ಪ್ರಯಾಗರಾಜ್ ಕಾಲ್ತುಳಿತ ಆದಾಗ ಬಿಜೆಪಿಯವರಂತೆ ನಾವು ರಾಜಕೀಯ ಮಾಡಿಲ್ಲ: ಡಿಕೆ ಸುರೇಶ್

We did not do politics like BJP when Prayagraj was stampede: DK Suresh

ಬೆಂಗಳೂರು: “ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನ ಮೃತಪಟ್ಟಿರುವ ದುರ್ಘಟನೆ ಆಕಸ್ಮಿಕವಾಗಿ ನಡೆದಿದೆ. ಈ ದುರ್ಘಟನೆಗೆ ವಿಷಾದ ವ್ಯಕ್ತಪಡಿಸಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಬೇಕೇ ಹೊರತು ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು ಎಂದು ನಿಕಟಪೂರ್ವ ಸಂಸದ ಡಿಕೆ ಸುರೇಶ್ (DK Suresh) ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಆರ್ ಸಿವಿ ಗೆಲುವಿನ ಸಂಭ್ರಮದಲ್ಲಿನ ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ ಎಂಬ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಸಂಭ್ರಮಾಚರಣೆ ವೇಳೆ ಇಂತಹ ದುರಂತ ಸಂಭವಿಸಬಾರದಿತ್ತು. 18 ವರ್ಷಗಳಲ್ಲಿ ಮೂರು ಬಾರಿ ಐಪಿಎಲ್ ಫೈನಲ್ ತಲುಪಿದ್ದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಮಾತ್ರವಲ್ಲ ದೇಶದಾದ್ಯಂತ ಈ ಗೆಲುವಿಗೆ ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದರು.

ಆರ್ ಸಿಬಿ ತಂಡ ಗೆಲುವಿನ ಸಂಭ್ರಮಾಚರಣೆಯಲ್ಲಿ 11 ಮಂದಿ ಮೃತಪಟ್ಟಿರುವುದು ಅವರ ಕುಟುಂಬಕ್ಕೆ ಕರಾಳ ದಿನವಾಗಿದ್ದು, ಕ್ರೀಡಾ ಕ್ಷೇತ್ರಕ್ಕೆ ಕಪ್ಪು ಚುಕ್ಕೆ. ಈ ಕಾರ್ಯಕ್ರಮಕ್ಕೆ ಸ್ವಲ್ಪ ಕಾಲಾವಕಾಶ ಪಡೆದು ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಆಯೋಜಿಸಬೇಕಿತ್ತು. ಆತುರದಲ್ಲಿ ಆದ ಸಂಭ್ರಮಾಚರಣೆ ದುರ್ಘಟನೆಗೆ ಕಾರಣವಾಗಿದೆ. ಇದರ ತನಿಖೆ ಮಾಡಿ ಲೋಪದೋಷಗಳನ್ನು ಸರಿಪಡಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ.

ರಾಜಕೀಯ ಮಾಡುವುದಾದರೆ ಬೇರೆ ದುರಂತಗಳ ಬಗ್ಗೆಯೂ ಚರ್ಚೆ ಮಾಡಬೇಕಾಗುತ್ತದೆ

ಜನರ ದಟ್ಟಣೆ ಊಹಿಸುವಲ್ಲಿ ಸರ್ಕಾರ ವಿಫಲವಾಯಿತೇ ಎಂದು ಕೇಳಿದಾಗ, ಇಷ್ಟೇ ಜನ ಬರುತ್ತಾರೆ ಎಂದು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸಾಮರ್ಥ್ಯವೇ 35 ಸಾವಿರ. ಆದರೆ ನಿನ್ನೆ ಕ್ರೀಡಾಂಗಣದ ಬಳಿ 2 ಲಕ್ಷ ಜನ ಸೇರಿದ್ದರು. ಹೀಗಾಗಿ ಯಾರ ನಿಯಂತ್ರಣಕ್ಕೂ ಸಿಗಲಿಲ್ಲ.

ಇಂತಹ ಪರಿಸ್ಥಿತಿಯಲ್ಲಿ ಎಷ್ಟೇ ಜನ ಪೊಲೀಸರನ್ನು ನಿಯೋಜಿಸಿದರೂ ನಿಯಂತ್ರಣ ಕಷ್ಟ. ಮಾಧ್ಯಮಗಳ ವರದಿ ಪ್ರಕಾರ 4-5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಇದು ಆಕಸ್ಮಿಕವಾದ ಘಟನೆ. ಈ ಘಟನೆಯನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ.

ಉತ್ತರ ಪ್ರದೇಶದ ಪ್ರಯಾಗರಾಜ್ ಕಾಲ್ತುಳಿತ ಘಟನೆ ನಡೆದಾಗ ನಾವು ರಾಜಕೀಯ ಮಾಡಲಿಲ್ಲ. ಎಲ್ಲಾ ಮುಂಜಾಗೃತ ಕ್ರಮ ಕೈಗೊಂಡಿದ್ದರೂ ಆದ ದುರ್ಘಟನೆ ನಡೆದಾಗ ಕಾಂಗ್ರೆಸ್ ರಾಜಕೀಯ ಮಾಡಲಿಲ್ಲ.

ಈ ದುರಂತದಲ್ಲಿ ಸರ್ಕಾರದ ಪಾಲುದಾರಿಕೆ ಇದ್ದರೆ ಇವರು ಟೀಕೆ ಮಾಡುವುದು ಸರಿ. ಸರ್ಕಾರದ ಪಾಲುದಾರಿಕೆ ಇಲ್ಲದಿರುವಾಗ ಟೀಕೆ ಮಾಡುವುದು ಎಷ್ಟು ಸರಿ? ಸರ್ಕಾರ ಅಭಿಮಾನಿಗಳಿಗೆ ಬರಬೇಡಿ ಎಂದು ಹೇಳಲು ಸಾಧ್ಯವಿಲ್ಲ.

