ಚಿಂಚೋಳಿ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ (Accident) ಬೈಕ್‌ಗಳಿಗೆ ಬೆಂಕಿ ತಗುಲಿದ ಪರಿಣಾಮ ಸ್ಥಳದಲ್ಲೇ ಓರ್ವ ಸವಾರ ಸುಟ್ಟು ಕರಕಲಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕಾಳಗಿ ಸಮೀಪ ನಡೆದಿದೆ.
ಘಟನೆಯಲ್ಲಿ 28 ವರ್ಷದ ದಶರಥ್ ಮಡಿವಾಳ ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಕಾಳಗಿ ಪಟ್ಟಣ-ಕೊಡದೂರ್ ಗ್ರಾಮದ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಈ ವೇಳೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಗಳ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದಿದ್ದ ದಶರಥ್ ಪೂಜಾರಿ ಮೈಮೇಲೆ ಬೈಕ್‌ನ ಪೆಟ್ರೋಲ್ ಬಿದ್ದು, ಏಕಾಏಕಿ ಬೆಂಕಿ ತಗುಲಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.