ಕಾಲ್ತುಳಿತ ಪ್ರಕರಣ: ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ – ಆರ್.ಅಶೋಕ ಆಗ್ರಹ

Siddaramaiah CM conference to retain chair: Opposition Leader R. Ashoka

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಅವರೇ ಕಾರಣ. ಈ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದ ಎಸ್‌ಐಟಿಯಿಂದ ತನಿಖೆ ನಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ತನಿಖೆಗೆ ನಾವು ಒಪ್ಪುವುದಿಲ್ಲ. ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರ ಬಳಿಗೆ ಪಿಐಎಲ್‌ ಹೋಗುತ್ತಿದೆ. ಹೈಕೋರ್ಟ್‌ ನ್ಯಾಯಾಧೀಶರ ಸುಪರ್ದಿಯಲ್ಲೇ ಇದರ ತನಿಖೆ ನಡೆಯಬೇಕಿದೆ. ಇದಕ್ಕಾಗಿ ಎಸ್‌ಐಟಿ ರಚಿಸಬೇಕು. ಇದರ ವರದಿ ನೇರವಾಗಿ ಹೈಕೋರ್ಟ್‌ಗೆ ಸಲ್ಲಿಕೆಯಾಗಬೇಕು. ಈ ಎಲ್ಲ ಸಾವುಗಳಿಗೆ ನ್ಯಾಯ ನೀಡಬೇಕು. ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು.

ಇದು ಕ್ರಿಕೆಟ್‌ ಅಸೋಸಿಯೇಶನ್‌ ಕಾರ್ಯಕ್ರಮ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಜವಾಬ್ದಾರಿ ಮರೆತಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿಹಾಕಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ನೋಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯನವರ ಕೈ ಕೆಳಗೆ ಕೆಲಸ ಮಾಡುವ, ಅವರಿಗೆ ವರದಿ ಮಾಡಿಕೊಳ್ಳುವ ಜಿಲ್ಲಾಧಿಕಾರಿಗಳು ತನಿಖೆ ಮಾಡಿ ಏನು ಗುಡ್ಡೆ ಹಾಕುತ್ತಾರೆ? ಕಾರ್ಯಕ್ರಮದ ಬಗ್ಗೆ ಯೋಚನೆ ಮಾಡಿ, ಅದರ ರೂಪರೇಷೆ ನಿರ್ಧರಿಸಿ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾದ ಜಿಲ್ಲಾಧಿಕಾರಿಗಳೇ ಸರ್ಕಾರದ ಲೋಪದೋಷ, ಎಡವಟ್ಟುಗಳ ಬಗ್ಗೆ ಪ್ರಾಮಾಣಿಕವಾಗಿ ತನಿಖೆ ಮಾಡಿ ವರದಿ ನೀಡುತ್ತಾರೆ ಅಂದರೆ ಅದನ್ನು ನಂಬಲು ಸಾಧ್ಯವಿಲ್ಲ.

ಜನಸಾಮಾನ್ಯರಿಗೆ ವಂಚನೆ ಮಾಡಿ ಹೆಣಗಳನ್ನು ಉರುಳಿಸಿದ್ದಾಯ್ತು. ಈಗ ಇವರಿಗೆ ಇವರೇ ಆತ್ಮ ವಂಚನೆ ಮಾಡಿಕೊಂಡು ಇನ್ನೊಂದು ಪಾಪ ಯಾಕೆ ಕಟ್ಟಿಕೊಳ್ಳುತ್ತಿದ್ದಾರೆ? ನ್ಯಾಯಾಂಗ ತನಿಖೆಯಿಂದ ಮಾತ್ರ ಅಮಾಯಕ ಜೀವಗಳಿಗೆ, ಅವರ ಹೆತ್ತವರಿಗೆ ನ್ಯಾಯ ಒದಗಿಸಲು ಸಾಧ್ಯ. ಸಾವಿನಲ್ಲೂ ಕಾಂಗ್ರೆಸ್‌ನವರು ಸಣ್ಣತನ ಪ್ರದರ್ಶನ ಮಾಡುವ ದುಸ್ಸಾಹಸ ಮಾಡಬಾರದು ಎಂದರು.

ಯಶಸ್ಸಿನ ದುರ್ಲಾಭ ಪಡೆಯಲು ಯತ್ನ

ಕಪ್ಪು ನಮ್ದೇ ಎಂದು ಎಲ್ಲರೂ ಹೇಳುತ್ತಿರುವಾಗ, ತಪ್ಪು ಯಾರದ್ದು ಎಂದು ಸರ್ಕಾರವನ್ನು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಸರ್ಕಾರದ ಪ್ರಾಯೋಜಿತ ಹತ್ಯಾಕಾಂಡವಾಗಿದೆ.

