Study well and become a king or a servant, the choice is yours: DK Shivakumar

ಚೆನ್ನಾಗಿ ಓದಿ ರಾಜನಾಗುತ್ತೀರೋ, ಇಲ್ಲ ಸೇವಕರಾಗುತ್ತೀರೋ ಆಯ್ಕೆ ನಿಮ್ಮದು: ಮಕ್ಕಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು

ಬೆಂಗಳೂರು: “ಚೆನ್ನಾಗಿ ಓದಿದರೆ ಎಲ್ಲಾ ರಂಗದಲ್ಲೂ ರಾಜನಾಗಿ ರೂಪುಗೊಳ್ಳಬಹುದು. ಇಲ್ಲವಾದರೆ ಸೇವಕನಾಗಿ ಇರಬೇಕಾಗುತ್ತದೆ. ಇವೆರಡರ ಆಯ್ಕೆ ನಿಮ್ಮದು. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ. ಎಲ್ಲಿ ಮನಸ್ಸಿದೆಯೋ ಅಲ್ಲಿ ಮಾರ್ಗವಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು.

ಬೆಂಗಳೂರಿನ ಆಡುಗೋಡಿಯ ಅಯ್ಯಪ್ಪ ಗಾರ್ಡನ್ ನ ಪಟೇಲ್ ಮುನಿಚಿನ್ನಪ್ಪ ಪ್ರೌಢಶಾಲೆಯಲ್ಲಿ ಗುರುವಾರ ನಡೆದ “ಶಾಲಾ ಪ್ರಾರಂಭೋತ್ಸವ 2025-26” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.

“ಇಷ್ಟು ದಿನ ಮಕ್ಕಳು ರಜೆಯಲ್ಲಿ ನಲಿದಾಡಿದ್ದೀರಿ. ಈಗ ನಲಿಯುವುದರ ಜತೆಗೆ ಕಲಿಯಿರಿ ಎಂದು ಶಾಲೆಗಳಿಗೆ ನಿಮ್ಮನ್ನು ಸ್ವಾಗತಿಸುತ್ತಿದ್ದೇವೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಪೋಷಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.

ಕಳೆದ ವರ್ಷ ಬಾಗಲಕೋಟೆ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದರು. ಈ ವರ್ಷ ಬೆಳಗಾವಿಯ ಬೈಲಹೊಂಗಲದ ದೇವಲಾಪುರ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರೂಪಾ ಪಾಟೀಲ್ ಅವರು ಅಗ್ರಸ್ಥಾನ ಪಡೆದಿದ್ದಾರೆ. 10ನೇ ತರಗತಿ ಪರೀಕ್ಷೆಯಲ್ಲಿ 625 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಪೋಷಕರು ಹಾಗೂ ಶಿಕ್ಷಕರಿಗೆ ಸರ್ಕಾರ ಅಭಿನಂದಿಸುತ್ತಿದೆ” ಎಂದರು.

“ಬೀಜ ಬಿತ್ತಿದರೆ ಉತ್ತಮ ಬೆಳೆ ಬೆಳೆಯುತ್ತದೆ. ಜ್ಞಾನವನ್ನು ಬಿತ್ತಿದರೆ ಉತ್ತಮ ಪ್ರಜೆಗಳಾಗುತ್ತಾರೆ. ನೀವೆಲ್ಲರೂ ನಮ್ಮ ಆಸ್ತಿ ಎಂದು ನಮ್ಮ ಸರ್ಕಾರ ಹೆಚ್ಚಿನ ಸಹಕಾರ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು ಶಿಕ್ಷಕರು ಪ್ರಯತ್ನಿಸುತ್ತಿದ್ದಾರೆ. ಶಿಕ್ಷಣದ ಬೇರು ಕಹಿಯಾಗಿದ್ದರೂ ಫಲ ಸಿಕ್ಕಾಗ ಬಹಳ ಸಿಹಿಯಾಗಿರುತ್ತದೆ. ಬೇಸಿಗೆ ರಜೆ ಮುಗಿಸಿರುವ ನೀವು ಈಗ ಶಾಲೆಗೆ ಬಂದು ಕಲಿತು ಉತ್ತಮ ಪ್ರಜೆಯಾಗಬೇಕು” ಎಂದು ಹೇಳಿದರು.

ನೀವು ಜೀವನದಲ್ಲಿ ಯಶಸ್ಸು ಸಾಧಿಸಲು ಕನಸು ಕಾಣಬೇಕು, ಕನಸು ಈಡೇರಿಸಿಕೊಳ್ಳಲು ಬಯಸಬೇಕು. ಕನಸಿಗಾಗಿ ಬದ್ಧತೆ ಹೊಂದಿರಬೇಕು, ಅದಕ್ಕಾಗಿ ಶಿಸ್ತು ಹೊಂದಿರಬೇಕು. ನಿಮ್ಮ ಕನಸು ಗಗನದೆತ್ತರಕ್ಕೆ ಇರಬೇಕು. ಉದ್ಯೋಗ ಪಡೆಯುವುದಷ್ಟೇ ನಿಮ್ಮ ಕನಸಾಗಬಾರದು. ಬೇರೆಯವರಿಗೆ ಉದ್ಯೋಗ ಸೃಷ್ಟಿಸುವ ಮಟ್ಟಕ್ಕೆ ನೀವು ಬೆಳೆಯುವುದು ನಿಮ್ಮ ಕನಸಾಗಬೇಕು.

