ಹೈದರಾಬಾದ್: ಓದ್ಯಾ ಪಿಸಾಚಿ ಅಂದ್ರೆ, ಬಂದೆ ಗವಾಕ್ಷಿಲಿ ಎಂಬಙತೆಯ, ದೇಶದಲ್ಲಿ ಮತ್ತೆ ಕೋವಿಡ್ (Covid) ಪ್ರಕರಣಗಳು ಹೆಚ್ಚಳವಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಂಧ್ರಪ್ರದೇಶ ಸರಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ.
ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಸೂಕ್ಷ್ಮ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.
ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ಗುರುವಾರ ಒಂದೇ ದಿನ 19 ಪಾಸಿಟಿವ್ ಕೇಸ್ ದಾಖಲಾಗಿವೆ. ಗುಜರಾತ್ ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಕೇರಳ ರಾಜ್ಯವೊಂದರಲ್ಲೇ 186 ಕೇಸ್ ಇದ್ದು, 95 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ 33 ಕೇಸ್ ದಾಖಲಾಗಿದ್ದು ಈ ಪೈಕಿ 16 ಸಕ್ರಿಯ ಪ್ರಕರಣಗಳಾಗಿವೆ.
ಬೆಂಗೂರಲ್ಲಿ 32 ಪ್ರಕರಣ
ರಾಜ್ಯದಲ್ಲಿಯೂ ಕೂಡ ಕೋವಿಡ್ ಕೇಸ್‌ಗಳ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಈ ಪೈಕಿ ಬೆಂಗಳೂರಿನಲ್ಲೇ 32 ಸಕ್ರಿಯ ಪ್ರಕರಣಗಳು ದಾಖಲಾಗಿವೆ.
ವಾಣಿ ವಿಲಾಸ ಆಸ್ಪತ್ರೆಯಲ್ಲಿ 9 ತಿಂಗಳ ಮಗುವಿಗೆ ಕರೋನಾ ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆಗೊಳಿಸಿದೆ.