Doddaballapura: Artists demand change in Pension rules

ದೊಡ್ಡಬಳ್ಳಾಪುರ: ಮಾಸಾಶನ ನಿಯಮ ಮಾರ್ಪಾಡಿಗೆ ಕಲಾವಿದರ ಒತ್ತಾಯ

ದೊಡ್ಡಬಳ್ಳಾಪುರ: ಕಲಾವಿದರು (Artists) ಮಾಸಾಶನ ಪಡೆಯಲು ವರ್ಷಗಟ್ಟಲೇ ವಿಳಂಬವಾಗುತ್ತಿದ್ದು, ಈ ದಿಸೆಯಲ್ಲಿ ಕಲಾವಿದರ ಸಂಕಷ್ಟಗಳನ್ನು ಅರ್ಥ ಮಾಡಿಕೊಂಡು, ಕಲಾವಿದರಿಗೆ ನೆರವು ನೀಡಲು ಸರ್ಕಾರ ಮುಂದಾಗಬೇಕಿದೆ ಎಂದು ಕಲಾವಿದರ ಸಂಘದಿಂದ ಒತ್ತಾಯಿಸಲಾಗುತ್ತಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ ಒತ್ತಾಯಿಸಿದೆ.

ನಗರದ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ಕಾರ್ಯಾಲಯ ಕಲಾಭವನದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಸಂಘದ ಪ್ರಮುಖರು, ಕಲಾವಿದರು ಈಗಾಗಲೇ ಪಡೆಯುತ್ತಿರುವ ಬೇರೆ ರೀತಿಯ ಮಾಸಾಶನ ನಿಲ್ಲಿಸಿ, ಕಲಾವಿದರ ಮಾಸಾಶನ ಪಡೆಯಲು ಸಹ ವರ್ಷಗಟ್ಟಲೇ ಕಾಯಬೇಕಿದ್ದು, ಯಾವುದೇ ರೀತಿಯ ಮಾಸಾಶನ ದೊರೆಯದೇ ಕಲಾವಿದರು ಮಾಸಾಶನದಿಂದ ವಂಚಿತರಾಗಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ

ಸರ್ಕಾರ ಕಲಾವಿದರಿಗೆ 2500 ರೂ.ಗಳ ಮಾಸಾಶನ ನೀಡುತ್ತಿದೆ. ಇದಕ್ಕೆ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 58 ವರ್ಷ ತುಂಬಿದ ನಂತರ ಅರ್ಜಿ ಹಾಕಬೇಕು. ಮಾಸಾಶನಕ್ಕೆ ಅರ್ಜಿ ಹಾಕಿದ ಮೂರ್ನಾಲ್ಕು ವರ್ಷದ ನಂತರ ಮಾಸಾಶನ ಮಂಜೂರು ಅಗುತ್ತಿದೆ. ಅದರೆ ಅರ್ಜಿ ಹಾಕುವಾಗಲೇ ಇಲಾಖೆಯವರು ಕಂದಾಯ ಇಲಾಖೆಯಿಂದ ನಿಡುವ ವೃದ್ಧಾಪ್ಯ ವೇತನ ಪಡೆಯಬಾರದೆಂದೂ, ಒಂದು ವೇಳೆ ಪಡೆಯುತ್ತಿದ್ದರೂ ಅದನ್ನು ನಿಲ್ಲಿಸಿ, ಅರ್ಜಿ ಹಾಕಬೇಕೆಂದೂ ಹೇಳಿದ್ದಾರೆ.

ಇತ್ತ ಕಲಾವಿದರ ಮಾಸಾಸನವೂ ಇಲ್ಲದೆ ವೃದ್ಧಾಪ್ಯ ವೇತನವೂ ಇಲ್ಲದೆ ಕಲಾವಿದರು ತೊಂದರೆ ಅನುಭವಿಸುತ್ತಿದ್ದಾರೆ.

ಅರ್ಜಿ ಹಾಕಿದ ನಾಲ್ಕೈದು ವರ್ಷದ ನಂತರ ಮಾಸಾಶನ ಮಂಜೂರಾಗುತ್ತಿದೆ. ಈ ದಿಸೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಮಂಜೂರು ಮಾಡಿದ ನಂತರ. ವೃದ್ಧಾಪ್ಯ ವೇತನ ನಿಲ್ಲಿಸಿ, ನಂತರ ಕಲಾವಿದರಿಗೆ ಮಾಸಾಶನ ಬಿಡುಗಡೆ ಮಾಡಬೇಕೆಂದು ಕಲಾವಿದರ ಸಂಘ ಒತ್ತಾಯಿಸುತ್ತಿದೆ‌.

