Case pending in Bengaluru Rural district AC, DC court: CM Tharate

ಬೆಂ.ಗ್ರಾ.ಜಿಲ್ಲೆ AC, DC ಕೋರ್ಟ್ ನಲ್ಲಿ ಪ್ರಕರಣ ಬಾಕಿ: ಸಿಎಂ ತರಾಟೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.

ಈ ವೇಳೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.

Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ‌ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು.

ಈ ಬಗ್ಗೆ ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು.

ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.

ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಯ ವೇಳೆ ಮುಖ್ಯಮಂತ್ರಿಗಳು ನೀಡಿದ ಪ್ರಮುಖ ಅಂಶಗಳು…

ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಮಳೆ ಹಾನಿಗೆ ಪರಿಹಾರ ಒದಗಿಸಲು ಯಾವುದೇ ಅನುದಾನದ ಕೊರತೆಯಿಲ್ಲ.

ಜಿಲ್ಲೆಗಳಲ್ಲಿ SDRF ಅಡಿ ಒಟ್ಟಾರೆಯಾಗಿ ಒಂದು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಲಭ್ಯವಿದೆ.

ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಉಂಟಾದರೆ ಈಗಾಗಲೇ ಪರಿಹಾರ ಒದಗಿಸುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ತಕ್ಷಣ ಪರಿಹಾರ ಒದಗಿಸುವ ಕಾರ್ಯ ನಡೆಯಬೇಕಿದೆ.

ಭೂಕುಸಿತದಂತಹ ಪ್ರಕರಣಗಳಲ್ಲಿ ಸಾವಿನ ಸಂಭಾವ್ಯತೆಯನ್ನು ತಪ್ಪಿಸಲು, ಜನರ ತೆರವು ಕಾರ್ಯ ಸೇರಿದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆ ಹಾನಿ ಪ್ರದೇಶಗಳಿಗೆ ಡಿಸಿ, ಸಿಇಒ ತಕ್ಷಣ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು.

ಸಂಪೂರ್ಣ ಮನೆ ಹಾನಿ ಪ್ರಕರಣಗಳಲ್ಲಿ ರೂ. 1.20 ಲಕ್ಷ ಮನೆ ಹಾನಿ ತಕ್ಷಣ ಪರಿಹಾರ ಒದಗಿಸಲಾಗುತ್ತಿದೆ. ಅಂತಹವರಿಗೆ ಹೊಸ ಮನೆ ಒದಗಿಸಲು ಕಳೆದ ವರ್ಷದಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ವಿವಿಧ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಬೇಕು.

ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಅವರು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ.

ಬೆಂಗಳೂರು ನಗರದಲ್ಲಿ ಮಳೆ ಬಗ್ಗೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಯಾಕೆ ಸಾಧ್ಯವಿಲ್ಲ. ತಗ್ಗು ಪ್ರದೇಶ, ನೀರು ನಿಲ್ಲುವ ಪ್ರದೇಶದ ಮಾಹಿತಿ ಮೊದಲೇ ಇರುತ್ತದೆ. ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾ ಶೀಲರಾಗಿ ಕಾರ್ಯನಿರ್ವಹಿಸಬೇಕು. ತಾತ್ಕಾಲಿಕ ಕ್ರಮಗಳೊಂದಿಗೆ ಶಾಶ್ವತ ಪರಿಹಾರಕ್ಕೂ ಕ್ರಮ ಕೈಗೊಳ್ಳಬೇಕು.

ಗ್ರಾಮ ಮಟ್ಟದಲ್ಲಿ ಎಲ್ಲಾ ಸರ್ಕಾರಿ ಜಮೀನು ಗುರುತಿಸಿ, ಒತ್ತುವರಿಯನ್ನು ಗುರುತಿಸುವ ಕಾರ್ಯ ಶೇ.95ರಷ್ಟು ಪೂರ್ಣಗೊಂಡಿದೆ. 14,15,492 ಎಕರೆ ಸರ್ಕಾರಿ ಜಮೀನು ಒತ್ತುವರಿಯನ್ನು ಈಗಾಗಲೇ ಗುರುತಿಸಲಾಗಿದೆ.

ಬಗರ್ಹುಕುಂ ಒಟ್ಟು 14,28,838 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ವಿಲೇವಾರಿ ಬಹಳ ವಿಳಂಬವಾಗುತ್ತಿದ್ದು, ಅರ್ಹ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು.

