Stampede during RCB celebrations: Suspension of 6 police officers revoked

RCB ಸಂಭ್ರಮಾಚರಣೆ ವೇಳೆ ದೊಡ್ಡ ದುರಂತ; ಕಾಲ್ತುಳಿತಕ್ಕೆ 11 ಮಂದಿ ದುರ್ಮರಣ.. ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಆರ್‌ಸಿಬಿ (RCB) ಸಂಭ್ರಮಾಚರಣೆ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11ಅಭಿಮಾನಿಗಳು ಸಾವನ್ನಪ್ಪಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕಾಲ್ತುಳಿತ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಸಂಭ್ರಮಾಚರಣೆ ಮುಂಜಾಗ್ರತೆ ಕೈಗೊಂಡ ಕಾರಣ ವಿಜಯೋತ್ಸವ ಮೆರವಣಿಗೆಯನ್ನು ರದ್ದು ಮಾಡಿತ್ತು. ಆದಾಗ್ಯೂ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಈ ಪ್ರಮಾದ ಉಂಟಾಗಿದೆ.

ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ.

ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬ ವರ್ಗ, ವಾರೀಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ಈ ವೇಳೆ ಖಾಸಗಿ ಸುದ್ದಿವಾಹಿನಿ ವರದಿಗಾರನೋರ್ವ ನಿನ್ನೆ ಪಂದ್ಯ ಮುಗ್ದಿದೆ ಇಷ್ಟು ಅರ್ಜೆಂಟ್ ಏನಿತ್ತು ಸಂಭ್ರಮಾಚರಣೆಗೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಕಾರ್ಯಕ್ರಮದ ಆಯೋಜನೆ ಕ್ರಿಕೆಟ್ ಮಂಡಳಿ ಮಾಡಿತ್ತು. ಸರ್ಕಾರಕ್ಕೆ ಭದ್ರತೆ ಒದಗಿಸಲು ಪೊಲೀಸರ ನೆರವು ಕೇಳಿದ್ದರು ನೀಡಿದ್ದೇವೆ.

ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈಗ ಇಷ್ಟೋಂದ್ ಅರ್ಜೇಂಟ್ ಏನಿತ್ತು ಎನ್ನುವ ನೀವು, ಪರ್ಮಿಷನ್ ಕೊಡಲಿಲ್ಲ ಅಂದರೆ ಯಾಕ್ ಕೊಟ್ಟಿಲ್ಲ ಅಂತ ಪ್ರಶ್ನೆ ಮಾಡ್ತಿರಿ, ಎರಡು ತರ ನಿಮಗೆ ಹೇಗ್ ಬೇಕೋ ಹಾಗೆ ಮಾತಾಡೋದಲ್ಲ ಎಂದು ಗರಂ ಆದರು.

ರಾಜ್ಯ ಸರ್ಕಾರ ಹೊಣೆಯಲ್ಲ: ಬಿಸಿಸಿಐ ಉಪಾಧ್ಯಕ್ಷ

ಇನ್ನೂ ಈ ಘಟನೆ ಕುರಿತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾತನಾಡಿ, ‘ಕಾಲ್ತುಳಿತ ಅಥವಾ ಅಂತಹ ಯಾವುದೇ ಪರಿಸ್ಥಿತಿಯನ್ನು ತಪ್ಪಿಸಲು ಸರ್ಕಾರ ರೋಡ್ ಶೋ ನಿಲ್ಲಿಸಿತ್ತು. ಆದರೆ, ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಸಂಭವಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ.

ಹಾನಿ ನಿಯಂತ್ರಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ಅದಲ್ಲದೇ ಈ ಘಟನೆ ಬೇರೆ ರಾಜ್ಯಗಳಲ್ಲೂ ಸಂಭವಿಸುವ ಸಾಧ್ಯತೆಗಳಿತ್ತು. ಮತ್ತು ಇದಕ್ಕೆ ಆಡಳಿತ ಮಾಡುತ್ತಿರುವ ಪಕ್ಷವನ್ನು ದೂಷಿಸುವುದು ಸರಿಯಲ್ಲ ಅಂದಿದ್ದಾರೆ.

RCB ವಿಜಯೋತ್ಸವದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದ 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ನೂಕುನುಗ್ಗಲಿನಲ್ಲಿ 45ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ.

ಕಾಲ್ತುಳಿತ ದುರಂತ ಹೇಗಾಯ್ತು?

