ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿಗೆ, ಹಿಂದೆಯಿಂದ ಬಂದ ಕಂಟೇನರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿರುವ ಘಟನೆ (Accident) ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಓಬದೇನಹಳ್ಳಿ ಬಳಿ ನಡೆದಿದೆ.
ಇಂದು ಬೆಳಗ್ಗೆ ನೆಲಮಂಗಲ ಕಡೆಯಿಂದ ದೇವನಹಳ್ಳಿ ಕಡೆಗೆ ತೆರಳುವ ವೇಳೆ ಓಬದೇನಹಳ್ಳಿ ಬಳಿ ಮಳೆಯ ಕಾರಣ ಮುಂದೆ ಸಾಗುತ್ತಿದ್ದ ಲಾರಿ ಕಾಣದೆ, ಹಿಂದಿನಿಂದ ಬಂದ ಕಂಟೇನರ್ ಲಾರಿ ಏಕಾಏಕಿ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಘಟನೆಯಲ್ಲಿ ಕಂಟೇನರ್ ಲಾರಿ ಚಾಲಕನಿಗೆ ತೀವ್ರ ಪೆಟ್ಟಾಗಿರುವುದಾಗಿ ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.