ಈ ದೇಶದಲ್ಲಿ ಅತಿ ಹೆಚ್ಚು ಇಂಜಿನಿಯರ್ ಗಳು, ವೈದ್ಯರು, ಮಾನವ ಸಂಪನ್ಮೂಲ ತಯಾರಾಗುತ್ತಿರುವುದು ಕರ್ನಾಟಕ ರಾಜ್ಯದಲ್ಲಿ. ವಿಶ್ವದ ಎಲ್ಲಾ ದೇಶಗಳಿಂದ ಬೆಂಗಳೂರಿಗೆ ಬಂದು ವ್ಯಾಸಂಗ ಮಾಡುತ್ತಿದ್ದಾರೆ. ಐಟಿ ಬಿಟಿ, ಸಂಶೋಧನೆ ಸೇರಿದಂತೆ ಪ್ರಮುಖ ಕ್ಷೇತ್ರಗಳು ಬೆಂಗಳೂರು ಯಶಸ್ಸು ಸಾಧಿಸಿದೆ.

ಕೃಷ್ಣರಾಜ ಒಡೆಯರ್ ಅವರ ಕಾಲದಿಂದ ವಿವಿಧ ಸರ್ಕಾರಗಳು ಇಲ್ಲಿ ಶೈಕ್ಷಣಿಕವಾಗಿ ಅಡಿಪಾಯ ಹಾಕಿದ ಪರಿಣಾಮ ನಮ್ಮ ರಾಜ್ಯ ಹಾಗೂ ಬೆಂಗಳೂರು ಈ ಸಾಧನೆ ಮಾಡಿದೆ ಎಂದು ತಿಳಿಸಿದರು.

ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಮಕ್ಕಳನ್ನು ದೇಶದ ನಿಧಿ ಎಂದರು. ರುಪರಪಹರಿಸದ, ದಾಯಾದಿ ದಕ್ಕಿಸದ, ನೀರಿನಲ್ಲಿ ನೆನೆಯದ, ಅಗ್ನಿಯಲ್ಲಿ ಸುಡದ ಗುಪ್ತ ನಿಧಿ ಎಂದರೆ ಅದು ವಿದ್ಯೆ. ಈ ವಿದ್ಯೆಯನ್ನು ನೀವು ಸರಿಯಾದ ರೀತಿ ಧಕ್ಕಿಸಿಕೊಳ್ಳಬೇಕು. ಆಮೂಲಕ ನೀವು ದೇಶದ ಆಸ್ತಿಯಾಗಬೇಕು.

ನಾನು ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯ ಪ್ರವೇಶಿಸಿದೆ. ಹೀಗಾಗಿ ಶಿಕ್ಷಣದ ಬಗ್ಗೆ ಹೆಚ್ಚು ಗಮನಹರಿಸಲು ಸಾಧ್ಯವಾಗಲಿಲ್ಲ. ನಾನು ವಿಧಾನಸೌಧಕ್ಕೆ ಹೋದಾಗ ಅಲ್ಲಿದ್ದ ಹಿರಿಯ ನಾಯಕರು ಭಾಷಣ ಕೇಳಿದ ನಂತರ ನನಗೆ ವಿದ್ಯೆ ಕೊರತೆ ಇದೆ ಎಂದು ಅರಿವಾಯಿತು. ಹೀಗಾಗಿ ನಾನು 47ನೇ ವಯಸ್ಸಿಗೆ ಮೈಸೂರು ಮುಕ್ತ ವಿವಿಯಲ್ಲಿ ಪದವಿ ಪಡೆದೆ. ನಾನು ಸಚಿವ ಸಂಪುಟ ಸದಸ್ಯನಾದಾಗ ಸಿಕ್ಕ ಸಂತೋಷಕ್ಕಿಂತ ಪದವಿ ಪಡೆದಾಗ ಹೆಚ್ಚು ಸಂತೋಷವಾಯಿತು ಎಂದರು.

ಸರ್ಕಾರಿ ಶಾಲೆಗಳನ್ನು ಉನ್ನತ ದರ್ಜೆಗೆ ಏರಿಸಲು 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಇದರಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡು ಶಿಕ್ಷಕರ ಕೊರತೆ ಇರುವ ಕಡೆ ಅವರಿಂದ ಶಿಕ್ಷಕರನ್ನು ಪೂರೈಸಲಾಗುವುದು. ಅನೇಕ ಸಂಸ್ಥೆಗಳು ಈಗಾಗಲೇ ಪಂಚಾಯ್ತಿ ಮಟ್ಟದಲ್ಲಿ ಈ ಶಾಲೆ ನಿರ್ಮಾಣಕ್ಕೆ ಮುಂದಾಗಿವೆ.

ರಾಮಲಿಂಗಾ ರೆಡ್ಡಿ ಅವರು ಬಿಟಿಎಂ ಕ್ಷೇತ್ರದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳಾಗಿ ಪರಿವರ್ತಿಸಿದ್ದಾರೆ. ಅವರ ಕ್ಷೇತ್ರದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಆಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ ಎಂದು ತಿಳಿಸಿದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!