ಸಿದ್ದರಾಮಯ್ಯನವರೇ, ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ನಾಟಕ ಸಾಕು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

Floods in Kalyana Karnataka; H.D. Kumaraswamy urges state government to urgently undertake relief work

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಮಳೆ ಹಾಗೂ ನೆರೆ ಪರಿಸ್ಥಿತಿಯಿಂದ ಜನರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರಾವಳಿ ಜನರ ಕಣ್ಣಲ್ಲಿ ಕಣ್ಣೀರ ಬದಲಿಗೆ ರಕ್ತಕಣ್ಣೀರು ಸುರಿಸಲು ಸರಕಾರ ಹಪಾಹಪಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆ ಜನಜೀವನವನ್ನು ಛಿದ್ರಗೊಳಿಸಿದೆ. ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ, ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ ‘ರಕ್ತಕಣ್ಣೀರು’ ಸುರಿಯಲಿ ಎಂದು ಹಪಾಹಪಿಸುತ್ತಿದೆ! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೆ, ರಸ್ತೆ, ಸೇತುವೆಗಳು ಕುಸಿದಿವೆ. ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನ ವಿಲವಿಲವೆನ್ನುತ್ತಿದ್ದಾರೆ. ಮೂರಾಬಟ್ಟೆಯಾಗಿರುವ ಅವರ ಬದುಕಿನ ರಕ್ಷಣೆಗೆ ಸರಕಾರದ ಕ್ರಮವೇನು? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

‘ಕೋಟೆ ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಬಡಿದುಕೊಂಡರು’ ಎನ್ನುವಂತೆ ಮಳೆಯಲ್ಲಿ ಬದುಕು ಕೊಚ್ಚಿಹೋದ ಮೇಲೆ ಸಚಿವರಿಗೆ ಹೋಗಿ ಎಂದು ಮುಖ್ಯಮಂತ್ರಿ ಅಪ್ಪಣೆ ಕೊಟ್ಟರೆ ಫಲವೇನು? ಮಳೆ ಬರುವ ಮೊದಲು ಏನು ಮಾಡಿದ್ದೀರಿ? ಇದೇನಾ ಜನಪರ ಆಡಳಿತ? ನುಡಿದಂತೆ ನಡೆಯುವುದು ಎಂದರೆ ಹೀಗೆನಾ? ಎಂದು ಸಚಿವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರಕಾರಕ್ಕೆ ಕರಾವಳಿ ಮಳೆ ಬಗ್ಗೆ ಚಿಂತೆ ಇಲ್ಲ. ಆದರೆ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ. ಆ ಕಾಳಜಿ ಕೊಲೆಗಳನ್ನು ಹತ್ತಿಕ್ಕಲಿಕ್ಕಲ್ಲ, ಕೊಲೆಗಳಲ್ಲೂ ‘ರಾಜಕೀಯ ಕೂಳು’ ಬೇಯಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರಕಾರ ಹವಣಿಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯಅವರನ್ನು ನೇರವಾಗಿ ಪ್ರಶ್ನಿಸಿರುವ ಕೇಂದ್ರ ಸಚಿವರು; ನೀವು ಎರಡು ವರ್ಷದಿಂದ ಅಧಿಕಾರದಲ್ಲಿದ್ದೀರಿ. ಅನ್ಯಪಕ್ಷಗಳನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದೀರಿ. ನೀವು ಅಧಿಕಾರಕ್ಕೆ ಬಂದ ಮೇಲೆ ಕರಾವಳಿ ಭಾಗದಲ್ಲಿ ಎಷ್ಟು ಹತ್ಯೆಗಳಾದವು? ಅವನ್ನು ಹತ್ತಿಕ್ಕಲಿಲ್ಲ ಯಾಕೆ? ಒಂದು ಸಮುದಾಯ ನಿಮ್ಮ ಪಕ್ಷಕ್ಕೆ ನೂರಕ್ಕೆ ನೂರರಷ್ಟು ವೋಟು ಕೊಟ್ಟಿದೆಯಲ್ಲವೇ? ಅವರನ್ನು ರಕ್ಷಿಸಲು ವಿಫಲರಾಗಿರುವ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ!! ಎಂದು ದೂರಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದೀರಿ! ಎಂದು ಅತ್ಯಂತ ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವರು, ಸಿದ್ದರಾಮಯ್ಯನವರೇ, ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ನಾಟಕ ಸಾಕು. ಕೂಡಲೇ ಕರಾವಳಿಗೆ ಭೇಟಿ ನೀಡಿ. ಮಳೆ, ಕೊಲೆಗಳಿಂದ ತತ್ತರಿಸಿರುವ ಅಲ್ಲಿನ ಜನತೆಗೆ ಧೈರ್ಯ ತುಂಬಿ. ಪ್ರಕೃತಿ ಪ್ರೇರಿತ ಮಳೆ ವಿಕೋಪ, ನಿಮ್ಮ ಪಕ್ಷ ಪ್ರೇಷಿತ ‘ಕೊಲೆ ವಿಕೋಪ’ಕ್ಕೆ ಪರಿಹಾರ ಕಂಡುಕೊಳ್ಳಿ. ಮುಖ್ಯಮಂತ್ರಿಯಾಗಿ ಇದು ನಿಮ್ಮ ತಕ್ಷಣದ ಕರ್ತವ್ಯ ಎಂದು ಸಲಹೆ ಮಾಡಿದ್ದಾರೆ.

ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ದ್ರಾವಿಡರ ನಾಡು ತಮಿಳುನಾಡಿನಲ್ಲಿ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಬುಡಮೇಲು ಮಾಡಿರುವ ಟಿವಿಕೆ (TVK) ಪಕ್ಷದ ಮುಖಂಡ ವಿಜಯ್ (Vijay) ಅವರು ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

[ccc_my_favorite_select_button post_id="121783"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]