Investigate the masked man: B.Y. Vijayendra demands

ಹೇಮಾವತಿ ನದಿ ನೀರಿನ ಹೋರಾಟ: ಒಬ್ಬರೋ ಇಬ್ಬರೋ ಕಲ್ಲು ಹೊಡೆದಿರಬಹುದು; ಬಿವೈ ವಿಜಯೇಂದ್ರ

ಬೆಂಗಳೂರು: ಸರಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ- ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳದೆ ಪೊಲೀಸ್ ಮೂಲಕ ಗೂಂಡಾಗಿರಿ ಮಾಡಿದ್ದೇ ಆದರೆ, ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಎಚ್ಚರಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವಿಷಯವಾಗಿ ನಿನ್ನೆ ರಾತ್ರಿ ರಾಷ್ಟ್ರೀಯ ಮುಖಂಡರ ಜೊತೆ ಚರ್ಚೆ ಮಾಡಿದ್ದೇನೆ. ಇವತ್ತು ನಮ್ಮ ಸಂಸದರು, ಶಾಸಕರು ಪೊಲೀಸ್ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವರ ಗಡೀಪಾರು ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ ಮಹಾರಾಜರು ಹಿಂದೆ ನಮ್ಮ ದೇಶವನ್ನು ಆಳಿದ್ದರು. ಆಗ ಪಾಳೇಗಾರರು ಇದ್ದ ಬಗ್ಗೆ ನಾವು ಕೇಳಿದ್ದೇವೆ. ಆ ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರಕಾರವು ಅಧಿಕಾರ ನಡೆಸುತ್ತಿದೆ. ಪ್ರಜಾಪ್ರಭುತ್ವವನ್ನು ಹಂಗಿಸುವಂತೆ ಸಿದ್ದರಾಮಯ್ಯರ ನೇತೃತ್ವದ ಸರಕಾರವು ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ತಿಳಿಸಿದರು.

ಕಳೆದ ಕೆಲವು ತಿಂಗಳಿನಿಂದ ಈ ಲಜ್ಜೆಗೆಟ್ಟ ಕಾಂಗ್ರೆಸ್ ಸರಕಾರದ ವರ್ತನೆಯನ್ನು ತಾವು ಗಮನಿಸಿ. ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲವೆಂದು ಜನಾಕ್ರೋಶ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲೇ ಮತ್ತೊಂದು ಕಡೆ ಸರಕಾರದ ಹುಳುಕು ಮುಚ್ಚಿ ಹಾಕಿಕೊಳ್ಳಲು ಇಂಥ ಘಟನೆಗಳು ನಡೆಯುತ್ತಿವೆ. ಸರಕಾರವು ಕೂಡ ಹಿಂದೂ ಕಾರ್ಯಕರ್ತರಿಗೆ ಅಪಮಾನ ಮಾಡಲು ಕುತಂತ್ರ ಮಾಡುತ್ತಿದೆ ಎಂದು ಆಕ್ಷೇಪಿಸಿದರು.

ಸುಹಾಸ್ ಹತ್ಯೆ ನಡೆದಾಗ ಗೃಹ ಸಚಿವರು ಸುಹಾಸ್ ಮನೆಗೆ ಹೋಗದಂತೆ ಕೆಲವು ದುಷ್ಟ ಶಕ್ತಿಗಳು ಅವರನ್ನು ತಡೆದಿದ್ದವು. ಸುಹಾಸ್ ಶೆಟ್ಟಿ ಹತ್ಯೆ ಆದಾಗ ಮಹಿಳೆಯರೂ ಅದರಲ್ಲಿ ಭಾಗಿಯಾಗಿದ್ದರು. ಇದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. 3-4 ಜನ ಮಹಿಳೆಯರು ರಸ್ತೆಯಲ್ಲಿ ನಿಂತು ಕೊಲೆಗಡುಕರು, ದೇಶದ್ರೋಹಿಗಳನ್ನು ಕಾರಿನಲ್ಲಿ ಕೂರಿಸಿ, ಪರಾರಿ ಆಗಲು ಸಹಕರಿಸಿದ್ದರು ಎಂದು ವಿವರಿಸಿದರು. ಅದರ ಕುರಿತು ಏನಾಗಿದೆ? ಅವರನ್ನು ಬಂಧಿಸಿದ್ದಾರಾ ಎಂದು ಕೇಳಿದರು.

