108 ambulances are going missing from Doddaballapur..!

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದಿಂದ ಕಾಣೆಯಾಗುತ್ತಿವೆ 108 ಆಂಬುಲೆನ್ಸ್‌ಗಳು..!

ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಮನವಿ, ಒತ್ತಾಯಕ್ಕೆ ಮಣಿದು ಸಕ್ರಿಯವಾಗಿದ್ದ 108 ಆಂಬುಲೆನ್ಸ್‌ಗಳು (108 ambulances) ಮತ್ತೆ ಸದ್ದಿಲ್ಲದೆ ತಾಲೂಕಿನಿಂದ ಕಾಣೆಯಾಗುತ್ತಿವೆ.

ದೊಡ್ಡಬಳ್ಳಾಪುರ ತಾಲೂಕಿನ ನಗರ, ಘಾಟಿ ಮಧುರೆ, ದೊಡ್ಡಬೆಳವಂಗಲ ಹಾಗೂ ಸಾಸಲು ಹೋಬಳಿಯ ಒಟ್ಟು ಐದು 108 ಆಂಬುಲೆನ್ಸ್ ಕಾರ್ಯ ನಿರ್ವಹಿಸಬೇಕಿತ್ತು. ಆದರೆ ಕಾರ್ಯನಿರ್ವವಹಿಸುತ್ತಿರುವುದು ಮೂರು ಮಾತ್ರ..! ಮತ್ತೆ ಉಳಿದ ಅಂಬುಲೆನ್ಸ್ ಎಲ್ಲಿಗೆ ಹೋದವು..? ಕೇಳೋರ್ ಯಾರು..? ಹೇಳೋರ್ ಯಾರು..? ಎಂಬ ಪ್ರಶ್ನೆ ದೊಡ್ಡಬೆಳವಂಗಲ ಮತ್ತು ಸಾಸಲು ಹೋಬಳಿಯ ಜನರದ್ದಾಗಿದೆ.

ಅಂದು ಕರವೇ ಮುಖಂಡರ ಆಕ್ರೋಶಕ್ಕೆ‌ ಮಣಿದ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಕೂಡಲೇ ಹೆಚ್ಚೆತ್ತು 5 ಆಂಬುಲೆನ್ಸ್‌ಗಳನ್ನು ರಸ್ತೆಗೆ ಇಳಿಸಿತ್ತು. ಆದರೆ ನಂತರ..?

ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕಾದ 108 ಆಂಬುಲೆನ್ಸ್ ಕಾಣೆಯಾಯಿತು. ಬಳಿಕ ಸಾಸಲು ಹೋಬಳಿಯ ಅಂಬುಲೆನ್ಸ್ ದುರಸ್ತಿಯ ಕಾರಣ ಗ್ಯಾರೇಜ್ ಸೇರಿ ಸುಮಾರು ಎರಡು ತಿಂಗಳಿಗೂ ಹೆಚ್ಚುಕಾಲ ಕಳೆದಿದೆ. ಉಳಿದಿರುವುದು ಮೂರು ಆಂಬುಲೆನ್ಸ್ ಮಾತ್ರ. ಅವು ಕೂಡ ತುರ್ತು ಸಂದರ್ಭದಲ್ಲಿ ಬಡವರಿಗೆ ಸೌಲಭ್ಯ ದೊರಕುತ್ತಿಲ್ಲ ಎಂಬ ಅರೋಪ ಜನರದ್ದು.

108 ಆಂಬುಲೆನ್ಸ್ ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತುರ್ತು ಸಂದರ್ಭದಲ್ಲಿ ವರದಾನವಾಗ ಬೇಕಿದ್ದ ಅರೋಗ್ಯ ಸುರಕ್ಷಾ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸಂಪೂರ್ಣವಾಗಿ ಹಳ್ಳಹಿಡಿಯುತ್ತಿದೆ ಎಂಬ ಆಕ್ರೋಶ ಹಲವು ವರ್ಷಗಳಿಂದ ಕೇಳಿಬರುತ್ತಲೇ ಇದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಟೋಲ್‌ ಸಂಗ್ರಹ ಕೇಂದ್ರಗಳಿಂದ ಆವೃತವಾಗಿ, ವಾಹನಗಳು ಟೋಲ್‌ಗಳಲ್ಲಿ ಹಣ ಕಟ್ಟದೇ ದೊಡ್ಡಬಳ್ಳಾಪುರ ತಾಲೂಕಿಗೆ ಬರಲಾಗದ ಪರಿಸ್ಥಿತಿ ಜನರಿಗೆ ನಿರ್ಮಾಣವಾಗಿದೆ.

ಇದರ ಬೆನ್ನಲ್ಲೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಅಪಘಾತ ಪ್ರಕರಣಗಳು ಕೂಡ ತೀವ್ರವಾಗಿದ್ದು, ಗಾಯದ ಮೇಲೆ ಬರೆ ಹೇಳೆದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಖಾಸಗಿ ಆಂಬುಲೆನ್ಸ್ ಹಾವಳಿ ವ್ಯಾಪಕವಾಗಿದ್ದು, ಅಪಘಾತವಲಯಗಳಲ್ಲಿ ಬೆಳಿಗ್ಗೆ 8 ರಿಂದ 11 ಗಂಟೆ ಮತ್ತು ಸಂಜೆ 4 ರಿಂದ 8 ಗಂಟೆಗೆ ಸಮಯದಲ್ಲಿ ಕಾದು ನಿಲ್ಲುತ್ತಿವೆ ಎನ್ನಲಾಗುತ್ತಿವೆ ಎನ್ನಲಾಗುತ್ತಿದೆ.

