ಬಳಕೆದಾರರ ಶುಲ್ಕ ನಿರ್ಧಾರವನ್ನು ಹಿಂಪಡೆಯಿರಿ: ಆರ್‌.ಅಶೋಕ ಆಗ್ರಹ

If the sanctity of Chamundeshwari temple is violated, 'Chamundeshwari Chalo'; R. Ashoka

ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಗ್ರಹಿಸಿದರು.

ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು ಕಟ್ಟಿದ ನಾಡಪ್ರಭು ಎಂಬ ಹೆಸರು ಪಡೆದಿದ್ದರೆ, ಕಾಂಗ್ರೆಸ್‌ ನಾಯಕರು ನಾಡನ್ನು ಹಾಳು ಮಾಡಿದವರು ಎಂಬ ಬಿರುದು ಪಡೆದಿದ್ದಾರೆ ಎಂದು ಟೀಕಿಸಿದರು.

ಈ ಮೊದಲು ನಗರದಲ್ಲಿ ಸೆಸ್‌ ಇತ್ತು. ಈಗ ಇದರ ಜೊತೆಗೆ ಬಳಕೆದಾರರ ಶುಲ್ಕ ವಿಧಿಸಿದ್ದಾರೆ. ಸೆಸ್‌ನಿಂದಲೇ ಸುಮಾರು 250 ಕೋಟಿ ರೂ. ಸಂಗ್ರಹವಾಗುತ್ತಿದೆ. ಕಸದ ಟೆಂಡರ್‌ನ ಮೌಲ್ಯವೇ 147 ಕೋಟಿ ರೂ. ಆಗಿದ್ದರೆ, ಜನರಿಂದ ಅತ್ಯಧಿಕ ಶುಲ್ಕ ವಸೂಲಿ ಮಾಡುತ್ತಿದ್ದಾರೆ.

ಇನ್ನು ಬಳಕೆದಾರರ ಶುಲ್ಕವೂ ಸೇರಿದರೆ 500-600 ಕೋಟಿ ರೂ. ಸಂಗ್ರಹವಾಗುತ್ತದೆ. ಯಾರ ಮನೆ ಹಾಳು ಮಾಡಲು ಸರ್ಕಾರ ಇಷ್ಟು ಹಣವನ್ನು ಸಂಗ್ರಹಿಸುತ್ತಿದೆ? ಎಂದು ಪ್ರಶ್ನೆ ಮಾಡಿದರು.

ಒಂದೋ ಬಳಕೆದಾರರ ಶುಲ್ಕ, ಇಲ್ಲವಾದರೆ ಸೆಸ್‌ ಸಂಗ್ರಹಿಸಬೇಕು. ಆದರೆ ಬೆಂಗಳೂರಿನಲ್ಲಿ ಎರಡೂ ಶುಲ್ಕ ವಿಧಿಸಲಾಗಿದೆ. ಇದರಿಂದಾಗಿ ಮನೆಗಳ ಬಾಡಿಗೆ ದರ ಹೆಚ್ಚಲಿದೆ. ವಾಣಿಜ್ಯ ಕಟ್ಟಡಗಳ ಬಾಡಿಗೆ, ಕಲ್ಯಾಣ ಮಂಟಪ, ಆಸ್ಪತ್ರೆ, ಶಾಲೆ, ಹೋಟೆಲ್‌ಗಳ ದರ ಹೆಚ್ಚಲಿದೆ.

ಒಂದು ತೆರಿಗೆಯಿಂದಾಗಿ ಎಲ್ಲ ದರಗಳು ಹೆಚ್ಚಲಿದೆ. ಬೆಂಗಳೂರಿನ ಜನರನ್ನು ಕಾಂಗ್ರೆಸ್‌ ದರೋಡೆ ಮಾಡುತ್ತಿದೆ. ಇದು ಕೇಂದ್ರ ಸರ್ಕಾರದ ಕಾಯ್ದೆ ಎಂದು ನೆಪ ಹೇಳುತ್ತಾರೆ. ಎರಡು ಬಗೆಯ ಶುಲ್ಕ ವಿಧಿಸಬೇಕೆಂದು ಕೇಂದ್ರ ಸರ್ಕಾರ ಎಲ್ಲೂ ಹೇಳಿಲ್ಲ ಎಂದರು.