ನಮ್ಮ ರಾಜ್ಯದಲ್ಲಿ ಚುನಾಯಿತ ಸರಕಾರ ಇದೆ; ಪೊಲೀಸರು ಕಾನೂನು- ಸುವ್ಯವಸ್ಥೆ ಕಾಪಾಡುತ್ತಿದ್ದಾರೆ ಎಂಬ ನಂಬಿಕೆ ಬರುತ್ತಿಲ್ಲ. ಇದರ ನಡುವೆ ಸಂಘ ಪರಿವಾರದ ಹಿರಿಯರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಹಿಂದೂ ಮುಖಂಡರ ವಿರುದ್ಧ ಎಫ್‍ಐಆರ್ ದಾಖಲಿಸಿ, ಕಾರ್ಯಕರ್ತರನ್ನು ಬೆದರಿಸುವ ಕುತಂತ್ರ ನಡೆಯುತ್ತಿದೆ. ಮಧ್ಯರಾತ್ರಿ ಕಾರ್ಯಕರ್ತರ ಮನೆಯ ಬಾಗಿಲು ತಟ್ಟಿ, ಅವರನ್ನು ವಿಚಾರಿಸುತ್ತಿದ್ದಾರೆ. ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವಾ? ಎಲ್ಲಿದ್ದೇವೆ ನಾವು ಎಂದು ಪ್ರಶ್ನಿಸಿದರು.

ರೈತರ ಹಕ್ಕನ್ನು ಮೊಟಕುಗೊಳಿಸುವ ಕಾರ್ಯ

ರೈತರ ಹಕ್ಕನ್ನು ಮೊಟಕುಗೊಳಿಸುವ ಕೆಲಸವು ರಾಜ್ಯ ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದ ಅವರು, ರಾಜ್ಯ ಸರಕಾರವು ಹೇಮಾವತಿ ನದಿ ನೀರಿನ ವಿಚಾರದಲ್ಲಿ ರೈತರ ಹೋರಾಟವನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ. ಪೊಲೀಸರ ಮೂಲಕ ಗೂಂಡಾಗಿರಿ ಮಾಡಿ ಹೋರಾಟ ಹತ್ತಿಕ್ಕುವ ಕಾರ್ಯ ನಡೆಸುತ್ತಿದೆ ಎಂದು ತುಮಕೂರು ರೈತರ ಹೋರಾಟದ ಕುರಿತು ದನಿ ಎತ್ತಿ ರಾಜ್ಯ ಸರ್ಕಾರವನ್ನು ಟೀಕಿಸಿದರು.

ಒಬ್ಬರೋ ಇಬ್ಬರೋ ಕಲ್ಲು ಹೊಡೆದಿರಬಹುದು

ಯಾರೋ ಒಬ್ಬರೋ ಇಬ್ಬರೋ ಕಲ್ಲು ಹೊಡೆದಿರಬಹುದು, ಅದು ಸರಿ ಎನ್ನುವುದಿಲ್ಲ. ಪೊಲೀಸರು ನಮ್ಮ ರಾಜ್ಯದ ಆಸ್ತಿ. ಆದರೆ, ಯಾರೋ ಒಬ್ಬರೋ ಇಬ್ಬರೋ ಕಲ್ಲು ಹೊಡೆದರೆಂದು ನಮ್ಮ ಕಾರ್ಯಕರ್ತರನ್ನು ಹಾಗೂ ರೈತ ಮುಖಂಡರನ್ನು ಟಾರ್ಗೆಟ್ ಮಾಡಿ, ಅವರನ್ನು ಒಳಗೆ ಹಾಕುವ ಕುತಂತ್ರ ನಡೆಯುತ್ತಿದೆ. ಇದರಿಂದ ಹೇಮಾವತಿ ನದಿ ನೀರಿನ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ತಿಳಿಸಿದರು.

ನಾನು, ನಮ್ಮ ಪಕ್ಷದ ಮುಖಂಡರು ಇವತ್ತು ಮಧ್ಯಾಹ್ನ ಸ್ಥಳಕ್ಕೆ ಭೇಟಿ ಕೊಡಲಿದ್ದೇವೆ. ಈ ನಾಲಾಯಕ್ ಕಾಂಗ್ರೆಸ್ ಸರಕಾರವು, ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ, ಅಭಿವೃದ್ಧಿಗೆ ಹಣ ಕೊಡುವುದಕ್ಕೆ ಸಾಧ್ಯ ಆಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಕಾನೂನು- ಸುವ್ಯವಸ್ಥೆ ಹಾಳಾಗಲು ರಾಜ್ಯ ಸರಕಾರದ ಷಡ್ಯಂತ್ರವೇ ಕಾರಣ. ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಸರಕಾರ ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರಕ್ಕೆ ಸಲಹೆ ನೀಡುವಷ್ಟು ದೊಡ್ಡ ಮನುಷ್ಯರು ನಾವಲ್ಲ; ಆದರೆ, ಸರಕಾರದ ಗೂಂಡಾ ವರ್ತನೆ, ಇವರ ಸೊಕ್ಕನ್ನು ಮುರಿಯುವ ಶಕ್ತಿ ಬಿಜೆಪಿಗೆ ಇದೆ. ನಮ್ಮ ಕಾರ್ಯಕರ್ತರಿಗೆ ಇದೆ. ಅದನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!