600 ಕೋಟಿ ರೂ. ವೆಚ್ಚದ ನೈಡೆಕ್ ನೂತನ ಘಟಕಕ್ಕೆ ಚಾಲನೆ

Naidec's new unit worth Rs 600 crore inaugurated

ಧಾರವಾಡ: ನೈಡೆಕ್ ಕಂಪನಿಯು (Naidec’s) 600 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಅಭಿವೃದ್ಧಿ ಪಡಿಸಿರುವ ನೂತನ ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ (MB Patila) ಸೋಮವಾರ ಉದ್ಘಾಟಿಸಿದರು.

ಜಪಾನ್ ಮತ್ತು ಫ್ರೆಂಚ್ ತಂತ್ರಜ್ಞಾನದ ಸಂಯೋಗವಿರುವ ಈ ಘಟಕವು 800 ಜನರಿಗೆ ನೇರ ಉದ್ಯೋಗ ನೀಡಲಿದೆ. ಕಂಪನಿಯ ಬ್ಯಾಟರಿ ಸೊಲ್ಯೂಷನ್ ಸ್ಥಾವರಕ್ಕೆ 20 ಎಕರೆ ಭೂಮಿ ಕೊಡಲಾಗಿದೆ. ಇಲ್ಲಿ ತಯಾರಾಗುವ 2, 3 ಮತ್ತು 4 ಮೆಗಾವ್ಯಾಟ್ ಸಾಮರ್ಥ್ಯದ ಹೆವಿ ಡ್ಯೂಟಿ ಮಶೀನ್ ಗಳು ಡೇಟಾ ಸೆಂಟರ್ ಉದ್ಯಮದ ಅಗತ್ಯ ಪೂರೈಸಲಿದೆ.

ಈ ಸಾಧನಗಳನ್ನು ಅಮೆರಿಕ ಮತ್ತು ಯೂರೋಪ್ ಗೆ ರಫ್ತು ಮಾಡಲಾಗುವುದು. ಘಟಕವು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆ ಆರಂಭಿಸಿದರೆ 3,000 ಉದ್ಯೋಗಸೃಷ್ಟಿ ಆಗಲಿದೆ ಅವರು ತಿಳಿಸಿದ್ದಾರೆ.

ಧಾರವಾಡ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಈ ಕಾರ್ಖಾನೆ ಸ್ಥಾಪಿಸಲಾಗಿದೆ.

ಈ ಘಟಕದಲ್ಲಿ ಡೇಟಾ ಸೆಂಟರ್ ಉದ್ಯಮಕ್ಕೆ ಬೇಕಾದ ಪವರ್ ಬ್ಯಾಕಪ್ ಜನರೇಟರ್, ವಿಂಡ್ ಜನರೇಟರ್, ಬ್ಯಾಟರಿ ಸ್ಟೋರೇಜ್, ವಿದ್ಯುತ್ ಚಾಲಿತ ದ್ವಿಚಕ್ರ, ತ್ರಿಚಕ್ರ ಮತ್ತು ಬಸ್ ಇವುಗಳಿಗೆ ಬೇಕಾದ ಸಾಧನಗಳನ್ನು ಉತ್ಪಾದಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ನಮ್ಮ ಸರಕಾರವು ಉತ್ತರ ಕರ್ನಾಟಕದ ಭಾಗಗಳಲ್ಲೂ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡಿದೆ. ಇದಕ್ಕಾಗಿ ಹೊಸ ಕೈಗಾರಿಕಾ ನೀತಿಯಲ್ಲಿ ಹಲವು ರಿಯಾಯಿತಿ ಮತ್ತು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನೈಡೆಕ್ ಕಂಪನಿಯ ಈ ಯೋಜನೆಗೆ ಕೇವಲ ಎರಡು ವರ್ಷಗಳಲ್ಲಿ ಭೂಮಿ ಮಂಜೂರು ಮಾಡಿ, ತ್ವರಿತವಾಗಿ ಅನುಷ್ಠಾನಕ್ಕೆ ಬರುವಂತೆ ಮಾಡಿದೆ ಎಂದು ಅವರು ವಿವರಿಸಿದ್ದಾರೆ.