ಜನಪ್ರತಿನಿಧಿ ಸಭೆ ನಡೆಸಿ

ಬೆಂಗಳೂರಿನ ಶಾಸಕರ ಸಭೆ ಕರೆದು ಈ ಬಗ್ಗೆ ಚರ್ಚಿಸಬೇಕು. ಹಿಂದೆ ಚದರ ಅಡಿಗೆ ತಕ್ಕಂತೆ ಕಸದ ಸೆಸ್‌ ವಿಧಿಸಲಾಗುತ್ತಿತ್ತು. ಅದೇ ಮಾದರಿಯನ್ನು ಈಗ ಮತ್ತೆ ತರಬೇಕು. ಬೇರೆ ಯಾವುದೇ ನಗರಗಳಲ್ಲಿ ಇಷ್ಟು ಶುಲ್ಕವಿಲ್ಲ. ಇದು ಅನಾಗರಿಕ ನಡೆ. ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಗಾಗಿ ನಗರದ ಜನರಿಂದ ಇಷ್ಟು ತೆರಿಗೆ ವಸೂಲಿ ಮಾಡಲಾಗುತ್ತಿದೆ. ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದರು.

ಈಗಾಗಲೇ ಬೆಂಗಳೂರಿನ ಜನರು ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದರು.

ಗ್ಯಾರಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ಇದಕ್ಕಾಗಿ ಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡಲು ಪ್ರಯತ್ನ ನಡೆದಿದೆ. ಕಾಂಗ್ರೆಸ್‌ಗ ಮತ ನೀಡಿದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ಸೀಮಿತವಾಗಲಿದೆ ಎಂದರು.

ಕಮಲ್‌ ಹಾಸನ್‌ ಒಬ್ಬ ಹುಚ್ಚ. ಕನ್ನಡ ಸಿನಿಮಾದಲ್ಲಿ ಆತನಿಗೆ ಅವಕಾಶ ಸಿಕ್ಕಿತ್ತು. ಕನ್ನಡವನ್ನು ಅವಹೇಳನ ಮಾಡುವುದನ್ನು ನೋಡಿದರೆ ಆತನೊಬ್ಬ ನಗರ ನಕ್ಸಲ ಎಂಬುದು ಸ್ಪಷ್ಟವಾಗಿದೆ. ಎಲ್ಲ ಕನ್ನಡಿಗರು ಕಮಲ್‌ ಹಾಸನ್‌ಗೆ ಬಹಿಷ್ಕಾರ ಹಾಕಬೇಕು.

ರಾಜ್ಯದೊಳಗೆ ಬರಲು ಕೂಡ ಅವಕಾಶ ನೀಡಬಾರದು. ಕನ್ನಡಕ್ಕೆ ದ್ರೋಹ ಬಗೆದ ಈತನ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕರಾವಳಿ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಒಳ್ಳೆಯದಲ್ಲ. ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ನಾವು ಹೋರಾಟ ಮಾಡಿದ್ದೆವು. ಸರ್ಕಾರ ಯಾರನ್ನೋ ಓಲೈಕೆ ಮಾಡುತ್ತಿದ್ದು, ಕಾನೂನು ಕಾಪಾಡುವಲ್ಲಿ ಸೋತಿದೆ. ಸರ್ಕಾರ ಮತೀಯವಾದಕ್ಕೆ ಪುಷ್ಠಿ ನೀಡುತ್ತಿರುವುದರಿಂದ ಇಂತಹ ಘಟನೆ ನಡೆಯುತ್ತಿದೆ ಎಂದರು.

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]