸೋಣ” ಎಂದು ತಿರುಗೇಟು ನೀಡಿದರು.

ಸವಾಲಿಗೆ ನಾನು ಸಿದ್ಧನಿದ್ದೇನೆ

ಗ್ರೇಟರ್‌ ಬೆಂಗಳೂರು ವಾಟರ್ ಬೆಂಗಳೂರಾಗಿದೆ ಎನ್ನುವ ವಿಪಕ್ಷಗಳ ಟೀಕೆಗಳ ಬಗ್ಗೆ ಕೇಳಿದಾಗ,‌ “ನಾವು ಬೆಂಗಳೂರಿನ‌ ಎಷ್ಟು ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ ಎಂಬುದರ ಬಗ್ಗೆ ನಮ್ಮ ಜೊತೆ ಚರ್ಚೆಗೆ ಅವರುಗಳು ಬರಲಿ.‌‌ ಕೇವಲ ಆರೋಪ ಮಾಡಿ ಹಿಟ್ ಅಂಡ್ ರನ್ ಮಾಡುವುದಲ್ಲ.‌ ಅವರು ಪಟ್ಟಿ ಮಾಡಿಕೊಂಡು ಬರಲಿ. ನಾವು ಸುಮ್ಮನೇ ಕುಳಿತಿದ್ದೇವ ಎಂಬುದು ತಿಳಿಯಲಿ” ಎಂದು ಹೇಳಿದರು.

ನೀವು ಸವಾಲು ಹಾಕಲು ತಯಾರಿದ್ದೀರಾ ಎಂದು ಕೇಳಿದಾಗ, “ನಾನು ಯಾವಾಗಲೂ ‌ತಯಾರಿದ್ದೇನೆ. ಮಾಧ್ಯಮಗಳಲ್ಲಿಯೇ ಇದಕ್ಕೆ ವೇದಿಕೆ ಸಿದ್ಧ ಮಾಡಿ” ಎಂದರು.

ವಿರೋಧ ಪಕ್ಷಗಳು ಬೆಂಗಳೂರಿನ ಸ್ಥಿತಿಗೆ ಕಾಂಗ್ರೆಸ್ ಕಾರಣ ಎಂದು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ಅವರ ಕಾಲದಲ್ಲಿ ಏನಾಗಿದೆ ಎಂಬುದನ್ನು ವಿಪಕ್ಷಗಳು ನೋಡಿಕೊಳ್ಳಲಿ.‌ ನಾವಾದರು ಶೇ.70 ರಷ್ಟು ಪ್ರದೇಶಗಳಲ್ಲಿ ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ. ಬೆಂಗಳೂರು ಯೋಜಿತವಾದ ನಗರವಲ್ಲ. ಆದರೂ ನಾವು ನಮ್ಮ ಕರ್ತವ್ಯ ಮಾಡುತ್ತೇವೆ” ಎಂದರು.

ಸಮಸ್ಯೆ ‌ನಿವಾರಣೆಗೆ ಏನಾದರೂ ಯೋಜನೆಗಳಿವೆಯೇ ಎಂದು ಕೇಳಿದಾಗ, ‌”ಈ ಮೊದಲೇ ನಾವು ಯೋಜನೆ ರೂಪಿಸಿದ್ದೆವು. ಅಧಿಕಾರಿಗಳು ಚೆನ್ನಾಗಿ ಕೆಲಸ ಮಾಡಿದ್ದಾರೆ. ಅದರ ಬಗ್ಗೆ ನನಗೂ ಸಂತಸವಿದೆ. ಅನೇಕ ಅಧಿಕಾರಿಗಳು ತೊಂದರೆಗೆ ಒಳಗಾದ ಸ್ಥಳದಲ್ಲಿದ್ದು ಕೆಲಸ ಮಾಡಿದ್ದಾರೆ” ಎಂದರು.

ರಸ್ತೆಗಳ ಅಗಲೀಕರಣ ಮಾಡಿ ಸಮಸ್ಯೆಗಳಿಗೆ ಮುಕ್ತಿ ಹಾಡಬಹುದೇ ಎಂದು ಕೇಳಿದಾಗ, “ರಸ್ತೆ ‌ಅಗಲೀಕರಣಕ್ಕೆ‌‌ ಅಕ್ಕಪಕ್ಕದ ಕಟ್ಟಡಗಳನ್ನು ಒಡೆಯಬೇಕಾಗುತ್ತದೆ. ಇದು ಸಾಕಷ್ಟು ವೆಚ್ಚದಾಯಕ‌.‌

ಈಗ ಮೇಲ್ಸೆತುವೆ ಹಾಗೂ ಟನಲ್‌ ರಸ್ತೆಗಳೇ ಪರಿಹಾರ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸಹ ಹುಡುಕಾಟ ನಡೆಸುತ್ತಿದ್ದೇವೆ. 1 ಲಕ್ಷ‌ ಕೋಟಿಗೂ ಅಧಿಕ ಹಣವನ್ನು ಮೆಟ್ರೋ, ಫೆರಿಫೆರಲ್‌ ರಿಂಗ್‌ ರಸ್ತೆ, ಬೆಂಗಳೂರು ಅಭಿವೃದ್ಧಿಗೆ ನಾವು ಹೂಡಿಕೆ ಮಾಡಿದ್ದೇವೆ” ಎಂದರು.

ಪದೇ,‌ ಪದೇ ಮರಗಳು ಬೀಳುತ್ತಿವೆ ಎನ್ನುವುದರ ಬಗ್ಗೆ ಕೇಳಿದಾಗ, “ಮರ‌ ಪಕೃತಿಯ ಅಂಶ. ಸಡಿಲಗೊಂಡ ಮರ, ಒಣಗಿದ ಕೊಂಬೆಗಳನ್ನು ತೆರವುಗೊಳಿಸಲು ತಂಡವೊಂದು ಪ್ರತಿದಿನ ಕೆಲಸ ಮಾಡುತ್ತಿರುತ್ತದೆ. ಒಂದು ಮರವನ್ನು ಏಕಾಏಕಿ ಕತ್ತರಿಸಲು ಆಗುವುದಿಲ್ಲ. ನಾಳೆ ಯಾವ ರೀತಿ ಗಾಳಿ ಬರುತ್ತದೆ ಎಂಬುದು ಯಾರಿಗೂ ಗೊತ್ತಾಗಲ್ಲ. ಟೀಕೆ ಇದ್ದೇ ಇರುತ್ತವೆ. ನಾವು ಕೇವಲ ಕೆಲಸ ಮಾಡುತ್ತೇವೆ” ಎಂದರು.

ಮಾನ್ಯತಾ ಟೆಕ್‌ ಪಾರ್ಕ್ ಒತ್ತುವರಿ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರಕ್ಕೂ ಎಚ್ಚರಿಕೆ ನೀಡಿದ್ದೆವು. ಈಗ ಅಲ್ಲಿ ಬಗೆದು ನೀರು ಹರಿಯಲು ಅವಕಾಶ ನೀಡಲಾಗಿದೆ.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!