ದೊಡ್ಡಬಳ್ಳಾಪುರ ತಾಲೂಕಿನ ಕಾರ್ಖಾನೆ ವೃತ್ತ, ರೈಲ್ವೆ ಸ್ಟೇಷನ್ ಸರ್ಕಲ್, ಟಿಬಿ ಸರ್ಕಲ್, ರಾಷ್ಟ್ರೀಯ ಹೆದ್ದಾರಿಯಿಂದ ದೊಡ್ಡಬಳ್ಳಾಪುರಕ್ಕೆ ಸಂಪರ್ಕ ಕಲ್ಪಿಸುವ ಕೊಡಿಗೇಹಳ್ಳಿ ಜಂಕ್ಷನ್, ದಾಬಸ್‌ಪೇಟೆ- ದೇವನಹಳ್ಳಿ ನಡುವಿನ ನಾಗದೇನಹಳ್ಳಿ ಬಳಿ, ಹಿಂದೂಪುರ- ಬೆಂಗಳೂರು ನಡುವಿನ ಗುಂಡಮಗೆರೆ ತಿರುವು, ಮಾಕಳಿ ಬಳಿ ಕಾದು ನಿಂತು ಅಪಘಾತ ಸಂಭವಿಸಿದ ಕೂಡಲೇ ಸರ್ಕಾರಿ 108 ಆಂಬುಲೆನ್ಸ್ ಬರುವ ಮುನ್ನವೇ ಖಾಸಗಿ ಆಸ್ಪತ್ರೆಗೆ ಗಾಯಗೊಂಡವರನ್ನು ದಾಖಲಿಸಲಾಗುತ್ತಿದೆ.

ಇದು ತುರ್ತು ಸಂದರ್ಭದಲ್ಲಿ ಉತ್ತಮ ಕಾರ್ಯವೇ ಆದರೂ, ದೊಡ್ಡಬಳ್ಳಾಪುರದಲ್ಲಿ‌ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ, ಉಚಿತ ಚಿಕಿತ್ಸೆ ದೊರಕುತ್ತಿದ್ದರೂ, ಖಾಸಗಿ ಆಸ್ಪತ್ರೆ ದಾಖಲಿಸಲಾಗುತ್ತಿರುವ ಕಾರಣ, ಅಪಘಾತಕ್ಕೆ ಒಳಗಾದವರ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗಳಿಗೆ ಲಕ್ಷಾಂತರ ರೂ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದೆ ಎಂಬ ಆರೋಪ ವ್ಯಾಪಕವಾಗಿದೆ.

ತುರ್ತು ಸಂದರ್ಭದಲ್ಲಿ 108 ಅಂಬುಲೆನ್ಸ್ ಆದರೆ ಸರ್ಕಾರಿ ಆಸ್ಪತ್ರೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಿಗೆ ಹಿನ್ನಡೆಯಾಗುತ್ತದೆ. ಅದೇ ಖಾಸಗಿ ಆಂಬುಲೆನ್ಸ್ ಆದರೆ ಖಾಸಗಿ ಆಸ್ಪತ್ರೆಗಳಿಗೆ ಲಾಭ ಎಂಬ ದುರುದ್ದೇಶದಿಂದ 108 ಆಂಬುಲೆನ್ಸ್ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಲು ಶಡ್ಯಂತ್ರರೂಪಿಸುತ್ತಿದ್ದಾರೆ ಎಂಬ ಆರೋಪ ಸಂಘಟನೆಗಳ ಮುಖಂಡರದ್ದು.

ಇದೇ ಕಾರಣಕ್ಕೆ 108 ಆಂಬುಲೆನ್ಸ್ ಸೌಲಭ್ಯ ದೊರಕಿಸಲು ಯಾರು ಕ್ರಮಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶಕ್ಕೆ ಕಾರಣವಾಗಿದೆ.

ಕೂಡಲೇ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಜಾಗೃತಗೊಂಡು, ಕಾಣೆಯಾಗಿರುವ 108 ಆಂಬುಲೆನ್ಸ್‌ಗಳನ್ನು ತಾಲೂಕಿಗೆ ತರಿಸಬೇಕು. ಖಾಸಗಿ ಆಂಬುಲೆನ್ಸ್ ನಿಲ್ಲುವ ಸ್ಥಳಗಳಲ್ಲಿ ಸರ್ಕಾರಿ 108 ಆಂಬುಲೆನ್ಸ್ ನಿಲ್ಲುವಂತಹ ವ್ಯವಸ್ಥೆ ಮಾಡಬೇಕು.

ಇಲ್ಲವಾದಲ್ಲಿ ಹೇಳುವುದಿಲ್ಲ, ಹೇಳುವುದಿಲ್ಲ.. ಸಾಕ್ಷಿ ಅಮೇತ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!