A story for the day: destiny

ಹರಿತಲೇಖನಿ ದಿನಕ್ಕೊಂದು ಕಥೆ: ಹಣೆಬರಹ

Harithalekhani Story: ಒಂದಾನೊಂದು ಕಾಲದಲ್ಲಿ ಸುವರ್ಣಗಿರಿ ಎಂಬ ರಾಜ್ಯದಲ್ಲಿ ಚಂದ್ರಸೇನನೆಂಬ ರಾಜನು ಆಳುತ್ತಿದ್ದನು. ಆತನು ದಾನ, ಧರ್ಮ, ಪೂಜೆ ಪುನಸ್ಕಾರಗಳಿಗೆ ಪ್ರಖ್ಯಾತನಾಗಿದ್ದನು.

ನನ್ನ ರಾಜ್ಯದಲ್ಲಿ ಬಡವರೇ ಇರಬಾರದು. ಎಲ್ಲರೂ ಸುಖ ಸೌಭಾಗ್ಯಗಳಿಂದ ಕೂಡಿರಬೇಕು ಎಂಬ ಭಾವನೆ ಹೊಂದಿ ತನ್ನ ಪ್ರಜೆಗಳನ್ನು ಮಕ್ಕಳಿಗಿಂತ ಹೆಚ್ಚಾಗಿ ಕಾಣುತ್ತಿದ್ದನು. ಆಗಾಗ ಸಂಜೆಯ ವೇಳೆ ಮಂತ್ರಿ ಸುಗುಣಾನಂದನೊಡನೆ ವಾಯು ವಿಹಾರಕ್ಕೆ ಹೋಗುತ್ತಿದ್ದನು .

ಒಂದು ದಿನ ಹೀಗೆ ಹೋಗುತ್ತಿರುವಾಗ ಸಂಜೆ ಮುಗಿದು ಕತ್ತಲಾಗುತ್ತ ಬಂತು. ಮಂತ್ರಿಗಳೇ ಬೇಗ ರಾಜಧಾನಿ ಸೇರೋಣ. ಕುದುರೆಯನ್ನು ವೇಗವಾಗಿ ಓಡಿಸಿ ಎಂದು ಸೂಚಿಸಿದನು.

ಕೊಂಚ ದೂರ ಹೋಗುವುದರಲ್ಲಿ ರಾಜನು ಕುದುರೆಯನ್ನು ನಿಲ್ಲಿಸಿ ಮಂತ್ರಿಗಳೇ ಕತ್ತಲಾಗುತ್ತಾ ಬಂದಿದ್ದರೂ ಕುಟೀರದ ಮುಂದೆ ತೋಟದ ಕೆಲಸ ಮಾಡುತ್ತಿರುವ ವಿಪ್ರ ಯಾರು ? ತುಂಡುಬಟ್ಟೆ ಉಟ್ಟು ಚಳಿಯನ್ನು ಲೆಕ್ಕಿಸದ ಆ ಮಹಾ ಪುರುಷ ಯಾರು ಎಂದು ಕೇಳಿದರು.

ಆಗ ಮಂತ್ರಿಯು ಆತ ಶೇಷ ಶರ್ಮನೆಂಬ ಪ್ರಖಾಂಡ ಪಂಡಿತ, ಶ್ರಮಜೀವಿ ಎಂದರು. ನಮ್ಮ ರಾಜ್ಯದಲ್ಲಿ ಆತ ಏಕೆ ಇಷ್ಟು ಕಷ್ಟಪಡಬೇಕು ಅರಮನೆಗೆ ಕರೆಸಿ ಬೇಕಾದ್ದನ್ನು ಕೊಡಿ ಎಂದನು.