ಕಲಾವಿದರ ಮಾಸಾಶನಕ್ಕೆ ಅರ್ಜಿ ಹಾಕುವ ಮೊದಲೇ ಕಂದಾಯ ಇಲಾಖೆಯಿಂದ ನೀಡುವ 1,200 ವೃದ್ಧಾಪ್ಯ ವೇತನ ನಿಲ್ಲಿಸುವ ನಿಯಮ ಬದಲಿಸಬೇಕು. ಈ ಬಗ್ಗೆ ಇಲಾಖೆಯ ನಿರ್ದೆಶಕರು ಹಾಗೂ ಸಚಿವರು ಪರಿಸೀಲಿಸಿ ಮರು ಅದೇಶ ಮಾಡಬೇಕು ಎಂದರು.

ಶೀಘ್ರ ಸಂದರ್ಶನ ನಡೆಸಿ

ಕಲಾವಿದರ ಮರಣಾ ನಂತರ ಕಲಾವಿದರ ಪತ್ನಿಯರಿಗೆ ನೀಡುವ ವಿಧವಾ ವೇತನ. ಕೇವಲ 500 ಮಾತ್ರ ಆದರೆ ಅದೇ ಕಂದಾಯ ಇಲಾಖೆಯು ನೀಡುವ ವಿಧವಾ ವೇತನ 1,200 ರೂ ಆಗಿದೆ. ಗ್ಯಾರಂಟಿ ಯೋಜನೆಯ ಎಲ್ಲಾ ಮಹಿಳೆಯರಿಗೂ 2,000 ಬರುತ್ತಿದ್ದು, ಇದರಿಂದ ಕಲಾವಿದರ ಪತ್ನಿಯರಿಗೆ ನೀಡುವ ವಿಧವಾ ವೇತನ ಬಹಳ ಕಡಿಮೆ ಇದ್ದು, ಯಾರೂ ಸಹ ವಿಧವಾವೇತನ ಪಡೆಯಲು ಅರ್ಜಿಗಳನ್ನೇ ಸಲ್ಲಿಸದಂತಾಗಿದ್ದು, ಕಲಾವಿದರಿಗೆ ಅವಮಾನ ಮಾಡಿದಂತೆ ಅಗಿದೆ.

ಈ ದಿಸೆಯಲ್ಲಿ ಸರ್ಕಾರ ಗಮನ ಹರಿಸಿ ಕಲಾವಿದರಿಗೆ ನೀಡುವ ಮಾಸಾಶನದ ಮೊತ್ತ 2,500 ಗಳನ್ನೇ ಕಲಾವಿದರ ಮರಣದ ನಂತರ. ಅವರ ಪತ್ನಿಯರಿಗೂ ನೀಡುವ ಬಗ್ಗೆ ಸರ್ಕಾರ ಮರು ಆದೇಶ ಮಾಡಬೇಕು. ಇನ್ನು ಬಹಳಷ್ಟು ಕಲಾವಿದರು ಅನಾರೋಗ್ಯಕ್ಕೆ ತುತ್ತಾಗಿ, ಸಂಕಷ್ಟದಲ್ಲಿರುತ್ತಾರೆ. ಅಂತಹವರು, ಸಲ್ಲಿಸಿರುವ ಅರ್ಜಿಗಳು ಮಂಜೂರು ಮಾಡಲು ವರ್ಷಗಳೇ ಕಳೆಯುತ್ತವೆ.