ಕೃಷ್ಣಾ ನ್ಯಾಯಾಧಿಕರಣವು ಕೈಗಾರಿಕಾ ಅಗತ್ಯಗಳ ಬಳಕೆಗೆ 4 ಟಿಎಂಸಿ ನೀರನ್ನು ಮೀಸಲಿಟ್ಟಿದೆ. ಇದರಲ್ಲಿ ನಾವು ಇದುವರೆಗೆ ಕೇವಲ ಅರ್ಧ ಟಿಎಂಸಿ ನೀರನ್ನು ಮಾತ್ರ ಬಳಸಿಕೊಂಡಿದ್ದೇವೆ. ಇದರಲ್ಲಿ ಇನ್ನೂ 3.5 ಟಿಎಂಸಿ ನೀರು ಹಾಗೆಯೇ ಇದೆ. ಇದರಲ್ಲಿ ನಾವು ರೈತರ ಪಾಲಿನ ನೀರನ್ನೇನೂ ಮುಟ್ಟಿಲ್ಲ. ಹಿಡಕಲ್ ಜಲಾಶಯದ ಕೆಳಭಾಗದ ನೀರನ್ನಷ್ಟೇ ಬಳಸಿಕೊಂಡಿದ್ದೇವೆ. ಕೈಗಾರಿಕೆಗಳು ಬೆಳೆಯಬೇಕು ಎಂದರೆ ನೀರು ಅತ್ಯಗತ್ಯ ಎಂದು ಅವರು ನುಡಿದಿದ್ದಾರೆ.

ಅತ್ಯಂತ ಮಹತ್ವಾಕಾಂಕ್ಷಿ ಮತ್ತು ಶ್ರೇಷ್ಠ ಕಾರ್ಖಾನೆಯು ಶೀಘ್ರವಾಗಿ ಪೂರ್ಣಗೊಂಡಿದೆ. ಫ್ರಾನ್ಸ್ ಜಪಾನ್ ಅವರ ಎಲ್ಲರ ಸಮಕ್ಷಮದಿಂದ ಇಂದು ಉದ್ಘಾಟನೆ ಮಾಡುತ್ತಿದ್ದೇವೆ.

ಉತ್ತರ ಕರ್ನಾಟಕಕ್ಕೆ ಬಿಹ್ಯಾಂಡ್ ಬೆಂಗಳೂರು ತರ ಕೈಗಾರಿಕೆ ಬರಬೇಕು ಎಂದು ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರು ಸುತ್ತಮುತ್ತಲಿ ಸೇರಿ ಶೇಕಡ 75 ಬಂದಿದೆ. ಉತ್ತರ ಕರ್ನಾಟಕಕ್ಕೆ ಶೇಕಡಾ 45 ಪ್ರಪೋಸಲ್ ಬಂದಿದೆ. ಎಲ್ಲವನ್ನು ಸಹ ನಾವು ಹಿಂಬಾಲಿಸುತ್ತಿದ್ದೇವೆ. 6 ಲಕ್ಷ ಜನರಿಗೆ ಉದ್ಯೋಗ ಸಿಗಬೇಕು ಎಂದು ಅತ್ಯಂತ ಗಂಭೀರವಾಗಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಉದ್ದಿಮೆಗಳಿಗೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಾಗ ರೈತರಿಗೆ ತಕ್ಕ ಪರಿಹಾರ ಕೊಡಬೇಕಾಗುತ್ತದೆ. ನಾವು ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕಾದ ಅಗತ್ಯವಿದೆ ಎಂದು ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಜಪಾನ್ ಕಾನ್ಸುಲ್ ಜನರಲ್ ನಕಾನೆ ಸುಟೋಮು, ಫ್ರಾನ್ಸ್ ಕಾನ್ಸುಲ್ ಜನರಲ್ ಮಾರ್ಕ್ ಲಾಮಿ, ಕಂಪನಿಯ ಹಿರಿಯ ಅಧಿಕಾರಿಗಳಾದ ಮೈಕೆಲ್ ಬ್ರಿಗ್ಸ್, ಗ್ರೆಗ್ ಗಾರ್ಮನ್, ಗಿರೀಶ್ ಕುಲಕರ್ಣಿ ಉಪಸ್ಥಿತರಿದ್ದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]