ಗೋಲ್ಡ್ ಸ್ಮಗ್ಲಿಂಗ್ ಕೇಸ್: ಡಿಕೆ ಶಿವಕುಮಾರ್ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ

Enough with the hit and run, put the documents against me before the people: DK Shivakumar challenges H.D. Kumaraswamy

ನವದೆಹಲಿ: ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹ ಸಚಿವ ಡಾ.ಜಿ. ಪರಮೇಶ್ವರ (Dr.G.Parameshwara) ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ನೇರ ಆರೋಪ ಮಾಡಿದರು.

ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ದಲಿತ, ಹಿಂದುಳಿದ ವರ್ಗಗದ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಸಚಿವ ಪರಮೇಶ್ವರ್ ಅವರು ಇಂಥ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್ ಪಕ್ಷದ ಆ ಪ್ರಭಾವೀ ನಾಯಕನೇ ಕಾರಣ‌ ಎಂದು ನೇರ ಆರೋಪ ಮಾಡಿದರು.

ಸಚಿವ ರಾಜಣ್ಣ ವಿಧಾನಸಭೆಯಲ್ಲಿ ಹೇಳಿದರಲ್ಲ, ರಾಜ್ಯದಲ್ಲಿ ಸಿಡಿ, ಪೆನ್ ಡ್ರೈವ್ ಫ್ಯಾಕ್ಟರಿ ಇಟ್ಟುಕೊಂಡಿರುವ ಪ್ರಭಾವೀ ನಾಯಕನ ಬಗ್ಗೆ ನೇರವಾಗಿ ಹೇಳಿದ್ದರು ಅವರು. ಅವರು ಹೇಳಿದ್ದ ನಾಯಕನೇ ಇವತ್ತು ಪರಮೇಶ್ವರ್ ಅವರನ್ನು ಮುಗಿಸಲು ಹೊರಟಿದ್ದಾನೆ.

ಪರಮೇಶ್ವರ್ ಅವರು ದಲಿತ ನಾಯಕರ ಸಭೆ ಮಾಡಲು ಹೊರಟಿದ್ದು, ದೆಹಲಿ ನಾಯಕರನ್ನು ಭೇಟಿ ಮಾಡಿದ್ದೇ ಅವರ ವಿರುದ್ಧ ಕುತಂತ್ರ ನಡೆಯಲು ಕಾರಣ ಎಂದು ಕೇಂದ್ರ ಸಚಿವರು ದೂರಿದರು.

ರಾಜ್ಯದಲ್ಲಿ ಏನೇನಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೇಲಾಗಿ ಕಾಂಗ್ರೆಸ್ ಪಕ್ಷದಲ್ಲಿ ಯಾರು ಯಾರಿಗೆ ಗುನ್ನ ಹೊಡೆಯುತ್ತಿದ್ದಾರೆ ಎನ್ನುವ ಮಾಹಿತಿಯೂ ಎಲ್ಲರಿಗೂ ತಿಳಿದಿದೆ.

ದುಬೈನಿಂದ ಸಿಕ್ಕಿಬಿದ್ದಿರುವ ಆ ಮಹಿಳೆ ಚಿನ್ನ ತರುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಸೋರಿಕೆ ಮಾಡಿದ್ದೇ ಈ ಪ್ರಭಾವೀ ನಾಯಕ. ಆಕೆ ದುಬೈನಿಂದ ಚಿನ್ನ ಸ್ಮಗ್ಲಿಂಗ್ ಮಾಡುತ್ತಿದ್ದಾಳೆ ಎನ್ನುವ ವಿಚಾರ ಈ ಪ್ರಭಾವೀ ನಾಯಕನಿಗೆ ಹೇಗೆ ಗೊತ್ತು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಅವರ ಬಳಿಯೇ ಗುಪ್ತಚರ ವಿಭಾಗ ಇದೆಯಲ್ಲ. ಅವರಿಗೆ ಈ ವಿಷಯ ಗೊತ್ತಿಲ್ಲವೇ? ಆ ಮಹಿಳೆ ವಿಮಾನ ನಿಲ್ದಾಣದ ಮೂಲಕ ಚಿನ್ನ ತರುತ್ತಿರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷದ ಈ ಪ್ರಭಾವಿ ನಾಯಕ.

ಈ ವಿಷಯ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿಲ್ಲವೇ? ಸಚಿವ ಪರಮೇಶ್ವರ್ ಅವರು ದಲಿತರ ಸಮಾವೇಶ ಮಾಡಲು ಹೊರಟರು. ತಾವು ಕೂಡ ಸಿಎಂ ಪದವಿಯ ಆಕಾಂಕ್ಷಿ ಎಂದು ಹೇಳಿದರು. ತಮ್ಮ ದಾರಿಗೆ ಅಡ್ಡ ಬರುತ್ತಾರೆ ಎಂದು ಕಾಂಗ್ರೆಸ್ ಪ್ರಭಾವೀ ನಾಯಕನೇ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಕುತಂತ್ರ ಹೂಡಿದರು. ಇಷ್ಟೆಲ್ಲಾ ಗಂಭೀರ ವಿಚಾರಗಳು ಸಿಎಂಗೆ ಗೊತ್ತಿಲವೆಂದರೆ ಹೇಗೆ? ಸಿದ್ದರಾಮಯ್ಯ ಅವರನ್ನು ಇಳಿಸಿ ನಾನು ಸಿಎಂ ಆಗಬೇಕು ಎಂದು ಕುರ್ಚಿಯ ಮೇಲೆ ಟವೆಲ್ ಹಾಕಿಕೊಂಡು ಕೂತಿರುವವರೆ ಚಿನ್ನದ ರಹಸ್ಯ ಬಹಿರಂಗ ಮಾಡಿದ್ದಾರೆ ಎಂಬ ಸ್ಫೋಟಕ ಅಂಶಗಳನ್ನು ವಿಷಯವನ್ನು ಕುಮಾರಸ್ವಾಮಿ ಅವರು ಬಹಿರಂಗಪಡಿಸಿದರು.

ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ಇಷ್ಟೆಲ್ಲಾ ರಾಜಕೀಯ ಮೇಲಾಟ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ವ್ಯರ್ಥ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಪ್ರಭಾವೀ ನಾಯಕನಿಂದಲೇ ಇದೆಲ್ಲಾ ನಡೆದಿದೆ.

ಅದೆಷ್ಟೋ ಎಸ್ ಐಟಿ, ಕಮಿಟಿ, ಸಮಿತಿ ಎಲ್ಲಾ ಮಾಡಿದ್ದಿರಲ್ಲ? ಅವೆಲ್ಲವೂ ಏನಾದವು? ಬಾಯಿ ಬಿಟ್ಟರೆ ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತಾರೆ. ಆದರೆ, ನುಡಿದಂತೆ ನಡೆಯಲು ಎಷ್ಟು ತೆರಿಗೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]