ಇಂದು ಮಧ್ಯಾಹ್ನ 1 ಗಂಟೆಯಿಂದಲೇ ಚಿನ್ನಸ್ವಾಮಿ ಸ್ಟೇಡಿಯಂ ಬಲಿ ಕಿಲೋಮೀಟರ್‌ಗಟ್ಟಲೆ ಅಭಿಮಾನಿಗಳು ನಿಂತಿದ್ದರು, 3 ಗಂಟೆಯವರೆಗೂ RCB ಮ್ಯಾನೇಜ್‌ಮೆಂಟ್ ಕಡೆಯಿಂದ ಟಿಕೆಟ್ ಬಗ್ಗೆ ಕ್ಲಾರಿಟಿ ಇರಲಿಲ್ಲ.

ಫ್ರೀ ಎಂಟ್ರಿ ನಾ? ದುಡ್ಡು ಕೊಡಬೇಕಾ ಅನ್ನೋ ಬಗ್ಗೆ ಮಾಹಿತಿ ಇರಲಿಲ್ಲ. ದುಡ್ಡು ಕೊಟ್ಟು ಟಿಕೆಟ್ ಖರೀದಿ ಮಾಡಲು ಕಿಲೋ ಮೀಟರ್‌ವರೆಗೂ ಜನ ಸಾಲುಗಟ್ಟಿ ನಿಂತಿದ್ದರು. ಗೇಟ್‌ಗಳಲ್ಲಿ ಕಾಯ್ತಾ ಇದ್ದಾಗ ಗೇಟ್ ಅನ್ನು ತೆರೆದಿದ್ದು, ಕಾಲ್ತುಳಿತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು

ಈ ಕುರಿತಂತೆ ವಿರೋಧ ಪಕ್ಷಗಳು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದ್ದಾರೆ.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವಿವೇಚನಾರಹಿತ ದುರಾಡಳಿತ: ಆರ್.ಅಶೋಕ್

ಐಪಿಎಲ್ ಪಟ್ಟ ಗೆದ್ದಿರುವ ಆರ್ ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನ ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ಚಿಟ್ ಮಾಡಿರುವ ಅವರು, ಕನ್ನಡಿಗರ ಜನಪ್ರಿಯ ಆರ್ ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ.

ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲಾ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಇವತ್ತು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ ಅದು ಕಷ್ಟಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದಿದ್ದಿದ್ದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ.

ಚಾಂಪಿಯನ್ ಆರ್ ಸಿಬಿ ತಂಡವನ್ನ ಸ್ವಾಗತಿಸಲು, ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನ ಅಂದಾಜಿಸುವಲ್ಲಿ ಸರ್ಕಾರ ಎಡವಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಜನ ಸಂದಣಿ ನಿರೀಕ್ಷಿಸಿ ಹೆಚ್ಚಿನ ಕಾಲಾವಕಾಶ ತೆಗೆದುಕೊಂಡು ವಾರಾಂತ್ಯದಲ್ಲಿ ಈ ಕಾರ್ಯಕ್ರಮ ಮಾಡಬಹುದಿತ್ತು ಎನ್ನಿಸುತ್ತಿದೆ.

ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು.

ಮೃತ ದುರ್ದೈವಿಗಳ ಕುಟುಂಬಗಳ ದುಃಖದಲ್ಲಿ ಇಡೀ ರಾಜ್ಯವೇ ಭಾಗಿಯಾಗಿದೆ ಎಂದಿದ್ದಾರೆ.

ಸರ್ಕಾರ ಹೊಣೆ ಹೊರಲೇಬೇಕು: ಬಿವೈ ವಿಜಯೇಂದ್ರ

ಐಪಿಎಲ್ ಗೆದ್ದ ಆರ್.ಸಿ.ಬಿ ತಂಡದ ವಿಜಯೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ಅಭಿಮಾನಿಗಳ ನೂಕುನುಗ್ಗಲು, ಕಾಲ್ತುಳಿತದಲ್ಲಿ 10ಕ್ಕೂ ಅಧಿಕ ಅಭಿಮಾನಿಗಳು ಸಾವನ್ನಪ್ಪಿದ್ದಾರೆ, ಬಹಳಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬ ಆಘಾತಕರ ವರದಿಗಳು ಬರುತ್ತಿದ್ದು, ಅತೀವ ದುಃಖದ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ದುರಂತದಲ್ಲಿ ಜೀವ ಕಳೆದುಕೊಂಡ ಅಭಿಮಾನಿಗಳ ಕುಟುಂಬದವರ ದುಃಖಕ್ಕೆ ಸಾಂತ್ವನ ಹೇಳಲು ಪದಗಳೇ ಸಿಗುತ್ತಿಲ್ಲ. ದಯಮಾಡಿ ಜನರು ಸಂಯಮ ವಹಿಸಿ, ಸುರಕ್ಷತೆಗೆ ಆದ್ಯತೆ ನೀಡಿ ಎಂದು ಕೈಮುಗಿದು ಕೋರುತ್ತೇನೆ. ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಸಮರ್ಪಕ ವ್ಯವಸ್ಥೆ, ಅಗತ್ಯ ಬಂದೋಬಸ್ತ್ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಇಂತಹ ಅಸಮರ್ಥ, ಬೇಜವಾಬ್ದಾರಿ ರಾಜ್ಯಸರ್ಕಾರದ ವೈಫಲ್ಯದಿಂದ ಸಂಭ್ರಮೋತ್ಸವಕ್ಕೆ ಸೂತಕದ ಛಾಯೆ ಆವರಿಸಿದೆ.