ಸಭೆ ವೇಳೆ ನಾನಾ ವಿಚಾರಗಳಿಗೆ ಸಂಬಂಧಪಟ್ಟಂತೆ ಸಿಂ ನೀಡಿದ ಸೂಚನೆಗಳು…

ಸ್ಮಶಾನ ಮತ್ತು ಕಬರಸ್ತಾನಗಳಿಗೆ ಜಮೀನು ಒದಗಿಸಲು ಆದ್ಯತೆ ನೀಡಬೇಕು.

ಸರ್ಕಾರಿ ಜಮೀನು ಲಭ್ಯವಿಲ್ಲದ ಕಡೆ ಖಾಸಗಿ ಜಮೀನು ಖರೀದಿ ಮಾಡಿ ಒದಗಿಸಬೇಕು.

ಹಾಸ್ಟೆಲ್ಗಳಿಗೆ ನಿವೇಶನ ಗುರುತಿಸುವ ಸಂದರ್ಭದಲ್ಲಿ ಊರಿನಿಂದ ಬಹಳ ದೂರವಿರುವ ನಿರ್ಜನ ಪ್ರದೇಶದಲ್ಲಿ ನೀಡಬಾರದು. ನಿವೃತ್ತ ಸೈನಿಕರಿಗೆ ನಿವೇಶನ ಕುರಿತಾದ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಿ ಅವರಿಗೆ ಜಮೀನು ಒದಗಿಸಬೇಕು. ಪ್ರತಿ ತಾಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನ ಸಂಪೂರ್ಣ ಮಾಹಿತಿ ಲಭ್ಯವಿದ್ದು, ಒತ್ತುವರಿಯಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸಬೇಕು

ಮುಂದಿನ ಸಭೆಯ ವೇಳೆ ನಿವೇಶನ ಲಭ್ಯವಿಲ್ಲದ ಬಗ್ಗೆ ಯಾವುದೇ ದೂರು ಬರಬಾರದು.

ಸೈನಿಕರ ಕಲ್ಯಾಣ ನಿಗಮ ಸ್ಥಾಪಿಸುವ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಒಟ್ಟು 59 ತಾಲೂಕುಗಳಲ್ಲಿ ಕ್ರೀಡಾಂಗಣಗಳು ಲಭ್ಯವಿಲ್ಲ. ಎಲ್ಲಾ ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನು ಗುರುತಿಸಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು.

ಯುವನಿಧಿ ಯೋಜನೆಯಡಿ ಪ್ರತಿ ಫಲಾನುಭವಿಗೆ ಎರಡು ವರ್ಷಗಳ ಅವಧಿಗೆ ನೆರವು ನೀಡಲಾಗುತ್ತಿದ್ದು, ಈ ಅವಧಿಯಲ್ಲಿ ಫಲಾನುಭವಿಗಳಿಗೆ ಉದ್ಯೋಗ ದೊರೆತರೆ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಿದರೆ ನೆರವು ಸ್ಥಗಿತಗೊಳ್ಳುತ್ತದೆ.

ಪ್ರತಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರ ಬೆಳವಣಿಗೆ ಮೇಲೆ ನಿಗಾ ವಹಿಸಬೇಕು.

ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು. ಅರ್ಜಿಗಳನ್ನು ಕಾಟಾಚಾರಕ್ಕೆ ವಿಲೇವಾರಿ ಮಾಡದೆ ಅರ್ಜಿಗಳಿಗೆ ನ್ಯಾಯ ಒದಗಿಸಬೇಕು.

ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು. ಅರ್ಜಿಗಳನ್ನು ಕಾಟಾಚಾರಕ್ಕೆ ವಿಲೇವಾರಿ ಮಾಡದೆ ಅರ್ಜಿಗಳಿಗೆ ನ್ಯಾಯ ಒದಗಿಸಬೇಕು.

ಕಾನೂನು ಬದ್ಧವಾಗಿ ಅರ್ಜಿಯನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲದಿದ್ದರೆ ಮೊದಲೇ ಅರ್ಜಿದಾರರಿಗೆ ತಿಳಿಸಬೇಕು.

ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಹಶೀಲ್ದಾರ್ಗಳು ತಾಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ನಡೆಸಬೇಕು.

ಸಕಾಲ ಯೋಜನೆಯಡಿ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

ಜಲಜೀವನ ಮಿಷನ್ ಅಡಿ ಯೋಜನೆ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಅನುಷ್ಠಾನ ಆಗಿಲ್ಲ. ಅದೇ ರೀತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು.

ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರೂ.1400 ಕೋಟಿ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳ ಕೂಲಿ ಹಣ ಪಾವತಿಗೆ ಬಾಕಿಯಿದೆ. ಕೇಂದ್ರದಿಂದ ಹಣ ಬಿಡುಗಡೆಗೆ ಒತ್ತಡ ಹಾಕಬೇಕು.

ಗ್ರಾಮೀಣ ಪ್ರದೇಶದಲ್ಲಿ 1.50 ಕೋಟಿ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಾಕಿಯಿರುವ 1352 ಇ-ಸ್ವತ್ತು ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಬೇಕು.

ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್ಗಳಲ್ಲಿ ಮಾತ್ರ ಪ್ರಾರಂಭವಾಗಿದೆ. ಒಂದು ವಾರದ ಒಳಗಾಗಿ ಇನ್ನುಳಿದ ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು. ಇನ್ನೂ 5ಕಡೆ ಇಂದಿರಾ ಕ್ಯಾಂಟೀನ್ಗಳಿಗೆ ಸ್ಥಳ ಗುರುತಿಸಬೇಕಾಗಿದೆ. ತಕ್ಷಣ ನಿವೇಶನ ಗುರುತಿಸಬೇಕು.

ನಗರಾಭಿವೃದ್ಧಿ ಇಲಾಖೆಯಡಿ ಒಟ್ಟು 46,85,107 ಎ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, 21,18,459 ಸ್ವತ್ತುಗಳಿಗೆ ಇ-ಖಾತಾ ನೀಡಲಾಗಿದೆ. 9,93,342 ಅನಧಿಕೃತ ಬಿ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, ಇದುವರೆಗೆ 2,21,691 ಬಿ-ಖಾತಾ ನೀಡಲಾಗಿದೆ. ಎಲ್ಲಾ ಸ್ವತ್ತುಗಳಿಗೆ ನಿಯಮಾನುಸಾರ ಖಾತಾ ಒದಗಿಸಿ ತೆರಿಗೆ ವ್ಯಾಪ್ತಿಗೆ ಬರಲು ಕ್ರಮ ಕೈಗೊಳ್ಳಬೇಕು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಗ್ಯು ಪ್ರಮಾಣ ನಿಯಂತ್ರಣದಲ್ಲಿದೆ. ಆದರೂ ಡೆಂಗ್ಯು ನಿಯಂತ್ರಣಕ್ಕೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಕೊರೊನಾ ಬಗ್ಗೆ ಯಾವುದೇ ಆತಂಕ ಅಗತ್ಯವಿಲ್ಲ. ಆದರೆ ಎಚ್ಚರಿಕೆ ಅಗತ್ಯ.

ಎಲ್ಲಾ ತಾಲೂಕುಗಳಲ್ಲಿ ಡಯಾಲಿಸಿಸ್ ಯುನಿಟ್ ಪ್ರಾರಂಭಿಸಲು ಈಗಾಗಲೇ ಆದೇಶ ನೀಡಲಾಗಿದೆ. ಇವು ಪ್ರಾರಂಭವಾಗಿದೆಯೇ? ಪ್ರಾರಂಭವಾಗಿದ್ದರೆ ಕಾರ್ಯನಿರ್ವಹಿಸುತ್ತಿವೆಯೇ? ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ಖಾತ್ರಿಪಡಿಸುವುದು ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿಯಾಗಿದೆ.

ಜಿಲ್ಲಾಸ್ಪತ್ರೆ, ತಾಲೂಕಾಸ್ಪತ್ರೆಗಳಿಗೆ ನೀವು ನಿರಂತರವಾಗಿ ಭೇಟಿ ನೀಡಬೇಕು. ಜಿಲ್ಲಾ ಮಟ್ಟದಲ್ಲಿ ವೈದ್ಯಾಧಿಕಾರಿಗಳನ್ನು ಅನಗತ್ಯವಾಗಿ ಸಭೆಗಳಿಗೆ ಆಹ್ವಾನಿಸಬಾರದು.

