There is a big conspiracy against Dharmasthala: DCM D.K. Shivakumar

ಶಾಲಾ ಪಠ್ಯಕ್ರಮದಲ್ಲಿ ಕೆಂಪೇಗೌಡರ ಪಾಠ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಇದೇ ತಿಂಗಳು 27ರಂದು ಕೆಂಪೇಗೌಡ ಜಯಂತಿ ದಿನದಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಅವರು ಪೂರ್ವಭಾವಿ ಸಭೆ ನಡೆಸಿ, ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

“ನಾಡಪ್ರಭು ಕೆಂಪೇಗೌಡರ ಜನ್ಮದಿನ ಆಚರಣೆ ವಿಚಾರವಾಗಿ ಇಂದು ಪೂರ್ವಭಾವಿ ಸಭೆ ಮಾಡಿದ್ದೇವೆ. ಈ ಸಭೆಯಲ್ಲಿ ಸುಮಾರು 150 ಪ್ರಮುಖ ನಾಯಕರು ಭಾಗವಹಿಸಿದ್ದರು. 60-70 ಜನ ಅನೇಕ ಸಲಹೆಗಳನ್ನು ನೀಡಿದ್ದಾರೆ” ಎಂದರು.

“ಸಿದ್ದರಾಮಯ್ಯ ಅವರ ಕಳೆದ ಸರ್ಕಾರದಲ್ಲಿ ಪ್ರತಿ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ ಮಾಡಲಾಯಿತು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಮ್ಮನಹಳ್ಳಿ ಬಳಿ 5 ಎಕರೆ ಜಾಗವನ್ನು ನಿಗದಿ ಮಾಡಿದ್ದು, ಜೂನ್ 27ರಂದು ಕೆಂಪೇಗೌಡ ಜಯಂತಿ ಅಂಗವಾಗಿ ಅಂದೇ ಭೂಮಿ ಪೂಜೆ ಮಾಡಲು ತೀರ್ಮಾನಿಸಿದ್ದೇವೆ. ಈ ಕಟ್ಟಡದ ವಾಸ್ತುಶಿಲ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು” ಎಂದು ತಿಳಿಸಿದರು.

“ಪ್ರತಿ ವರ್ಷದಂತೆ ಈ ವರ್ಷ ಕೆಂಪೇಗೌಡರ ಗೋಪುರಗಳಿಂದ ಜ್ಯೋತಿ ಬರಲಿದ್ದು, ಪ್ರತಿ ಗೋಪುರಕ್ಕೂ ಒಬ್ಬರು ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. 27ರಂದು ಬೆಳಗ್ಗೆ ಬಾಬು ಜಗಜೀವನ್ ರಾಮ್ ಅವರ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು” ಎಂದರು.

ಎಲ್ಲಾ ವರ್ಗದ ಸಾಧಕರಿಗೆ ಪ್ರಶಸ್ತಿ

“27ರಂದು ಸಂಜೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾಡಬೇಕಿದ್ದು, ಇದನ್ನು ವಾರ್ಡ್ ಮಟ್ಟಕ್ಕೆ ಸೀಮಿತಗೊಳಿಸುವುದು ಬೇಡ. ರಾಜ್ಯೋತ್ಸವ ಪ್ರಶಸ್ತಿಯಂತೆ ಎಲ್ಲಾ ವರ್ಗಕ್ಕೆ ಕ್ರೀಡೆ, ಸಾಹಿತ್ಯ, ಕಲೆ, ಪತ್ರಿಕೋದ್ಯಮ, ಕೈಗಾರಿಗೆ, ಪರಿಸರ ಸಂರಕ್ಷಣೆ ಸೇರಿ ಎಲ್ಲಾ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲು ಚಿಂತನೆ ಮಾಡುತ್ತಿದ್ದೇವೆ. ಇದಕ್ಕೆ ಮಾರ್ಗಸೂಚಿ ನಿಗದಿ ಮಾಡಿ ಇದಕ್ಕೆ ಸಮಿತಿಯನ್ನು ರಚಿಸಲಾಗುವುದು” ಎಂದು ತಿಳಿಸಿದರು.

