ಮಂಡ್ಯ: ಮನೆಯ ಬಳಿ ಆಟವಾಡುತ್ತಿದ್ದಾಗ ವಿದ್ಯುತ್ ತಗುಲಿ (Electric shock) ಐದು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ.
ಮೃತ ಬಾಲಕನನ್ನು 5 ವರ್ಷದ ಸಂಜೀವ್ ಎಂದು ಗುರುತಿಸಲಾಗಿದೆ.
ಮನೆಯ ಬಳಿ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾಗ ಬಾಲಕ ಸಂಜೀವ್ ಅವಿತುಕೊಳ್ಳಲು ಮನೆಯ ಬಾಗಿಲು ಮುಚ್ಚಿದ್ದಾನೆ. ಆಗ ವಿದ್ಯುತ್ ಶಾಕ್ ಹೊಡೆದು ಸಂಜೀವ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
ಬಾಲಕನನ್ನು ರಕ್ಷಿಸಲು ಹೋದ ತಾಯಿಗೂ ವಿದ್ಯುತ್ ಶಾಕ್ ಹೊಡೆದಿದ್ದು, ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನೂ ಮಗು ಸಂಜೀವ್ ಅಕಾಲಿಕ ಮರಣಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.