ಒಟ್ಟಾರೆ ಈ ದುರ್ಘಟನೆ ಆಗಿದ್ದು, ಇದಕ್ಕೆ ವಿಷಾದ ವ್ಯಕ್ತಪಡಿಸಿ, ಮುಂದೆ ಎಲ್ಲರೂ ಸೇರಿ ಈ ರೀತಿ ನಡೆಯದಂತೆ ಎಚ್ಚರ ವಹಿಸಬೇಕಾಗುತ್ತದೆ. ಅದು ನಮ್ಮ ಕರ್ತವ್ಯ. ರಾಜಕೀಯವನ್ನೇ ಮಾಡುತ್ತೇನೆ ಎನ್ನುವುದಾದರೆ, ದೇಶದಲ್ಲಿ ನಡೆದಿರುವ ಇತರೆ ದುರ್ಘಟನೆಗಳ ಬಗ್ಗೆಯೂ ಚರ್ಚೆ ಮಾಡಬೇಕಾಗುತ್ತದೆ.

ದೇಶದ ಪ್ರಧಾನಮಂತ್ರಿಗಳು ಸಂತಾಪ ಸೂಚಿಸಿದ್ದಾರೆ. ಅಭಿಮಾನಿಗಳ ಸಂತೋಷ, ದುಃಖ, ಮೃತರ ಕುಟುಂಬದ ನೋವಿನಲ್ಲಿ ನಾವು ಇರಬೇಕಾಗುತ್ತದೆ ಎಂದು ತಿಳಿಸಿದರು.

ಇದು ಸಚಿವರ ಕುಟುಂಬ ಸದಸ್ಯರ ಕಾರ್ಯಕ್ರಮವಾಗಿತ್ತು ಎಂದು ಕೇಳಿದಾಗ, “ಬಿಜೆಪಿಯವರಿಗೆ ಕೆಲಸ ಇಲ್ಲ, ಇಷ್ಟು ದಿನ ಮಲಗಿದ್ದವರು ಈಗ ಎದ್ದಿದ್ದಾರೆ” ಎಂದು ತಿಳಿಸಿದರು.

ಶಿವಕುಮಾರ್ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೇನು ನೈತಿಕತೆ ಇದೆಯೇ?

ಡಿಕೆ ಶಿವಕುಮಾರ್ ಅವರ ಪ್ರಚಾರದ ಗೀಳಿಗೆ ಈ ದುರಂತ ಸಂಭವಿಸಿದೆ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ನಾಲಿಗೆ ಸುಳ್ಳು ಹೇಳುವುದರಲ್ಲಿ ಎತ್ತಿದ ಕೈ. ಅವರು ರಾತ್ರಿ ಒಂದು ಹೇಳಿದರೆ, ಬೆಳಗ್ಗೆ ಒಂದು ಹೇಳುತ್ತಾರೆ. ಅವರಿಗೆ ಡಿಕೆ ಶಿವಕುಮಾರ್ ಬಗ್ಗೆ ಮಾತನಾಡುವ ನೈತಿಕತೆ ಏನಿದೆ? ನೈತಿಕತೆ ಇಲ್ಲದ ವ್ಯಕ್ತಿ ಹೇಳಿಕೆ ಬಗ್ಗೆ ಮಾತನಾಡುವುದು ಅಸಂಬದ್ಧ.

ಕುಮಾರಸ್ವಾಮಿ ಅವರು ಮಾಡಿರುವ ಅನಾಹುತಗಳಿಗೆ ಮೊದಲು ರಾಜೀನಾಮೆ ನೀಡಲಿ, ಆಮೇಲೆ ಬೇರೆಯವರ ರಾಜೀನಾಮೆ ಕೇಳಲಿ. ಮೋದಿ ಅವರು ಮೊದಲು ಕುಮಾರಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡಲಿ. ನೈತಿಕತೆ, ಪ್ರಾಮಾಣಿಕತೆ ಭಾಷಣ ಮಾಡುವುದಾದರೆ, ಮೊದಲು ಅವರು ರಾಜೀನಾಮೆ ಕೊಟ್ಟು ಮಾತನಾಡಲಿ.

ಕೇವಲ ಗೀಳಿಗಾಗಿ ಮಾತನಾಡುವುದಲ್ಲ. ಅವರು ಬೆಂಗಳೂರು ಮುಳುಗಿ ಹೋಯಿತು ಎಂದಿದ್ದರು, ಈಗ ಅವರು ಕೂತ ಮೇಲೆ ದೆಹಲಿ ಮುಳುಗಿತು, ಬಾಂಬೆ ಮುಳುಗಿಲ್ಲವೇ. ರಾಜ್ಯದಲ್ಲಿ ಏನೇ ಆದರೂ ಅದಕ್ಕೆ ಡಿಕೆ ಶಿವಕುಮಾರ್ ಕಾರಣವೇ? ಬೇರೆಯವರ ಮನೆಯಲ್ಲಿ ಏನಾದರೂ ಶಿವಕುಮಾರ್ ಕಾರಣ ಎಂದು ಹೇಳುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು. ಅವರನ್ನು ಪ್ರಮುಖ ನಾಯಕ ಎಂದು ಪರಿಗಣಿಸಿ, ಅವರ ಹೇಳಿಕೆ ಬಗ್ಗೆ ಚರ್ಚಿಸುವುದೇ ವ್ಯರ್ಥ ಎಂದು ತಿರುಗೇಟು ನೀಡಿದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]