ಪ್ರಾಧಿಕಾರದಿಂದ ದಸರಾಗೆ ಸ್ತಬ್ಧಚಿತ್ರ

“ಈ ವರ್ಷದಿಂದ ಕೆಂಪೇಗೌಡ ಪ್ರಾಧಿಕಾರ ವತಿಯಿಂದ ಮೈಸೂರು ದಸರಕ್ಕೆ ಪ್ರತಿ ವರ್ಷ ಒಂದು ಸ್ಥಬ್ಧಚಿತ್ರ ಕಳಿಸುವ ಕೆಲಸವನ್ನು ಮಾಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಿಸಲು ಆರ್ಥಿಕ ನೆರವು ನೀಡಲಾಗುವುದು. ಶಾಲೆಗಳಲ್ಲಿ ಮಕ್ಕಳ ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಆಮೂಲಕ ಬೆಂಗಳೂರು ಹಾಗೂ ಕೆಂಪೇಗೌಡರ ಇತಿಹಾಸವನ್ನು ಮಕ್ಕಳಲ್ಲಿ ಅರಿವು ಮೂಡಿಸಲಾಗುವುದು.

ಶಾಲಾ ಪಠ್ಯಕ್ರಮದಲ್ಲಿ ಕೆಂಪೇಗೌಡರ ಪಾಠ

ಶಾಲಾ ಪಠ್ಯಕ್ರಮದಲ್ಲಿ ಕೆಂಪೇಗೌಡರ ಕುರಿತ ಪಾಠವನ್ನು ಸೇರಿಸುವ ಬಗ್ಗೆ ಪ್ರಾಥಮಿಕ ಶಿಕ್ಷಣ ಸಚಿವರ ಜತೆ ಚರ್ಚೆ ಮಾಡಲಾಗುವುದು. ಇನ್ನು ವಿಮಾನ ನಿಲ್ದಾಣ ಬಳಿಯ ಕೆಂಪೇಗೌಡ ಪ್ರತಿಮೆ ಸುತ್ತಮುತ್ತಲ ಪ್ರದೇಶ ಅಭಿವೃದ್ಧಿ ಮಾಡಲು ಸಚಿವ ಕೃಷ್ಣ ಭೈರೇಗೌಡ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಪ್ರತಿಮೆ ಬಳಿ ಥೀಮ್ ಪಾರ್ಕ್ ಮಾಡಲಾಗುವುದೇ ಎಂದು ಕೇಳಿದಾಗ, “ಬಿಜೆಪಿ ಕಾಲದಲ್ಲಿ ಒಂದು ಪ್ರತಿಮೆ ನಿಲ್ಲಿಸಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಿ ಕಾರ್ಯಕ್ರಮ ಮಾಡಿದರು. ಈ ಗುತ್ತಿಗೆದಾರರಿಗೆ ಬಿಲ್ ನೀಡಲಿಲ್ಲ. ಆ ವಿಚಾರದ ಬಗ್ಗೆ ಈಗ ಚರ್ಚೆ ಮಾಡಿ ನಾನು ವಿಷಯಾಂತರ ಮಾಡಲು ಬಯಸುವುದಿಲ್ಲ. ನಾವು ಆ ಪ್ರದೇಶ ಅಭಿವೃದ್ಧಿ ಮಾಡುತ್ತೇವೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೃಷ್ಣ ಭೈರೇಗೌಡ ಅವರು ನೀಡುತ್ತಾರೆ” ಎಂದು ತಿಳಿಸಿದರು.

ದೆಹಲಿಯಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಬಗ್ಗೆ ಕೇಳಿದಾಗ, “ಇದಕ್ಕೆ ದೆಹಲಿ ಸಿಎಂ ಹಾಗೂ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಬೇಕು. ಈ ಬಗ್ಗೆ ಸಂಸದರಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!