ಬೆಂಗಳೂರು: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ಡಿಜಿ-ಐಜಿಪಿ ಪ್ರಶಂಸೆ ಪದಕ 2024-25ನೇ ಸಾಲಿನ ಪ್ರಶಸ್ತಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ (Rao Ganesh Janardhan) ಭಾಜನರಾಗಿದ್ದಾರೆ.
ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಇಂದು ಸೇವೆಯಿಂದ ನಿವೃತ್ತರಾಗುತ್ತಿದ್ದು, ಇಂದು ಬೆಳಿಗ್ಗೆ ಅವರಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿತ್ತು.
ಕೋರಮಂಗಲದ ಕೆಎಸ್ಆರ್‌ಪಿ ಪೆರೆಡ್ ಗ್ರೌಂಡ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ DG&IGP ಅಲೋಕ್ ಮೋಹನ್ ಅವರು ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರಿಗೆ ಪದಕ ನೀಡಿದರು.

ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್ ಇಲಾಖೆಯ ಸಾಧಕರಿಗೆ ಪ್ರಶಂಸಿಸುವ ಕಾರ್ಯ ಮಾಡಲಾಗುತ್ತಿದೆ.
ಇದೇ ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸನಾ ಡಿಸ್ಕ್ 2024-25″ ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಈ ಪಟ್ಟಿಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಭಾಜನರಾಗಿದ್ದಾರೆ.
ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರಿಗೆ ಪದಕ ದೊರೆತಿರುವ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆ ಮುಖಪುಟದಲ್ಲಿ ಪ್ರಕಟಿಸಲಾಗಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಉತ್ತಮ ಕಾರ್ಯದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (DG&IGP)ರ ಹೆಸರಿನಲ್ಲಿ ಕರ್ನಾಟಕದಲ್ಲಿ ಈ ವರ್ಷದಿಂದ ಪ್ರಶಂಸೆ ಸೇವಾ ಪದಕ ನೀಡಲಾಗುತ್ತಿದೆ.