ಗುಡ್ಮಾರ್ನಿಂಗ್ ನ್ಯೂಸ್: RCBಗೆ ಚೊಚ್ಚಲ ಕಪ್ ನಿರೀಕ್ಷೆ.. ಕಿಡಿಗೇಡಿಗಳಿಗೆ ಬೇಕಿದೆ ಕಡಿವಾಣ

RCB is looking forward to its first cup.

ಅಹಮದಾಬಾದ್: 18ನೇ ಆವೃತ್ತಿಯ ಐಪಿಎಲ್ (IPL) ಪಂದ್ಯಾವಳಿಯ ಹೈವೋಲ್ವೇಜ್ ಫೈನಲ್ RCB vs Punjab kings ನಡುವಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.

ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿಯುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ವಿರಾಟ್ ಕೊಹ್ಲಿಯ ಸುಮಾರು ಎರಡು ದಶಕಗಳ ಸುದೀರ್ಘ ಕಾಯುವಿಕೆಗೆ ಮುಕ್ತಿ ಸಿಗಲಿ ಎಂಬುದು ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ, ಕನಸು ಹಾಗೂ ಹಾರೈಕೆಯಾಗಿದೆ.

ಅಹಮದಾಬಾದ್ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಸಾವಿರಾರು ಆರ್ ಸಿಬಿ ಅಭಿಮಾನಿಗಳು ನಂ.18 ಜೆರ್ಸಿ ಧರಿಸುವುದರೊಂದಿಗೆ ಕೊಹ್ಲಿಯನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿರುವ ಕೊಹ್ಲಿಗೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುತ್ತಿದೆ. ಕ್ವಾಲಿಫೈಯರ್-1 ಪಂದ್ಯದಲ್ಲಿ ಪಂಜಾಬ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಡುವುದರೊಂದಿಗೆ ಈ ಬಾರಿ ಆರ್‌ಸಿಬಿ ಗೆಲ್ಲುವ ನೆಚ್ಚಿನ ತಂಡವಾಗಿ ಹೊರಹೊಮ್ಮಿದೆ.

ಈ ಸಲ ಕಪ್ ನಮೇ-ಹೌದು, ಇದು ಇಂದು-ನಿನ್ನೆ ಈ ಕೇಳುತ್ತಿರುವಂತಹ ಮಾತಲ್ಲ, ಕಳೆದ 18 ವರ್ಷಗಳ ಐಪಿಎಲ್ ಆವೃತ್ತಿ ವೇಳೆ ಕನ್ನಡಿಗರಿಂದ ಕೇಳಿ ಬರುತ್ತಿರುವ ಅಭಿ ಮಾನದ ನುಡಿ.

ಪ್ರತೀ ವರ್ಷ ಐಪಿಎಲ್ ಕ್ರಿಕೆಟ್ ಘೋಷಣೆ ಆಯಿತೆಂದರೆ ಸಾಕು, ಆರ್‌ಸಿಬಿ ಅಭಿಮಾನಿಗಳ ಮನದಾಳದ, ನಿರೀಕ್ಷೆಯ ಮಾತು ಅದೊಂದೇ. ಐಪಿಎಲ್ ಆವೃತ್ತಿ ನಡೆಯುತ್ತಿರುವ ವೇಳೆ ಆರ್‌ಸಿಬಿ ಅಪ್ಪಟ ಅಭಿಮಾನಿಗಳ ಪಾಲಿಗೆ ಅದೊಂದೇ ಮಂತ್ರ ಜಪ..!

ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ಅಂತಹ ದ್ದೊಂದು ವಿಶೇಷ ಕ್ರೇಜ್ ಹುಟ್ಟಿಸಿದೆ. 18 ವರ್ಷಗಳ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದೀಗ 4ನೇ ಬಾರಿಗೆ ಫೈನಲ್ ತಲುಪಿರುವ ಆರ್‌ಸಿಬಿ ಇದುವರೆಗೂ ಒಮ್ಮೆಯೂ ಪ್ರಶಸ್ತಿ ಗೆಲ್ಲದೆ ಇರುವುದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ಸೋಜಿಗದ ವಿಷಯ ಮತ್ತು ಅಷ್ಟೇ ನೋವಿನ ಸಂಗತಿ.

ಕಳೆದ 17 ಆವೃತ್ತಿಗಳಲ್ಲಿ ಆರ್‌ಸಿಬಿ ಒಮ್ಮೆಯೂ ಕಪ್ ಗೆಲ್ಲದಿದ್ದರೂ ಸಹ ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ಗಾಢ ಅಭಿಮಾನ ಮಾತ್ರ ವರ್ಷದಿಂದ ವರ್ಷಕ್ಕೆ ಏರುತ್ತಲೇ ಇದೆ. ಸಾಮಾಜಿಕ ಜಾಲತಾಣದಲ್ಲೂ ಕೂಡಾ ಉಳಿದ ಎಲ್ಲಾ ತಂಡಕ್ಕಿಂತಲೂ ಅದೆಷ್ಟೋ ಪಟ್ಟು ಫಾಲೋವರ್ಸ್ ಇರೋದು ಆರ್‌ಸಿಬಿಗೆ ಮಾತ್ರ.

