ಇ.ಡಿ ಹಾಗೂ ಐ.ಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು.

ಇ.ಡಿ ಹಾಗೂ ಐ.ಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು

ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು.

ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು.

ಒಂದು ವರ್ಷದಿಂದ ಅಪರಾಧ ಪ್ರಕರಣಗಳು ಕಡಿಮೆಯಿದೆ

ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತದೆ. ಆದರೆ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ ಎಂದರು.

ಕೇಂದ್ರ ಸರ್ಕಾರ ಕೋವಿಡ್ ಎಚ್ಚರಿಕಾ ಕ್ರಮ ತೆಗೆದುಕೊಳ್ಳಲಿ

ಸಿಂಗಾಪುರ , ಹಾಂಕಾಂಗ್ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸುವವರ ಕೋವಿಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದೇ, ಇಲ್ಲಿಯೂ ಕೋವಿಡ್ ಪ್ರಕರಣಗಳು ಹೆಚ್ಚುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದರು.

ದೇಣಿಗೆ ನೀಡುವುದು ತಪ್ಪಲ್ಲ

ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿರುವ ಬಗ್ಗೆ ಡಿಸಿಎಂ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ರವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಮಾತನಾಡಿ, ಯಾವುದೇ ಸಂಸ್ಥೆಗೆ ದೇಣಿಗೆ ನೀಡುವುದು ತಪ್ಪಲ್ಲ ಎಂದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]