Criticism dies, work remains: DCM DK Shivakumar

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ? ಪೂಜೆಯನ್ನು ಬಿಜೆಪಿಯವರು ಮಾತ್ರ ಮಾಡುವುದೇ? ನೀರಿಗೆ, ಗಾಳಿಗೆ, ಬೆಳಕಿಗೆ ಜಾತಿ ಇದೆಯೇ?” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

“ನಾವು ಏನೇ ಮಾಡಿದರೂ ಬಿಜೆಪಿಯವರು ಟೀಕೆ ಮಾಡುತ್ತಾರೆ. ಕೆಆರ್ ಎಸ್ ಬಳಿ ಕಾವೇರಿ ಆರತಿ ಕಾರ್ಕ್ರಮ ಮಾಡಲು ಮುಂದಾಗಿದ್ದೇವೆ. ಇದಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ಮಾಡಲಾಯಿತು. ಸುಮಾರು 25 ಸಾವಿರ ಜನರು ಭಾಗವಹಿಸಿದ್ದರು. ಸ್ಥಳೀಯ ಶಾಸಕರು ಇದನ್ನು ನೋಡಿ ಗಾಬರಿಯಾಗಿದ್ದರು.

ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ರೈತ ಸಂಘದವರು ಟೀಕೆ ಮಾಡುತ್ತಿದ್ದಾರೆ. ಅವರನ್ನು ಕರೆದು ಮಾತನಾಡಲಾಗುವುದು. ಟೀಕೆಗಳನ್ನು ಯಾರೂ ನಿಲ್ಲಿಸಲು ಸಾಧ್ಯವಿಲ್ಲ, ಟೀಕೆಗಳಿಲ್ಲದೇ ಯಾವುದೇ ಕೆಲಸಗಳು ಆಗುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಸಮಾಜವನ್ನು ತೆಗೆದುಕೊಂಡು ಹೋಗಲಾಗುವುದು” ಎಂದರು.

ರಾಜೀವ್ ಗಾಂಧಿಯವರ ಹತ್ಯೆಯಿಂದ ದೇಶಕ್ಕೆ ದೊಡ್ಡ ನಷ್ಟ

“ರಾಜೀವ್ ಗಾಂಧಿ ಅವರ ಹತ್ಯೆಯಿಂದ ಸ್ತ್ರೀ ಶಕ್ತಿಗೆ, ಯುವ ಪೀಳಿಗೆ ಹಾಗೂ ಇಡೀ ದೇಶಕ್ಕೆ ದೊಡ್ಡ ನಷ್ಟವಾಗಿದೆ. ರಾಜೀವ್ ಗಾಂಧಿ ಅವರ ಬಗ್ಗೆ ಇಡೀ ಪ್ರಪಂಚದಲ್ಲಿಯೇ ಸಾಕಷ್ಟು ಒಲವಿತ್ತು. ಅವರನ್ನು ಇತರೇ ರಾಷ್ಟ್ರಗಳು ಅತ್ಯಂತ ಗೌರವದಿಂದ ನೋಡುತ್ತಿದ್ದರು. ಅಷ್ಟರ ಮಟ್ಟಿಗೆ ಅವರು ತಮ್ಮ ಆಧುನಿಕ ಚಿಂತನೆಗಳಿಂದ ಪ್ರಭಾವ ಬೀರಿದ್ದರು.

ಇವರಿಂದ 18 ವರ್ಷಕ್ಕೆ ಮತದಾನದ ಹಕ್ಕು ದೊರೆಯಿತು, ಮಹಿಳೆಯರಿಗೆ ಸ್ಥಳೀಯ ಸಂಸ್ಥೆಯಲ್ಲಿ ಶೇ. 50 ರಷ್ಟು ಮೀಸಲಾತಿ ನೀಡಿದರು. ಪಕ್ಷಾಂತರ ವಿರೋಧಿ ಕಾಯ್ದೆಗೆ ಕಾನೂನು ತಂದರು. ದೆಹಲಿಗೆ ರಾಜ್ಯದ ಸ್ಥಾನಮಾನ ನೀಡಿದರು. ಹೀಗೆ ಹಲವಾರು ಕ್ರಾಂತಿಕಾರಕ ಬದಲಾವಣೆಗಳನ್ನು ಜಾರಿಗೆ ತಂದವರು ರಾಜೀವ್ ಗಾಂಧಿ” ಎಂದು ಹೇಳಿದರು.