ಕ್ಷಮಿಸಿ ಮಹಾರಾಜ ಆತ ಮಹಾ ಆತ್ಮ ಗೌರವಿ, ಯಾರಿಂದ ಏನೂ ಬೇಡುವುದಿಲ್ಲ. ಯಾರ ಸಹಾಯವನ್ನೂ ಬಯಸುವುದಿಲ್ಲ. ಕಾಯಕ ಮಾಡಿ ಹೆಂಡತಿ ಮಕ್ಕಳನ್ನು ಪೋಷಿಸುತ್ತಿದ್ದಾನೆ ಎಂದು ಉತ್ತರಿಸಿದನು ಮಂತ್ರಿ.

ಸರಿ ನಡೆಯಿರಿ ಇದಕ್ಕೆ ನಾವೇ ಒಂದು ಉಪಾಯ ಮಾಡೋಣ ಎಂದು ಇಬ್ಬರೂ ಹೊರಟರು. ಮಾರನೆಯ ದಿನ ಶೇಷ ಶರ್ಮನ ತೋಟದಲ್ಲಿ ಒಂದು ಚೀಲ ಸಿಕ್ಕಿತು. ಅದರ ತುಂಬಾ ಚಿನ್ನದ ನಾಣ್ಯಗಳಿದ್ದವು.

ಕೂಡಲೆ ಆತ ಅದನ್ನು ಕೈಯಲ್ಲಿ ಹಿಡಿದು ರಾಜ ದರ್ಬಾರಿಗೆ ನಡೆದ ಮಹಾ ಪ್ರಭು ನನ್ನ ತೋಟದಲ್ಲಿ ಚಿನ್ನದ ನಾಣ್ಯಗಳಿರುವ ಈ ಚೀಲ ಸಿಕ್ಕಿದೆ, ಯಾರದೋ ಏನೋ ವಿಚಾರಣೆ ನಡೆಸಿ ಅವರಿಗೆ ತಲುಪಿಸಿ ಎಂದು ಹೇಳಿ ಹೊರಡಲನುವಾದ.

ಆಗ ರಾಜನು ಅದು ಯಾರದೇ ಆಗಲಿ, ನಿಮ್ಮ ತೋಟದಲ್ಲಿ ಸಿಕ್ಕಿದೆ. ನೀವೇ ಅನುಭವಿಸಿ ಎಂದನು. ಆಗ ಶೇಷ ಶರ್ಮ ಕ್ಷಮಿಸಿ ಮಹಾ ಪ್ರಭು, ನಿತ್ಯ ನನ್ನ ತೋಟಕ್ಕೆ ಅನೇಕ ಹಕ್ಕಿಗಳು ಬರುತ್ತವೆ. ನವಿಲು, ಜಿಂಕೆಗಳು ಬರುತ್ತವೆ. ಅವು ನಮ್ಮದೆಂದರೆ ದ್ರೋಹವಾಗುವುದಿಲ್ಲವೆ ? ಅನೇಕ ಮಂದಿ ದಾರಿಹೋಕರು ನಮ್ಮ ತೋಟದ ಹಣ್ಣು ಹಂಪಲು ತಿಂದು ಹೋಗುತ್ತಾರೆ.

ಅವರು ನಮ್ಮವರಾಗುತ್ತಾರೆ ? ಕ್ಷಮಿಸಿ ಆ ಹಣ ಯಾರದೋ ಅವರಿಗೆ ಕೊಡಿ ಎಂದನು. ನಮ್ಮ ಹಣೆಯಲ್ಲಿ ಬರೆದಿರುವಷ್ಟು ನಮಗೆ ಸಿಕ್ಕಿದೆ. ನಾನು ಅದರಿಂದ ಸುಖವಾಗಿದ್ದೇನೆ ಎಂದು ವಂದಿಸಿ ಕುಟೀರಕ್ಕೆ ತೆರಳಿದನು. ಮಂತ್ರಿ ಪ್ರಭು ಹಣೆಬರಹ ಬದಲಾಯಿಸಲು ಬರೆದ ಆ ಬ್ರಹ್ಮನಿಂದಲೇ ಸಾಧ್ಯವಿಲ್ಲ ಎಂದನು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!