ಇತ್ತ ವೃದ್ಯಾಪ್ಯ ವೇತನವೂ ಇಲ್ಲ ಅತ್ತ ಮಾಸಾಶನವೂ ಇಲ್ಲವಾಗಿ ಕಲಾವಿದರು ತ್ರಿಶಂಕು ಸ್ಥಿತಿಯಲ್ಲಿ ಇರಬೇಕಾದ ಸ್ಥಿತಿ ಬಂದಿದೆ. ಇನ್ನೂ ಕೆಲವು ಸಂದರ್ಭಗಳಲ್ಲಿ ಮಾಸಾಶನಕ್ಕೆ ಅರ್ಜಿಗಳನ್ನು ಹಾಕಿರುವ ಕಲಾವಿದರು ಅದು ಮಂಜೂರಾಗಿ ಬರುವ ಮುಂಚೆಯೇ ಕಲಾವಿದರು ನಿಧನರಾಗಿರುವ ಉದಾಹರಣೆಗಳಿವೆ.

ಅರ್ಜಿ ಹಾಕಿರುವ ಕಲಾವಿದರಿಗೆ ಶೀಘ್ರ ಸಂದರ್ಶನಗಳನ್ನು ನಡೆಸಿ, ಅರ್ಹರಿಗೆ ಕೂಡಲೇ ಮಾಸಾಶನ ಮಂಜೂರು ಮಾಡಲು ಕ್ರಮ ಕೈಗೊಳ್ಳುವ ಮೂಲಕ ಸರ್ಕಾರ ಕಲಾವಿದರ ಹಿತ ಕಾಯಬೇಕೆಂದು ಕಲಾವಿದರ ಸಂಘದಿಂದ ಮನವಿ ಮಾಡಲಾಗುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎನ್ನುವ ಕಲಾವಿದರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂನ್ 3ರಂದು ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಒಕ್ಕೂಟದಿಂದ ಹಮ್ಮಿಕೊಂಡಿರುವ ವಿಧಾನ ಸೌಧ ಚಲೋ ಬೃಹತ್ ಸಾಂಸ್ಕೃತಿಕ ಹೋರಾಟಕ್ಕೆ ಸಂಘವು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಾಗುತ್ತಿದೆ ಎಂದರು.

ಕಲೆಯನ್ನು ನಂಬಿರುವ ಕಲಾವಿದರು

ಕಲೆಯನ್ನು ನಂಬಿರುವ ಬಹುತೇಕ ಕಲಾವಿದರು ಬಡ ಹಾಗೂ ಆರ್ಥಿಕವಾಗಿ ಹಿಂದುಳಿದವರು, ಹಿಂದುಳಿದ ಸಮುದಾಯದವರಾಗಿದ್ದಾರೆ. ಕಲಾವಿದರು ಹತ್ತಾರು ಸಾವಿರ ಖುರ್ಚು ಮಾಡಿಕೊಂಡು ಕಲಾ ಪ್ರದರ್ಶನ ನೀಡಬೇಕಾಗಿದೆ.

ಕಲಾವಿದರು ಅನಾರೋಗ್ಯಗೊಂಡರೆ ಅವರಿಗೆ ಯಾವುದೇ ನೆರವು ಇರುವುದಿಲ್ಲ. ಈ ದಿಸೆಯಲ್ಲಿ ಸರ್ಕಾರ ಮಾಸಾಶನದ ವಯಸ್ಸನ್ನು 50 ವರ್ಷಕ್ಕೆ ಸೀಮಿತವಾಗಿಸಬೇಕು. ಕಲಾವಿದರಿಗೆ 3 ಸಾವಿರ ರೂ ನೀಡುವ ಭರವಸೆ ಇನ್ನೂ ಈಡೇರಿಲ್ಲ. ಇಂದಿನ ಪರಿಸ್ಥಿತಿಗೆ ತಕ್ಕಂತೆ ಮಾಸಾಶನ 5 ಸಾವಿರ ರೂಗೆ ಏರಿಸಬೇಕು ಎಂದರು.

ಅಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಸಂಘಗಳಿಗೆ ಧನ ಸಹಾಯಗಳು ಸಹ ಬರುತ್ತಿಲ್ಲ. ಕಲಾವಿದರು ಮರಣ ಹೊಂದಿದಾಗಲೂ ಸಹ ಹಣಕ್ಕೆ ಕೊರತೆಯಾಗುವ ಸ್ಥಿತಿ ಇದ್ದು, ಅಂತ್ಯಕ್ರಿಯೆಗೆ 10 ಸಾವಿರ ರೂ ನೀಡಬೇಕಿದೆ ಎಂದು ಕಲಾವಿದರು ಒತ್ತಾಯಿಸಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!