ಬೆಂ.ಗ್ರಾಂ.ಜಿಲ್ಲೆ: 2025-26ನೇ ಸಾಲಿನ ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ (Guest teachers and lecturers) ಹುದ್ದೆಗಳಿಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಜೂನ್ 1 ರಂದು ಏರ್ಪಡಿಸಲಾಗಿದೆ.
ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಜೂನ್ 1 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ತನಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಅಲ್ಪಸಂಖ್ಯಾತ ಮೌಲಾನಾ ಆಜಾದ್ ಮಾದರಿ ಶಾಲೆ, ಉರ್ದು ಶಾಲಾ ಆವರಣ ಮತ್ತು ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ, ಜೂನಿಯರ್ ಕಾಲೇಜು ಹತ್ತಿರ, ವಿಜಯಪುರ, ದೇವನಹಳ್ಳಿ ತಾಲ್ಲೂಕಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿ ಬೆಳಿಗ್ಗೆ 9:30 ರಿಂದ ಸಂಜೆ 6 ಗಂಟೆಯವರೆಗೆ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ:7663333135, 9535808084, 7338227541, 9632249214, 8660971267, 9740729196, 9845622337, 7676905779, 9986874875, 8660197516, 7663333135, 9535808084, 080-29787455 ಗೆ ಸಂಪರ್ಕಿಸಹುದು ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.