Railways play a big role in making India developed: Basavaraja Bommai

ವಿಕಸಿತ ಭಾರತ ಮಾಡಲು ರೈಲ್ವೆ ಪಾತ್ರ ದೊಡ್ಡದು: ಬಸವರಾಜ ಬೊಮ್ಮಾಯಿ

ಗದಗ: ಭಾರತವನ್ನು ವಿಕಸಿತ ಭಾರತ ಮಾಡುವಲ್ಲಿ ರೈಲ್ವೆ ಪಾತ್ರ ದೊಡ್ಡದು ಅದನ್ನು ಅರಿತು ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ರೈಲು ಮತ್ತು ರಸ್ತೆ ಅಭಿವೃದ್ಧಿ ಮಾಡುತ್ತಿರುವುದು ಶ್ಲಾಘನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ.

ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಏರ್ಪಡಿಸಿದ್ದ ಅಮೃತ ಯೋಜನೆ ಅಡಿಯಲ್ಲಿ ನವಿಕರಣಗೊಂಡಿರುವ ಗದಗ ರೈಲ್ವೆ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಡಿಯೊ ಕಾನ್ಪರೆನ್ಸ್ ಮೂಲಕ ಪಾಲ್ಗೊಂಡು ಅವರು ಮಾತನಾಡಿದರು.

ಐತಿಹಾಸಿಕ ಗದಗಿನ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಸುಮಾರು 23 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿದ್ದು ಸಂತಸ ಸಂಭ್ರಮ ತಂದಿದೆ.

ಗದಗ ಐತಿಹಾಸಿಕ ನಾಡು ಪುಣ್ಯಾಶ್ರಮ, ಕುಮರವ್ಯಾಸರ ನಾಡು, ಮುದ್ರಣ ಕಾಶಿಯಾಗಿ ಪ್ರಸಿದ್ದಿ ಪಡೆದಿದೆ. ಬೆಟಗೇರಿ ಕೈಮಗ್ಗಗಳಿಗೆ ಪ್ರಸಿದ್ದಿಯಾಗಿದೆ. ಕೈಗಾರಿಕೆ, ವಾಣಿಜ್ಯ ಮತ್ತು ಪ್ರವಾಸೋದ್ಯಮಕ್ಕೆ ಬಹಳ ದೊಡ್ಡ ಇಂಬು ಕೊಡುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಿದ್ದು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು.

ಗದಗನಿಂದ ಹುಬ್ಬಳ್ಳಿಗೆ 1884 ರಲ್ಲಿ ಮೊದಲ ರೈಲು ಆರಂಭದವಾಗಿದೆ.‌ ಸುದೀರ್ಘವಾದ ಪ್ರಯಾಣ ಈ ನಿಲ್ದಾಣ ಮಾಡಿದೆ. ಈ ರೈಲ್ವೆ ನಿಲ್ದಾಣದಿಂದ ಪ್ರತಿ ದಿನ 5000 ಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಾರೆ.

ಈ ನಿಲ್ದಾಣವನ್ನು ಅಮೃತ್ ಯೋಜನೆ ಅಡಿಯಲ್ಲಿ ಎಸ್ಕಲೇಟರ್, ಲಿಪ್ಟ್, ಓವರ್ ಬ್ರಿಡ್ಜ್, ಫುಟ್ ಓವರ್ ಬ್ರಿಡ್ಜ್, ಶೌಚಾಲಯ, ಪ್ರಯಾಣಿಕರಿಗೆ ಎಲ್ಲ ರೀತಿಯ ಸವಲತ್ತು ನೀಡಲಾಗುತ್ತಿದೆ ಎಂದರು.

ಗದಗ ವಾಡಿ ರೈಲ್ವೆ ಲೈನ್ ಯೋಜನೆ ನಡೆಯುತ್ತಿದೆ. ಅದು ಪೂರ್ಣವಾದರೆ ಹೈದರಾಬಾದ್ ಸಂಪರ್ಕ ಅನುಕೂಲವಾಗಲಿದೆ. ಇನ್ನೊಂದು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಒತ್ತಾಸೆಯಿಂದ ಗದಗ ಯಲವಿಗೆವರೆಗೆ ಹೊಸ ಮಾರ್ಗ ಅನುಮೋದನೆಯಾಗಿದೆ.

ಈ ಸಂಪರ್ಕ ಜೊಡಣೆಯಾದರೆ ಹಾವೇರಿ, ಗದಗ ಮೂಲಕ ಹೈದರಾಬಾದ್ ಹೋಗಲು ಅನುಕೂಲವಾಗಲಿದೆ. ನರೇಂದ್ರ ಮೋದಿ ಸರ್ಕಾರ ರೈಲ್ವೆ ಇಲಾಖೆಯಲ್ಲಿ ಬ್ರಾಡ್ಗೇಜ್, ಡಬಲ್ ಗೇಜ್, ಎಲೆಕ್ಟ್ರಿಪಿಕೇಶನ್ ಮತ್ತು ಸಿಗ್ನಲ್ ಗಳನ್ನು ಆಧುನಿಕರಣ ಮಾಡಿ ಅತಿ ವೇಗದ ಸುಮಾರು 500 ಕ್ಕೂ ಹೆಚ್ಚು ವಂದೇ ಭಾರತ ರೈಲುಗಳು ದೇಶದಲ್ಲಿ ಸಂಚರಿಸುವ ಮೂಲಕ ರೈಲ್ವೆಯಲ್ಲಿ ದೊಡ್ಡ ಕ್ರಾಂತಿಯಾಗುತ್ತಿದೆ.

ಇದನ್ನು ಜನಾನುರಾಗಿ ಮಾಡುವುದು, ವಾಣಿಜ್ಯಾಭಿವೃದ್ದಿ ಮಾಡುವುದು, ನಮ್ಮ ಭಾರತವನ್ನು ವಿಕಸಿತ ಭಾರತ ಮಾಡುವಲ್ಲಿ ರೈಲ್ವೆ ಪ್ರಮುಖ ಪಾತ್ರ ವಹಿಸುತ್ತದೆ. ಇದನ್ಮು ಅರಿತು ರೈಲ್ವೆ ಮತ್ತು ರಸ್ತೆಗಳ ಅಭಿವೃದ್ಧಿ ಮಾಡುತ್ತಿರುವುದು ಶ್ಲಾಘನೀಯ.

ಇಷ್ಟೆಲ್ಲ ಅಭಿವೃದ್ಧಿ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ತುಂಬು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!