ಲಕ್ಷಾಂತರ ಅಭಿಮಾನಿಗಳು ಸೇರುವ ಸಾಧ್ಯತೆ ಗೊತ್ತಿದ್ದೂ, ವ್ಯವಸ್ಥೆ ಮಾಡಲು ಸಾಧ್ಯವಾಗದಿದ್ದರೆ ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದಾದರೂ ಏಕೆ? ಮುನ್ನೆಚ್ಚರಿಕೆ ವಹಿಸಿ ತಡೆಯಬಹುದಾಗಿದ್ದ ದುರಂತಕ್ಕೆ ಈ ಅಸಮರ್ಥ ಸರ್ಕಾರ ಹೊಣೆ ಹೊರಲೇಬೇಕು.

ಮೊದಲು ಜನರ ಸುರಕ್ಷತೆಗೆ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಪೊಲೀಸರು ಕೂಡಲೇ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಬಸವರಾಜ ಬೊಮ್ಮಾಯಿ

ಐಪಿಎಲ್ ನಲ್ಲಿ ಆರ್ ಸಿಬಿ ತಂಡ ಜಯ ಗಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಸರಿಯಾದ ಸಿದ್ದತೆ ಇಲ್ಲದೇ ತರಾತುರಿಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನ ಅಮಾಯಕರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದು ಅತ್ಯಂತ ದುಖದ ಸಂಗತಿ, ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್ ಮಾಡಿರುವ ಅವರು, ಯಾವುದೇ ಪೂರ್ವ ತಯಾರಿ ಇಲ್ಲದೆ ಅವಸರದಲ್ಲಿ ಎರಡು ಕಾರ್ಯಕ್ರಮ ಮಾಡಿದ್ದು, ಅದರಲ್ಲೂ ಎರಡೂ ಕಾರ್ಯಕ್ರಮಗಳಲ್ಲಿ ಅಷ್ಡೊಂದು ಜನ ಸೇರಲು ಅವಕಾಶ ಮಾಡಿಕೊಟ್ಟಿದ್ದು, ರಾಜ್ಯ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ.

ಹಿಂದೆ ವಿಶ್ವ ಕಪ್ ಮತ್ತು ಇತರ ಕಪ್ ಗೆದ್ದಾಗ ಮುಂಬೈನಲ್ಲಿ ಮೆರವಣಿಗೆ ಮಾಡುವ ಮುಖಾಂತರ ಜನರಿಗೆ ಅಲ್ಲಲ್ಲಿ‌ ಕ್ರಿಕೆಟ್ ಆಟಗಾರರನ್ನು ನೋಡಲು ಅವಕಾಶ ಕಲ್ಪಿಸಿದ್ದು ಸಾಕಷ್ಟು ಉದಾಹರಣೆ ಇದೆ.

ಈ ವಿಚಾರದಲ್ಲಿ ಜನರ ಸಂಖ್ಯೆಯ ಅಂದಾಜು ಇಲ್ಲದೆ ಆರ್ ಸಿಬಿ ಪರವಾಗಿರುವ ಜನರ ಭಾವನಾತ್ಮಕ ಸಂಬಂಧ ಅರಿಯದೆ ಪೊಲಿಸರು ಮತ್ರು ಆಯೋಜಕರ ನಡುವೆ ಹೊಂದಾಣಿಕೆ ಇಲ್ಲದಿರುವುದು ಸ್ಪಷ್ಟ. ರಾಜ್ಯ ಸರ್ಕಾರವೇ ಇದಕ್ಕೆ ಕಾರಣ ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ತಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!