ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Yojana)ಯ ಫಲಾನುಭವಿಗಳಿಗೆ ಕೊನೆಗೂ ಗುಡ್‌ನ್ಯೂಸ್ ದೊರಕಿದೆ.
ಹಲವು ತಿಂಗಳಿನಿಂದ ಸಿಗದೇ ಬಾಕಿಯಿರುವ ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ ವಾರದೊಳಗೆ ಎಲ್ಲ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದ್ದಾರೆ.
ಇತ್ತೀಚಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಫೆಬ್ರವರಿ, ಮಾರ್ಚ್ ಮತ್ತು ಎಪ್ರಿಲ್ ತಿಂಗಳ 6000 ರೂ. ಹಣವನ್ನು ಈಗಾಗಲೇ ಬಿಡುಗಡೆ ಮಾಡಿದ್ದೇವೆ.
ಇದರಲ್ಲಿ ಈಗ ಎಲ್ಲಾ ಜಿಲ್ಲೆಯವರಿಗೆ ಫೆಬ್ರವರಿ ತಿಂಗಳ ಹಣ ಮಾತ್ರ ಬಂದಿದೆ. ಇನ್ನುಳಿದ ಎರಡು ತಿಂಗಳ ಬಾಕಿ ಕಂತುಗಳನ್ನು ಈಗಾಗಲೇ ಬಿಡುಗಡೆ ಮಾಡಿದ್ದೇವೆ. ಆದಷ್ಟು ಬೇಗ ಎಲ್ಲರ ಖಾತೆಗೆ ಜಮಾ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮಾರ್ಚ್‌ನಲ್ಲಿ ಹಣಕಾಸು ವರ್ಷ ಮುಕ್ತಾಯವಾಗುವ ಕಾರಣ ತಿಂಗಳ ಹಣ ಜಮೆ ಆಗುವುದು ತಡವಾಗಿದೆ. ಉಳಿದಂತೆ ಯಾವುದೇ ಸಮಸ್ಯೆಗಳಿಲ್ಲ. ಸರಿಯಾದ ಸಮಯಕ್ಕೆ ಹಣ ಜಮೆ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.