ಡಿಕೆ ಶಿವಕುಮಾರ್ ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ನೀಡಿದ್ದು ಯಾಕೆ?: ಕಾಲೆಳೆದ ಹೆಚ್.ಡಿ.ಕುಮಾರಸ್ವಾಮಿ

Enough with the hit and run, put the documents against me before the people: DK Shivakumar challenges H.D. Kumaraswamy

ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಅವರ ಕಾಲೆಳೆದಿದ್ದಾರೆ.

ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿಕೆ ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವರು ಕೇಳಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.

ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದ್ದಾರೆ.

ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ದ್ರಾವಿಡರ ನಾಡು ತಮಿಳುನಾಡಿನಲ್ಲಿ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಬುಡಮೇಲು ಮಾಡಿರುವ ಟಿವಿಕೆ (TVK) ಪಕ್ಷದ ಮುಖಂಡ ವಿಜಯ್ (Vijay) ಅವರು ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

[ccc_my_favorite_select_button post_id="121783"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]