ಹಾಗಾದರೆ ಐಪಿಎಲ್‌ನಲ್ಲಿ ಆರ್‌ಸಿಬಿ ಬಗ್ಗೆ ಮಾತ್ರ ಹೀಗ್ಯಾಕೆ ಅಷ್ಟೊಂದು ಕ್ರೇಜ್ ಎಂದು ಆಶ್ಚರ್ಯ ಪಡುವವರೂ ನಮ್ಮ ಮಧ್ಯೆ ಇರಬಹುದು. ಅದಕ್ಕೆ ಉತ್ತರ ತುಂಬಾ ಸರಳ, ಅದೇ ನೆಂದರೆ ಆರ್‌ಸಿಬಿ ಎಂದರೆ ಅದು ಕೇವಲ ಒಂದು ಹೆಸರು ಮಾತ್ರ ಅಲ್ಲ, ಆರ್‌ಸಿಬಿ ಎನ್ನುವುದು ಕನ್ನಡಿಗರ ಉಸಿರಲ್ಲಿ ಬೆರೆತಿದೆ.

ಆರ್‌ಸಿಬಿ ಕೇವಲ ಕನ್ನಡಿಗರ ಮಾತ್ರ ಅಲ್ಲ, ಬಹುತೇಕ ಭಾರತೀಯರ ಅಚ್ಚುಮೆಚ್ಚಿನ ತಂಡವೂ ಹೌದು. ಬೆಂಗಳೂರಿನಲ್ಲಿ ಐಪಿಎಲ್ ಟೂನಿಯ ಆರ್‌ಸಿಬಿ ಪಂದ್ಯ ಇದೆ ಎಂದರೆ ಸಾಕು, ಚಿನ್ನಸ್ವಾಮಿ ಸ್ಟೇಡಿಯಂ ಕೆಂಪು ಬಣ್ಣದಿಂದ ತುಂಬಿ ತುಳುಕುತ್ತದೆ.

‘ಈ ಸಲ ಆರ್‌ಸಿಬಿ ಟ್ರೋಫಿ ಗೆಲ್ಲದಿದ್ದರೆ ನಾನು ನನ್ನ ಹೆಂಡತಿಗೆ ವಿಚ್ಚೇದನ ಕೊಡ್ತೀನಿ..’ ಎಂಬ ಗಂಡನ ಹೇಳಿಕೆ.

‘ಆರ್‌ಸಿಬಿ ಗೆದ್ದರೆ ನಾವು ಫ್ಯಾನ್ಸ್ ಹಬ್ಬ ಮಾಡ್ಕೊತೀವಿ, ರಜಾ ಕೊಡಿ ಮುಖ್ಯಮಂತ್ರಿಗಳೇ..’ ಅಪ್ಪಟ ಅಭಿಮಾನಿಯ ಪ್ರೀತಿ ಪೂರ್ವಕ ಕೋರಿಕೆ, ಈ ಹೇಳಿಕೆ ಹಲವರಿಗೆ ಒಮ್ಮೊಮ್ಮೆ ತೀರಾ ಬಾಲಿಶ ಅನಿಸಬಹುದು, ಆದರೆ ಆರ್‌ಸಿಬಿ ತಂಡ ಮತ್ತು ಅಭಿಮಾನಿಗಳ ಮಧ್ಯೆ ಬಲವಾದ ಭಾವನೆಗಳ ಬಾಂಧ ವ್ಯದ ಬೆಸುಗೆ ಇದೆಂದು ಯೋಚಿಸುವವರಿಗೆ ಇಂತಹ ಹೇಳಿಕೆ ಗಳು ತಪ್ಪೇನಲ್ಲ ಎಂದೂ ಅರ್ಥಮಾಡಿಕೊಂಡವರಿದ್ದಾರೆ.

ಕಿಡಿಗೇಡಿಗಳ ಪೋಸ್ಟ್

ಗುಡ್ಮಾರ್ನಿಂಗ್ ನ್ಯೂಸ್: RCBಗೆ ಚೊಚ್ಚಲ ಕಪ್ ನಿರೀಕ್ಷೆ.. ಕಿಡಿಗೇಡಿಗಳಿಗೆ ಬೇಕಿದೆ ಕಡಿವಾಣ

ಇಂದು ನಡೆಯುವ ಪಂದ್ಯಕ್ಕೆ ಅಭಿಮಾನಿಗಳ ತಪನೆ ಒಂದೆಡೆಯಾದರೆ, ಕಿಡಿಗೇಡಿಗಳ ಹಾವಳಿ ಮತ್ತೊಂದೆಡೆ, RCB vs PK ವಿರುದ್ಧದ ಪಂದ್ಯದ ವಿರುದ್ಧ ಅವಹೇಳನಕಾರಿಯಾಗಿ ಸ್ಟೇಟಸ್ ಪೋಸ್ಟ್ ಮಾಡುವ ಮೂಲಕ, RCB, ಪಂಜಾಬ್‌ ಕಿಂಗ್ಸ್ ಅಭಿಮಾನಿಗಳನ್ನು ಕೆರಳಿಸುತ್ತಿದ್ದಾರೆ‌.

ಇದು ಇಂದು ರಾತ್ರಿ ನಡೆಯುವ ಪಂದ್ಯದ ವೇಳೆ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕೂಡಲೇ ಪೊಲೀಸ್ ಇಲಾಖೆ ಎಚ್ಚೆತ್ತು ಇಂತಹ ಕಿಡಿಗೇಡಿಗಳಿಗೆ ವಾರ್ನಿಂಗ್ ನೀಡಬೇಕಿದೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]