ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ 2024ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಿದೆ (2024 Book of the Year Prize).
ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2024ರ ಜನವರಿ 01 ರಿಂದ 2024ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು.
ಕೃತಿಯಲ್ಲಿ ಪ್ರಥಮ ಮುದ್ರಣ 2024 ಎಂದು ಮುದ್ರಿತವಾಗಿರಬೇಕು. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.
ಪ್ರಕಟವಾದ ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ಡ್ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ 2025ರ ಜುಲೈ 15 ರೊಳಗೆ ತಲುಪಿಸಬೇಕಾಗಿ ಕೋರಿದೆ.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್ ಸೈಟ್ ಅನ್ನು www.sahithyaacademy.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಆದ ಕರಿಯಪ್ಪ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.