ವಿಜಯಪುರ: ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ NH- 50ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 5 ಮಂದಿ ಸಾವಿಗೀಡಾಗಿ, ಮತ್ತೊರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಸಾವನಪ್ಪಿದರೆ, ಅನೇಕರು ಗಾಯಗೊಂಡಿದ್ದಾರೆ.
ಖಾಸಗಿ ಬಸ್, ಕಾರು ಹಾಗೂ ಕಂಟೇನರ್ ನಡುವೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿದ್ದಾರೆ. ಸದ್ಯ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ಮಹೀಂದ್ರ ಬೊಲೆರೋ ಕಾರು ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿ ನಡುವಿನ ಡಿವೈಡರ್ ಹಾರಿ ಮತ್ತೊಂದು ದಿಕ್ಕಿನಿಂದ ಬಳ್ಳಾರಿಗೆ ತೆರಳಲು ಬರುತ್ತಿದ್ದ, ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಇದರಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿ ನಿಂತಿದ್ದ ಕಂಟೇನರ್ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿದ್ದ ಐವರು ಸಾವನಪ್ಪಿದ್ದು, 10 ವರ್ಷದ ಮಗು ಅಪಾಯದಿಂದ ಪಾರಾಗಿದೆ ಎನ್ನಲಾಗಿದೆ. ಇದೇ ಘಟನೆಯಲ್ಲಿ ಖಾಸಗಿ ಬಸ್ ಚಾಲಕ ಸಾವನಪ್ಪಿದ್ದಾರೆ.
ಬಸ್ ನಲ್ಲಿದ್ದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ.
ಬಸ್ ಡಿಕ್ಕಿ ಹೊಡೆದ ಪರಿಣಾಮ, ಕ್ಯಾಂಟರ್ ಪಲ್ಡಿಯಾಗಿದೆ.