Defeat to conspiracy, victory to honest work - BC Anand Kumar Abhimat

ಷಡ್ಯಂತ್ರಕ್ಕೆ ಸೋಲು, ಪ್ರಾಮಾಣಿಕ ಕೆಲಸಕ್ಕೆ ಗೆಲುವು – ಬಿಸಿ ಆನಂದ್ ಕುಮಾರ್ ಅಭಿಮತ

ದೊಡ್ಡಬಳ್ಳಾಪುರ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (Bamul) ದೊಡ್ಡಬಳ್ಳಾಪುರ ನಿರ್ದೇಶಕ ಸ್ಥಾನದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.

ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತರ ನಡುವೆ ನಡೆದ ಜಿದ್ದಾಜಿದ್ದಿ ಹೋರಾಟದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಸಿ.ಆನಂದಕುಮಾರ್ ಎರಡನೇ ಬಾರಿಗೆ ನಿರ್ದೇಶಕರಾಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ಡೇರಿ ವೃತ್ತ ಸಮೀಪ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಬೆಳಿಗ್ಗೆ 9-00 ಗಂಟೆಯಿಂದ ಸಂಜೆ 4-00 ಗಂಟೆಯವರೆಗೆ ಮತದಾನ ನಡೆದ ಬಳಿಕ, ಮತ ಎಣಿಕೆ ನಡೆಯಿತು.

ಈ ಹಿಂದೆ ಕಾಂಗ್ರೆಸ್‌ನಿಂದ ಬಮೂಲ್ ನಿರ್ದೇಶಕರಾಗಿ ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಸಿ ಆನಂದ್ ಕುಮಾರ್ ಅವರು, ಪ್ರತಿಸ್ಪರ್ಧಿ ಜೆಡಿಎಸ್ ‌ಬೆಂಬಲಿತರಾಗಿ ಸ್ಪರ್ಧೆ ಮಾಡಿದ್ದ ಹುಸ್ಕೂರು ಟಿ ಆನಂದ್ ಅವರು ವಿರುದ್ಧ ಬರೋಬ್ಬರಿ 110 ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ.

ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹಣಾಹಣಿ ನಡೆದಿದ್ದು, ನಾಮಪತ್ರ ಹಿಂಪಡೆದ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಬೇಷರತ್ ನೀಡುವುದಾಗಿ ಘೋಷಿಸಿದ್ದರು, ಬಿಸಿ ಆನಂದ್ ಅವರ ಗೆಲುವಿನ ಓಟಕ್ಕೆ ತಡೆಯೊಡ್ಡಲು ಸಾಧ್ಯವಾಗಿಲ್ಲ.

ಇ‌ನ್ನೂ ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಮೂಲ್ ನಿರ್ದೇಶಕ ಬಿಸಿ ಅನಂದ್ ಅವರು, ಮಾಜಿ ಶಾಸಕ ಟಿ ವೆಂಕಟರಮಣಯ್ಯ, ಮೂರ್ ನಾಲ್ಕು ಬಾರಿ ಸೋತ ಮುನೇಗೌಡ, ನನ್ನ ಹಿತ ಶತ್ರುಗಳು, ಒಳ ಶತ್ರುಗಳು, ಎದುರುಗಡೆ ಇರುವ ಶತ್ರುಗಳು ಎಲ್ಲರೂ ಸಹಿತ ಎಷ್ಟೇ ಕುತಂತ್ರ ಮಾಡಿದರು, ನನ್ನ ಜೊತೆಯಾಗಿ ನಿಂತ ಅನೇಕ ಜನರ ಸಹಕಾರದಿಂದ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾಮಾಣಿಕ ಕೆಲಸಕ್ಕೆ ಬೆಲೆ ಇದೆ ಎಂದು ಜನತೆ ಈ ಅಭೂತಪೂರ್ವ ಗೆಲುವು ನೀಡುವ ಮೂಲಕ ತೋರಿಸಿಕೊಟ್ಟಿದ್ದಾರೆ.

ನನ್ನ ಗೆಲುವಿಗೆ ಕಾರಣರಾದ ಎಲ್ಲರಿಗೂ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕಾಯಾ ವಾಚಾ ಮನಸಾ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ರೈತರ ಮನೆ ಮಗನಾಗಿ ಕೆಲಸ ಮಾಡ್ತಿನಿ ಎಂದು ಬಿಸಿ ಆನಂದ್ ಕುಮಾರ್ ಹೇಳಿದ್ದಾರೆ.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!