ಕಮಲ್ ಹಾಸನ್ ಗೆ ಕಲೆ ಕೊಟ್ಟ ದೇವರು ಬುದ್ದಿ ಕಿತ್ಕೊಂಡ್ ಬಿಟ್ಟ: ರಾಜಘಟ್ಟರವಿ ವಾಗ್ದಾಳಿ

The god who gave art to Kamal Haasan left Buddi Kitkond: Rajaghattaravi

ಬೆಂಗಳೂರು: ತಮಿಳು ನಟ ಕಮಲ್​ ಹಾಸನ್ (Kamal Haasan) ಅವರು ಕನ್ನಡ ಭಾಷೆಯ ಬಗ್ಗೆ​ ವಿವಾದಾತ್ಮಕ ಹೇಳಿಕೆ ಕೊಟ್ಟು ವಿವಾದಕ್ಕೆ ಗುರಿಯಾಗಿದ್ದಾರೆ.

ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ಹೇಳಿದ ಅವರ ಹೇಳಿಕೆ ಬಗ್ಗೆ ಈಗ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕಮಲ್​ ಹಾಸನ್​ ಅವರ ಹೊಸ ಚಿತ್ರ ಥಗ್​ ಲೈಫ್​ ಚಿತ್ರದ ಪ್ರೊಮೋಷನ್ಸ್​ಗೆ ಚಿತ್ರತಂಡ ಕಾರ್ಯಕ್ರಮ ನಡೆಸಿತ್ತು. ಆ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್ ನಟ ಶಿವರಾಜ್ ಕುಮಾರ್ (Shiva Rajkumar) ಸಹ ಭಾಗಿಯಾಗಿದ್ರು.

ಶಿವರಾಜ್​ ಕುಮಾರ್​ ಅವರ ಎದುರಲ್ಲೇ ಕಮಲ್ ಹಾಸನ್ ಹೀಗೆ ಕನ್ನಡದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಕ್ಕೆ ಭಾರಿ ಆಕ್ರೋಶಗಳು ಕೇಳಿ ಬಂದಿವೆ.

ಈ ಕುರಿತಂತೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ (Rajaghatta Ravi) ಕಿಡಿ ಕಾರಿದ್ದು, ಕಮಲ್ ಹಾಸನ್ ಗೆ ಕಲೆ ಕೊಟ್ಟ ದೇವರು ಬುದ್ದಿ ಕಿತ್ಕೊಂಡ್ ಬಿಟ್ಟ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದು ನಾಡಿನಾದ್ಯಂತ ಹೆಮ್ಮೆಯಿಂದ 1680 ನೇ ಕನ್ನಡ ಸಾಮ್ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಕಮಲ್ ಹಾಸನ್ ಒಂದು ಬಾಲಿಶವಾದ ಹೇಳಿಕೆ ನೀಡಿರುವುದು ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.

ಕನ್ನಡ ಭಾಷೆಗೆ ತನ್ನದೆ ಆದ ಸ್ವಂತಿಕೆ ಇತಿಹಾಸ ಸಂಸ್ಕೃತಿ ಇದೆ. ನಮ್ಮ ಭಾಷೆ ಯಾವುದೋ ಎರವಲು ಭಾಷೆಯಲ್ಲ, ತಮಿಳಿಗಿರುವುದು ಕೇವಲ 34 ಅಕ್ಷರ ಕನ್ನಡಕ್ಕಿರುವುದು 49 ಅಕ್ಷರ,
ಇನ್ನೂ ಬೇಕಿದ್ದರೆ ನಾವು ಆ ರೀತಿಯ ಹೇಳಿಕೆ ನೀಡಬಹುದು ಆದರೆ ಕನ್ನಡಿಗರು ಭಾಷಾಭಿಮಾನಿಗಳೆ ಹೊರತು ದುರಭಿಮಾನಿಗಳಲ್ಲ.

ನಿಮ್ಮ (ಕಮಲ್ ಹಾಸನ್) ಸಂಕುಚಿತ ಮನೋಭಾವ ದಿಂದ ಹೊರಬನ್ನಿ, ನಾವೆ ಉತ್ತಮರು ಮೊದಲಿಗರು, ನಾವು ಶ್ರೇಷ್ಠರು ಎಂಬ ಭ್ರಮೆಯಿಂದ ಹೊರ ಬನ್ನಿ.

ಕಮಲ್ ಹಾಸನ್ ಮಾತನಾಡಿರುವ ಮಾತಿಗೆ ಪೂರಕವಾದ ದಾಖಲೆ ಒದಗಿಸ ಬೇಕು, ಇಲ್ಲವಾದರೆ ಕನ್ನಡಿಗರ ಭೇಷರತ್ ಕ್ಷಮೆ ಯಾಚಿಸಬೇಕು, ಇಲ್ಲವಾದಲ್ಲಿ ಮುಂದಿನ ಚಿತ್ರ ಪ್ರದರ್ಶನಕ್ಕೆ ತಡೆ ಒಡ್ಡಲಾಗುವುದು.

ಕಲಾವಿದರು ಕಲಾವಿದರಾಗಿ ಇರಬೇಕು ಅನಗತ್ಯ ವಿಷಯದಲ್ಲಿ ತಲೆ ಹಾಕಬಾರದು,
ಆ ಸಮಯದಲ್ಲಿ ಅಲ್ಲೆ ಇದ್ದ ಶಿವರಾಜ್ ಕುಮಾರ್ ಅವರ ವರ್ತನೆ ಕೂಡ ಬೇಸರ ತಂದಿದೆ ಎಂದು ರಾಜಘಟ್ಟರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]