ಬೆಂ.ಗ್ರಾ‌.ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸ್ಸು: ಪ್ರೋ.ಗೋವಿಂದ ರಾವ್

Recommendation to the government to provide representation for the comprehensive development of taluks; Prof.M.Govinda Rao

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿನ ಶಿಕ್ಷಣ, ಆರೋಗ್ಯ, ತಲಾದಾಯ, ಕೃಷಿ, ಹೈನಗಾರಿಕೆ, ಕೈಗಾರಿಕೆ, ಸೇವಾ ವಿಭಾಗ, ಸಾಮಾಜಿಕ ವಲಯಗಳ ಮಾನದಂಡಗಳ ಆಧಾರದ ಮೇಲೆ ಅಭಿವೃದ್ಧಿ ಸೂಚ್ಯಂಕವನ್ನು ನಿರ್ಧರಿಸಲಾಗುತ್ತದೆ. ಈ ಅಭಿವೃದ್ಧಿ ಸೂಚ್ಯಂಕವನ್ನು ಆಧರಿಸಿ ಹಿಂದುಳಿದ ತಾಲ್ಲೂಕುಗಳು ಯಾವುವು ಎಂಬುದನ್ನು ಗುರುತಿಸಿ ಆ ತಾಲ್ಲೂಕುಗಳ ಸರ್ವಾಂಗೀಣ ಅಭಿವೃದ್ಧಿಗೆ ಬೇಕಾಗುವ ಆರ್ಥಿಕ ಸೌಲಭ್ಯವನ್ನು ಒದಗಿಸಲು ಸರ್ಕಾರಕ್ಕೆ ಸಮಿತಿ ವತಿಯಿಂದ ಶಿಫಾರಸ್ಸು ಮಾಡಲಾಗುವುದು ಎಂದು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾದ ಪ್ರೊ.ಎಂ.ಗೋವಿಂದ ರಾವ್ (Prof.M.Govinda Rao) ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಿತಿಯು ರಾಜ್ಯದ 240 ತಾಲ್ಲೂಕುಗಳ ಅಧ್ಯಯನ ನಡೆಸುತ್ತದೆ. ಕಲಬುರ್ಗಿ, ಬೆಳಗಾವಿ, ಮೈಸೂರು, ಬೆಂಗಳೂರು ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ.

240 ತಾಲ್ಲೂಕುಗಳಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಮತ್ತು ಅತೀ ಹಿಂದುಳಿದ ಹಾಗೂ ಹಿಂದುಳಿದ ತಾಲ್ಲೂಕುಗಳು, ಮುಂದುವರಿದ ತಾಲ್ಲೂಕುಗಳು, ಅತೀ ಮುಂದುವರಿದ ತಾಲ್ಲೂಕುಗಳು ಎಂದು ವಿಂಗಡಿಸಿ ಯಾವ ಕಾರಣಕ್ಕೆ ತಾಲ್ಲೂಕು ಹಿಂದುಳಿದಿದೆ ಎಂದು ತಿಳಿಯಲು, ಮುಂದುವರೆದಿರುವ ತಾಲ್ಲೂಕುಗಳಿಂದ ಹಿಂದುಳಿದ ತಾಲ್ಲೂಕುಗಳನ್ನು ಹೇಗೆ ಸುಧಾರಣೆ ಮಾಡಬೇಕು ಎಂಬ ಮಾಹಿತಿಯನ್ನು ತಾಲ್ಲೂಕುವಾರು ಪಡೆಯಲಾಗುವುದು.

‘2002ರಲ್ಲಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಅನ್ವಯ 175 ತಾಲ್ಲೂಕುಗಳ ಅಧ್ಯಯನ ನಡೆಸಿದ್ದರು. ಅದರಲ್ಲಿ 114 ತಾಲ್ಲೂಕುಗಳ ಪೈಕಿ 39 ತಾಲ್ಲೂಕು ಅತೀ ಹಿಂದುಳಿದ, 40 ಅತ್ಯಂತ ಹಿಂದುಳಿದ, 35 ಹಿಂದುಳಿದ ತಾಲ್ಲೂಕುಗಳು ಎಂದು ಗುರ್ತಿಸಲಾಗಿತ್ತು. ರಾಜ್ಯದ ಹಿಂದುಳಿದ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ 2007 ರಿಂದ 2023 ವರೆಗೆ 43456.96 ಕೋಟಿ ಶಿಫಾರಸ್ಸು ಮಾಡಲಾಗಿತ್ತು. ಅದರಲ್ಲಿ 35380.25 ಕೋಟಿ ಬಿಡುಗಡೆ ಆಗಿ 32610.24 ಕೋಟಿ ಖರ್ಚಾಗಿದೆ ಎಂದರು.

