Don't do corpse politics: DCM DK Shivakumar

ಶವ ರಾಜಕೀಯ ಮಾಡಬೇಡಿ: ಬಿಜೆಪಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು: “ಬಿಜೆಪಿ ಹೆಣದ ಮೇಲೆ ರಾಜಕೀಯ ಮಾಡುತ್ತಿದೆ. ಪೊಲೀಸರು ಮುಂಜಾಗೃತಾ ಕ್ರಮವಾಗಿ ತೆರೆದ ವಾಹನ ಮೆರವಣಿಗೆಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಇದೇ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಈಗ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.

ಕಾಲ್ತುಳಿತದ ಸಾವುಗಳಿಗೆ ಸರ್ಕಾರವೇ ಹೊಣೆ ಎಂಬ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಇಂದು ಬೆಳಗ್ಗೆ ವಿಮಾನ ನಿಲ್ದಾಣದಿಂದಲೇ ಮೆರವಣಿಗೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ನಮ್ಮ ಪೊಲೀಸ್ ಅಧಿಕಾರಿಗಳು ನಮಗೆ ಸಲಹೆ ನೀಡಿದರು. ಈ ತೀರ್ಮಾನವನ್ನು ಖಂಡಿಸಿದ್ದ ಬಿಜೆಪಿ, ಪರಮೇಶ್ವರ್ ಅವರನ್ನು ಅಸಮರ್ಥ ಗೃಹಮಂತ್ರಿ ಎಂದು ಕರೆದು ಮುಂಜಾಗೃತಾ ಕ್ರಮವಾಗಿ ಪೊಲೀಸರು ಕೈಗೊಂಡ ಕ್ರಮವನ್ನು ಎಕ್ಸ್ ಖಾತೆಯಲ್ಲಿ ಟೀಕಿಸಿತ್ತು” ಎಂದು ತಿಳಿಸಿದರು.

“ಯಾವುದೇ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾನು ವಿಮಾನ ನಿಲ್ದಾಣಕ್ಕೆ ತೆರಳಿದೆ. ವಿಧಾನ ಸೌಧದ ಕಾರ್ಯಕ್ರಮದ ವೇಳೆ ಕಬ್ಬನ್ ಪಾರ್ಕ್ ಗೇಟ್ ಅನ್ನು ಮುಚ್ಚಿ ಅಗತ್ಯವಾದ ಕ್ರಮ ಕೈಗೊಳ್ಳಲಾಯಿತು” ಎಂದು ವಿವರಿಸಿದರು.

“ಇಷ್ಟು ದೊಡ್ಡ ಪ್ರಮಾಣದಲ್ಲಿ ಜನ ಸೇರುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಜನದಟ್ಟಣೆ ಹೆಚ್ಚಾದ ಪರಿಣಾಮ ನಾವು 2 ತಾಸುಗಳ ಕಾಲ ಮೆಟ್ರೋ ಸಂಚಾರವನ್ನು ನಿಲ್ಲಿಸಿದ್ದೆವು. ಇಷ್ಟೆಲ್ಲಾ ಮಾಡಿದರೂ ಬಿಜೆಪಿ ಇದರಲ್ಲಿ ರಾಜಕಾರಣ ಮಾಡುತ್ತಿದೆ” ಎಂದರು.

“ಇದೇ ಸಿ.ಟಿ ರವಿ ಹಾಗೂ ಬಿಜೆಪಿ ಏನು ಟ್ವಿಟ್ ಮಾಡಿದ್ದಾರೆ. ಜನರ ಈ ಪ್ರೀತಿ ವ್ಯಾಮೋಹವನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಈ ದುರ್ಘಟನೆಯಿಂದ ನಮಗೂ ನೋವಾಗಿದೆ. ಐ ಆಮ್ ಸಾರಿ, ಈ ರೀತಿ ಆಗಬಾರದಿತ್ತು” ಎಂದು ವಿಷಾದ ವ್ಯಕ್ತಪಡಿಸಿದರು.

ಸಂಭ್ರಮಾಚರಣೆ, ಸರ್ಕಾರಿ ಕಾರ್ಯಕ್ರಮ ಮುಂದೂಡಿಕೆ

“18 ವರ್ಷಗಳ ಸುದೀರ್ಘ ಅವಧಿ ಬಳಿಕ ತಮ್ಮ ನೆಚ್ಚಿನ ತಂಡ ಗೆದ್ದಿದೆ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಜನ ತಮ್ಮ ಕೆಲಸ, ಕಾರ್ಯ ಬಿಟ್ಟು ಕ್ರಿಕೆಟ್ ಆಟಗಾರರನ್ನು ಕಣ್ತುಂಬಿಕೊಳ್ಳಲು ಬಂದಿದ್ದಾರೆ. ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ದುರ್ಘಟನೆ ಹಿನ್ನೆಲೆಯಲ್ಲಿ ನಾಳೆ ಸಚಿವ ಸಂಪುಟ ಸಭೆ ಹೊರತು ಪಡಿಸಿ ವಿಶ್ವ ಪರಿಸರ ದಿನ ಸೇರಿದಂತೆ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು.

ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, “ಇಲ್ಲಿ ಯಾರ ಮೇಲೂ ದೂಷಣೆ ಮಾಡಲು ಆಗುವುದಿಲ್ಲ. ಈ ರೀತಿ ಏಕಾಏಕಿ, ಕುಟುಂಬ ಸಮೇತರಾಗಿ ಮಕ್ಕಳನ್ನು ಕರೆದುಕೊಂಡು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಾರೆ ಎಂದು ಯಾರು ನಿರೀಕ್ಷೆ ಮಾಡಿದ್ದರು?” ಎಂದು ತಿಳಿಸಿದರು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!