ಕೋವಿಡ್ ಹೆಚ್ಚಳ.. ಮಾಸ್ಕ್ ಧರಿಸಿ ಕಾರ್ಯಕ್ರಮಕ್ಕೆ ಬಂದ ಸಿಎಂ ಸಿದ್ದರಾಮಯ್ಯ

Covid cases increase.. CM Siddaramaiah came to the event wearing a mask

ಮೈಸೂರು: ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಕೋವಿಡ್ (Covid) ಮಹಾಮಾರಿಯ ಆತಂಕ ಹೆಚ್ಚಾಗಿದೆ. ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ.

ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಲ್ಲೆ ಒಟ್ಟು 35 ಕೊರೊನಾ ಪ್ರಕರಣಗಳು (Corona Case) ದಾಖಲಾಗುತ್ತಿದೆ. ಇದರಲ್ಲಿ 32 ಪ್ರಕರಣಗಳು ಬೆಂಗಳೂರಿನಲ್ಲಿ (Bengaluru) ಪತ್ತೆಯಾಗಿದ್ದು, ಇಂದು ಕೂಡಾ ಸೋಂಕಿತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ “ಬಸವ ಜಯಂತಿ-2025 ನಮ್ಮ ನಡೆ ಅನುಭವ ಮಂಟಪದ ಕಡೆ” ಕಾರ್ಯಕ್ರಮ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಮಾಸ್ಕ್ ಧರಿಸಿ ಭಾಗವಹಿಸಿದ್ದರು..

ಈ ವೇಳೆ ಮಾತನಾಡಿದ ಅವರು, ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದು ವಿವರಿಸಿದರು.

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ವಿವರಿಸಿದರು.

ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ‌ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು ಎಂದರು.

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಉಯ್ಯುವ ಶಿಕ್ಷೆ ಇದ್ದಿದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು.

ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ ಎಂದು ವಿವರಿಸಿದರು.

ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ‌ ಅನುದಾನವನ್ನು ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]