“ಮೊದಲು ಒಂದು ಲ್ಯಾಂಡ್ ಲೈನ್ ಫೋನ್ ಸಂಪರ್ಕ ಪಡೆದುಕೊಳ್ಳಲು ಸಂಸದರಿಂದ ಪತ್ರ ಪಡೆಯಬೇಕಿತ್ತು. ʼಯುವ ಕಾಂಗ್ರೆಸ್ ಅಧ್ಯಕ್ಷನಾದ ನಿನ್ನನು ಹೇಗೆ ಸಂಪರ್ಕಿಸುವುದುʼ ಎಂದು ಹೇಳಿ ಜಾಫರ್ ಷರೀಫ್ ಅವರು ನನಗೆ ಫೋನ್ ಸಂಪರ್ಕ ಕೊಡಿಸಿದರು.

ಸೆಲ್ ಫೋನ್ ತಂತ್ರಜ್ಞಾನ ಭಾರತಕ್ಕೆ ಬರಲು ರಾಜೀವ್ ಗಾಂಧಿ ಅವರು ಹಾಗೂ ಅವರಿಗೆ ಸಲಹೆಗಾರರಾಗಿದ್ದ ಸ್ಯಾಮ್ ಪಿತ್ರೋಡ ಅವರು ಕಾರಣ” ಎಂದರು.

ಕಾವೇರಿ ಗಲಭೆ ವೇಳೆ ಎನ್ ಪಿಎಸ್ ಶಾಲೆಯಲ್ಲಿದ್ದ ಕಂಪ್ಯೂಟರ್ ಗಳನ್ನು ಸುಟ್ಟು ಹಾಕಲಾಯಿತು. ಆಗ 1.50 ಲಕ್ಷ ಬೆಲೆ ಬಾಳುತ್ತಿತ್ತು. ಈಗ 15- 20 ಸಾವಿರಕ್ಕೆಲ್ಲ ದೊರೆಯುತ್ತಿದೆ. ಐಟಿ ಕ್ರಾಂತಿಗೆ ನಾಂದಿ ಹಾಡಿದ ಆಧುನಿಕತೆಯ ಹರಿಕಾರ ರಾಜೀವ್ ಗಾಂಧಿ” ಎಂದು ಬಣ್ಣಿಸಿದರು.

“ನನ್ನನ್ನು ಚನ್ನಪಟ್ಟಣದಿಂದ ಬೆಂಗಳೂರಿನ ತನಕ ಕಾರಿನಲ್ಲಿ ಜೊತೆಯಾಗಿ ಕರೆದುಕೊಂಡು ಬಂದ ರಾಜೀವ್ ಗಾಂಧಿ ಅವರು ರಾಜ್ಯದ ಪರಿಸ್ಥಿತಿಯ ಬಗ್ಗೆ ಅವಲೋಕಿಸಿದರು. ನನ್ನ ಬಳಿ ಚರ್ಚೆ ಮಾಡಿದರು. ಅಂದು ರಾತ್ರಿ ಏನು ಮಾತುಕತೆಯಾಯಿತು ಎಂದು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ವಿರೇಂದ್ರ ಪಾಟೀಲ್ ಅವರು ಅಂದು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು ಆದರೆ ಅವರ ಆರೋಗ್ಯ ಪರಿಸ್ಥಿತಿ ಚೆನ್ನಾಗಿರಲಿಲ್ಲ. ಇದನ್ನು ಗಮನಿಸಿದ ಅವರು ಮರಳಿ ಹೋಗುವಾಗ ವಿಮಾನ ನಿಲ್ದಾಣದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ತಿಳಿಸಿದರು” ಎಂದರು.

“ಮುಖ್ಯಮಂತ್ರಿ ಸ್ಥಾನ ಬದಲಾವಣೆ ನಂತರ ಒಂದಷ್ಟು ಗಲಾಟೆಗಳು ನಡೆಯಿತು. ಈ ವೇಳೆ ರಾಜೀವ್ ಗಾಂಧಿ ಅವರು ಹೈದರಾಬಾದ್ ಗೆ ತೆರಳಿದರು. ನಾನು, ರಮೇಶ್, ಗುತ್ತೇದಾರ್, ಬಂಗಾರಪ್ಪ ಅವರು ಹೈದರಾಬಾದ್ ಗೆ ತೆರಳಿದವು.

ನಾನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದೆ. ಅಂದು ಬಂಗಾರಪ್ಪ ಅವರಿಗೆ ರಾಜೀವ್ ಗಾಂಧಿ ಅವರು ಸೂಚನೆ ನೀಡಿದರು. ʼಎಲ್ಲಾ ಜಾತಿಯ ಯುವಕರನ್ನು ಗುರುತಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಗೆ ಇಬ್ಬರು ಆದರೂ ಚಿಂತೆ ಮಾಡಬೇಡಿʼ ಎಂದು ತಿಳಿಸಿದರು.

ಈ ಕಾರಣಕ್ಕೆ ನಮಗೆಲ್ಲ ಮೊದಲ ಬಾರಿಗೆ ಅವಕಾಶ ಸಿಕ್ಕಿತು. ಮೊಟ್ಟ ಮೊದಲ ಬಾರಿಗೆ ಬಿ.ಕೆ.ಹರಿಪ್ರಸಾದ್ ಅವರಿಗೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನ ನೀಡಿದರು. ರಾಜ್ಯದಿಂದ ವಿರೋಧವಿದ್ದರು ರಾಜ್ಯಸಭೆಗೆ ಇವರನ್ನು ಆಯ್ಕೆ ಮಾಡಿದರು” ಎಂದರು.

“ಭಯೋತ್ಪಾದನೆಯಿಂದ ನಮ್ಮ ನಾಗರಿಕರು ಮರಣ ಹೊಂದಿದರು. ಅದಾದ ನಂತರ ನಮ್ಮ ಸೇನಾಪಡೆಗಳು ತಕ್ಕ ಉತ್ತರ ನೀಡಿದರು. ಆಗ ನಿಮ್ಮೆಲ್ಲರ ಬೆಂಬಲದಿಂದ ತಿರಂಗಾ ಯಾತ್ರೆ ನಡೆಸಲಾಯಿತು. ನಮ್ಮ ಪದಾಧಿಕಾರಿಗಳು, ನಾಯಕರು ಬೆಂಗಳೂರಿಗೆ ಗೌರವ ತರುವ ರೀತಿಯಲ್ಲಿ ಯಾತ್ರೆ ಆಯೋಜಿಸಲಾಯಿತು. ರಾಹುಲ್ ಗಾಂಧಿ ಅವರು ಸಹ ಬೆಂಗಳೂರಿನಲ್ಲಿ ಅತ್ಯುತ್ತಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು” ಎಂದು ಹೇಳಿದರು.

“ಕೇವಲ ನಾನು, ಜಮೀರ್ ಅಹಮದ್, ಕೃಷ್ಣಬೈರೇಗೌಡ ಅವರು ಸೇರಿ ಸರ್ಕಾರದ ಎರಡು ವರ್ಷದ ಸಂಭ್ರಮ ಮಾಡಿಲ್ಲ. ರಾಜ್ಯದ ಎಲ್ಲಾ ಕಾರ್ಯಕರ್ತರು, ಶಾಸಕರು, ಮಂತ್ರಿಗಳು ಸೇರಿ ಮಾಡಿದ ಸಂಭ್ರಮ. ಈ ಎರಡು ವರ್ಷದ ಯಶಸ್ಸಿನಲ್ಲಿ ಪಕ್ಷದ ಎಲ್ಲರ ಪಾತ್ರವಿದೆ” ಎಂದು ಹೇಳಿದರು.

ಗ್ಯಾರಂಟಿ ಸಮಿತಿಗಳಿಂದ ಪಟ್ಟಾ ಖಾತೆ ಹಂಚಿಕೆ

“ಮುಂದಿನ ದಿನಗಳಲ್ಲಿ ಪಟ್ಟಾ ಖಾತೆ ಹಂಚಿಕೆಯನ್ನು ಅಧಿಕಾರಿಗಳು ಹಂಚಿಕೆ ಮಾಡುವುದಿಲ್ಲ. ಬದಲಾಗಿ ಪ್ರತಿ ಕ್ಷೇತ್ರದ ಗ್ಯಾರಂಟಿ ಸಮಿತಿಯ ಸದಸ್ಯರು ಜನರಿಗೆ ಖಾತೆಗಳನ್ನು ಹಂಚಿಕೆ ಮಾಡುತ್ತಿದ್ದಾರೆ. ಬೆಂಗಳೂರು ನಗರದಲ್ಲಿಯೂ ಇ- ಸ್ವತ್ತು ಖಾತೆಗಳ ಡಿಜೀಟಲೀಕರಣ ಮಾಡಲಾಗುತ್ತಿದೆ.

ಇಲ್ಲಿಯೂ ಅದೇ ರೀತಿ ಹಂಚಿಕೆ ಮಾಡಲಾಗುವುದು. ಬಿಬಿಎಂಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಈಗ ಗ್ರೇಟರ್ ಬೆಂಗಳೂರು ಜಾರಿಗೆ ಬಂದಿದೆ. ಶೀಘ್ರದಲ್ಲಿಯೇ ಚುನಾವಣೆ ನಡೆಯಲಿದೆ. ಮುಂದಕ್ಕೆ ಶಾಸಕರಾಗಬೇಕು ಎನ್ನುವ ಆಲೋಚನೆ ಇದ್ದವರು ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಬೇಕು” ಎಂದರು.

“ಭಯೋತ್ಪಾದಕ ದಾಳಿ ಬಗ್ಗೆ ಚರ್ಚೆ ನಡೆಯುತ್ತಿವೆ. ಬಿ.ಕೆ.ಹರಿಪ್ರಸಾದ್ ಅವರು ಹೇಳುವಂತೆ ಲೈನ್ ಆಫ್ ಕಂಟ್ರೋಲ್ ಇಂದ ಪೆಹಲ್ಗಾಮ್ ಗೆ ಬರುವುದಕ್ಕೆ ಬರುವುದಕ್ಕೆ ಹತ್ತು ದಿನವಾಗುತ್ತದೆ ಎಂದು ಹೇಳಲಾಗುತ್ತದೆ. ಇದೆಲ್ಲಾ ನಡೆದಿದ್ದು ನಿಜವೇ ಎಂದು ನಾವು ಅಧ್ಯಯನ ಮಾಡಬೇಕಿದೆ. ನಮಗೆ ಪಕ್ಷಕ್ಕಿಂತ ದೇಶ ಮುಖ್ಯ. ಇದರ ಬಗ್ಗೆ ನೀವು ನಾವು ತಿಳಿದುಕೊಳ್ಳಬೇಕಿದೆ” ಎಂದರು.

ಮಾಧ್ಯಮ ಪ್ರತಿಕ್ರಿಯೆ

ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮ ಹಾಗೂ ನಂತರ ಮಾಧ್ಯಮಗಳಿಗೆ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು.

ಜಿ. ಪರಮೇಶ್ವರ್ ಅವರ ಸಂಸ್ಥೆಗಳ ಮೇಲೆ ಇಡಿ ದಾಳಿ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನಾನು ಮಾಹಿತಿ ಪಡೆದು ಮಾತನಾಡುತ್ತೇನೆ. ಪರಮೇಶ್ವರ್ ಅವರು ಅತ್ಯಂತ ಸರಳ ವ್ಯಕ್ತಿ. ಅವರು ಯಾವುದೇ ತಪ್ಪು ಮಾಡಿರಲು ಸಾಧ್ಯವಿಲ್ಲ.” ಎಂದರು.

ಬೆಂಗಳೂರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದನ್ನು ಬಿಜೆಪಿ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಅವರ ಕಾಲದಲ್ಲಿ ಆಗಿರುವ ತಪ್ಪುಗಳನ್ನು ನಾವು ಸರಿ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ರಾಜಕೀಯ

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಕೇಂದ್ರ ಸರ್ಕಾರದ ಫಾರಿನ್ ಪಾಲಿಸಿ ಫೇಲ್ ಆಗಿದ್ದು ಬಿಜೆಪಿಗರು ಒಳಗೊಳಗೆ ಪ್ರಧಾನಮಂತ್ರಿ ಬದಲಾಗಬೇಕೆಂದು ಮಾತಾಡುತ್ತಿದ್ದಾರೆ; ಸಚಿವ ಸಂತೋಷ್ ಲಾಡ್ (Santhosh Lad)

[ccc_my_favorite_select_button post_id="110374"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!