‘ರಾಜ್ಯ ಸರ್ಕಾರ 2024ರಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲಸೌಲಭ್ಯ, ಸಾಮಾಜಿಕ ಸೌಲಭ್ಯ, ಹಣಕಾಸಿನ ಮತ್ತು ತಾಂತ್ರಿಕ ಮೂಲಸೌಕರ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ, ಸೂಚ್ಯಂಕ ನಿಗದಿಪಡಿಸಲಿದೆ. ಸಮಿತಿಯು ಅಕ್ಟೋಬರ್ 2025 ಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುವಾರು ತಲಾದಾಯ ಅಂಕಿ ಅಂಶ

ದೇವನಹಳ್ಳಿ ತಾಲ್ಲೂಕು: 77.89
ದೊಡ್ಡಬಳ್ಳಾಪುರ ತಾಲ್ಲೂಕು: 85.99
ಹೊಸಕೋಟೆ ತಾಲ್ಲೂಕು: 91.96
ನೆಲಮಂಗಲ ತಾಲ್ಲೂಕು: 131.54
ಬೆಂಗಳೂರು ಗ್ರಾಮಾಂತರ ಜಿಲ್ಲೆ:95.60

ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕುಗಳು ರಾಜ್ಯದ ಸರಾಸರಿ ತಲಾದಾಯದಲ್ಲಿ ಹಿಂದುಳಿದ ತಾಲ್ಲೂಕುಗಳಾಗಿವೆ.

ಶಿಕ್ಷಣ ಹಾಗೂ ಆರೋಗ್ಯ ಸೂಚ್ಯಂಕದಲ್ಲಿ ಕ್ರಮವಾಗಿ ಅತ್ಯಂತ ಹಿಂದುಳಿದ, ಹಿಂದುಳಿದ ಜಿಲ್ಲೆಯಾಗಿದೆ ಎಂದರು.

ಜಿಲ್ಲೆಗೆ ಸಂಬಂಧಿಸಿದಂತೆ ಶಿಕ್ಷಣ, ಆರೋಗ್ಯ, ಕೈಗಾರಿಕೆ, ಕೃಷಿ, ಮೂಲಸೌಕರ್ಯ, ತಂತ್ರಜ್ಞಾನ, ಅಭಿವೃದ್ಧಿ, ಸಮಸ್ಯೆಗಳ ಬಗ್ಗೆ ವಿಷಯಾಧಾರಿತ ಚರ್ಚೆ ನಡೆಸಿದ ಸಮಿತಿಯು ಅಧಿಕಾರಿಗಳಿಂದ, ಜಿಲ್ಲೆಯ ಸಂಘ ಸಂಸ್ಥೆಗಳ ಮುಖಂಡರಿಂದ ಮಾಹಿತಿ ಪಡೆದುಕೊಂಡರು. ಸಮಿತಿಯು ಗುರುತಿಸಿರುವ ವಿಷಯಗಳಲ್ಲದೇ ಜಿಲ್ಲೆಗೆ ಸಂಬಂಧಿಸಿದಂತೆ ಇನ್ನೂ ಅನೇಕ ವಿಷಯಗಳನ್ನು ಗಮನಿಸಲಿದೆ’ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಬೆಂಗಳೂರು ನಗರಕ್ಕೆ ಹೊಂದಿಕೊಂಡಿದ್ದರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ಕುಡಿಯುವ ನೀರು ಪೂರೈಕೆ, ರೈಲ್ವೇ ಸೌಕರ್ಯ, ತ್ಯಾಜ್ಯ ನಿರ್ವಹಣೆ ಘಟಕಗಳು, ನೀರು ಶುದ್ಧೀಕರಣ ಘಟಕಗಳು ಸ್ಥಾಪನೆ ಆಗಬೇಕಿದೆ.

ಮೆಡಿಕಲ್ ಕಾಲೇಜು ಆಗಬೇಕು, ಜಿಲ್ಲಾ ಆಸ್ಪತ್ರೆಗೆ ಅನುದಾನದ ಅವಶ್ಯಕತೆ ಇದ್ದು ಜಿಲ್ಲೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಪತ್ರದ ಮುಖೇನ ನೀಡಲಾಗುವುದು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಮಿತಿಯಲ್ಲಿ ಕೋರಿದರು.

ಸಭೆಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಎಂ.ಎಚ್. ಸೂರ್ಯನಾರಾಯಣ, ಸಿಇಒ ಡಾ.ಕೆ ಎನ್ ಅನುರಾಧ, ಜಿ.ಪಂ ಉಪಕಾರ್ಯದರ್ಶಿ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜಕೀಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="121818"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]