ಬಾಣಂತಿಯರ ಮರಣ ಪ್ರಮಾಣ ಕೇರಳಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹೆಚ್ಚಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.30 ರಷ್ಟು ಕಡಿಮೆಯಾಗಿದ್ದರೂ, ಇದನ್ನು ಇನ್ನಷ್ಟು ಕಡಿಮೆಗೊಳಿಸಲು ಸಾಂಸ್ಥಿಕ ಹೆರಿಗೆಯನ್ನು ಹೆಚ್ಚಿಸುವುದು, ಅಗತ್ಯ ಉಪಕರಣಗಳ ಖರೀದಿ ಸೇರಿದಂತೆ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

ಸ್ಮಶಾನ ಮತ್ತು ಕಬರಸ್ತಾನಗಳಿಗೆ ಜಮೀನು ಒದಗಿಸಲು ಆದ್ಯತೆ ನೀಡಬೇಕು. ಸರ್ಕಾರಿ ಜಮೀನು ಲಭ್ಯವಿಲ್ಲದ ಕಡೆ ಖಾಸಗಿ ಜಮೀನು ಖರೀದಿ ಮಾಡಿ ಒದಗಿಸಬೇಕು.

ಹಾಸ್ಟೆಲ್ಗಳಿಗೆ ನಿವೇಶನ ಗುರುತಿಸುವ ಸಂದರ್ಭದಲ್ಲಿ ಊರಿನಿಂದ ಬಹಳ ದೂರವಿರುವ ನಿರ್ಜನ ಪ್ರದೇಶದಲ್ಲಿ ನೀಡಬಾರದು. ನಿವೃತ್ತ ಸೈನಿಕರಿಗೆ ನಿವೇಶನ ಕುರಿತಾದ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಿ ಅವರಿಗೆ ಜಮೀನು ಒದಗಿಸಬೇಕು. ಪ್ರತಿ ತಾಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನ ಸಂಪೂರ್ಣ ಮಾಹಿತಿ ಲಭ್ಯವಿದ್ದು, ಒತ್ತುವರಿಯಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸಬೇಕು.

ಮುಂದಿನ ಸಭೆಯ ವೇಳೆ ನಿವೇಶನ ಲಭ್ಯವಿಲ್ಲದ ಬಗ್ಗೆ ಯಾವುದೇ ದೂರು ಬರಬಾರದು.

ಸೈನಿಕರ ಕಲ್ಯಾಣ ನಿಗಮ ಸ್ಥಾಪಿಸುವ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಒಟ್ಟು 59 ತಾಲೂಕುಗಳಲ್ಲಿ ಕ್ರೀಡಾಂಗಣಗಳು ಲಭ್ಯವಿಲ್ಲ. ಎಲ್ಲಾ ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನು ಗುರುತಿಸಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು.

ಯುವನಿಧಿ ಯೋಜನೆಯಡಿ ಪ್ರತಿ ಫಲಾನುಭವಿಗೆ ಎರಡು ವರ್ಷಗಳ ಅವಧಿಗೆ ನೆರವು ನೀಡಲಾಗುತ್ತಿದ್ದು, ಈ ಅವಧಿಯಲ್ಲಿ ಫಲಾನುಭವಿಗಳಿಗೆ ಉದ್ಯೋಗ ದೊರೆತರೆ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಿದರೆ ನೆರವು ಸ್ಥಗಿತಗೊಳ್ಳುತ್ತದೆ. ಪ್ರತಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರ ಬೆಳವಣಿಗೆ ಮೇಲೆ ನಿಗಾ ವಹಿಸಬೇಕು.

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ ಪತ್ತೆ..!

ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ

ಧರ್ಮಸ್ಥಳ (Dharmasthala): ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.31 ರಂದು 6ನೇ ಗುರುತಿನ ಎಸ್‌ಐಟಿ (SIT) ನಡೆಸಿದ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿ ವಿಜ್ಞಾನ ಅಧಿಕಾರಿಗಳು ಅದನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಧರ್ಮಸ್ಥಳ ಗ್ರಾಮ

[ccc_my_favorite_select_button post_id="111942"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!