ಮತ್ತೊಬ್ಬರ ಯಶಸ್ಸಿನ ದುರ್ಲಾಭವನ್ನು ಪಡೆಯಲು ಕಾಂಗ್ರೆಸ್‌ ನಾಯಕರು ಮಾಡಿದ ತಪ್ಪಿನಿಂದಾಗಿ ಈ ಅನಾಹುತ ನಡೆದಿದೆ. ಇವರ ಕೆಟ್ಟ ತೀರ್ಮಾನದಿಂದ ಇಂಜಿನಿಯರ್‌, ಡಾಕ್ಟರ್‌, ಮಕ್ಕಳು ಸತ್ತಿದ್ದು, ಇದು ರಾಜ್ಯ ಸರ್ಕಾರದ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದರು.

ಕಪ್ ಎತ್ತಿ ಫೋಟೋ ತೆಗೆಸಿಕೊಂಡು ಸಂಭ್ರಮ ಪಟ್ಟವರು ನಂತರ ಸತ್ತ ಅಮಾಯಕರ ಶವಕ್ಕೆ ಹೆಗಲು ಕೊಡಲು ಬರಲಿಲ್ಲ. ವಿಮಾನ ನಿಲ್ದಾಣಕ್ಕೆ ಹೋಗಿ ಸೆಲ್ಫಿ ತೆಗೆಸಿಕೊಂಡು ಖುಷಿ ಪಟ್ಟವರು ಬಳಿಕ ಸತ್ತವರ ಮನೆಗೆ ಹೋಗಿ ಕಣ್ಣೀರು ಹಾಕಲಿಲ್ಲ. ಕ್ರಿಕೆಟ್ ಆಟಗಾರರಿಗೆ ಪೇಟ ತೊಡಿಸಿ ಹಾರ ಹಾಕಿ ಸನ್ಮಾನ ಮಾಡಿದವರು ಸತ್ತವರ ಸಮಾಧಿಗೆ ಮಣ್ಣು ಹಾಕಲೂ ಬರಲಿಲ್ಲ. ಈ ಹೃದಯಹೀನ ಸರ್ಕಾರದಲ್ಲಿ ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲ ಎಂದರು.

ವಿಧಾನಸೌಧದಲ್ಲಿ ಒಂದು ಕಾರ್ಯಕ್ರಮ ನಡೆದ ಬಳಿಕ, ಮತ್ತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಐಪಿಎಲ್‌ ಅಧ್ಯಕ್ಷರು ಇದಕ್ಕೆ ಸ್ಪಷ್ಟೀಕರಣ ನೀಡಿದ್ದು, ಇಲ್ಲಿನ ಕಾರ್ಯಕ್ರಮದ ಆಯೋಜನೆ ಬಗ್ಗೆ ಮಾಹಿತಿ ಇರಲಿಲ್ಲ ಎಂದಿದ್ದಾರೆ. ಐಪಿಎಲ್‌ ಅಧ್ಯಕ್ಷರು ನನ್ನ ತಪ್ಪಿಲ್ಲ ಎಂದು ಹೇಳಿದ್ದಾರೆ. ಕೆಎಸ್‌ಸಿಎ ತಪ್ಪು ಕೂಡ ಇಲ್ಲಿ ಕಾಣುತ್ತಿಲ್ಲ. ಹಾಗಾದರೆ ಆರ್‌ಸಿಬಿ ತಂಡವನ್ನು ವಿಧಾನಸೌಧಕ್ಕೆ ತಂದಿದ್ದು ಯಾರು ಎಂದು ಸರ್ಕಾರ ಉತ್ತರ ನೀಡಬೇಕಿದೆ ಎಂದರು.

ಪೊಲೀಸರನ್ನು ನಿಯೋಜಿಸಿದ್ದೇಕೆ?

ಪಂದ್ಯ ಮುಗಿದ ಬಳಿಕ ಪೊಲೀಸರು ಎಲ್ಲ ಕಡೆ ಅಭಿಮಾನಿಗಳನ್ನು ನಿಯಂತ್ರಿಸಿದ್ದಾರೆ. ಪೊಲೀಸರು ಕೆಲಸ ಮುಗಿಸುವಾಗ ಮಧ್ಯರಾತ್ರಿ ಕಳೆದಿತ್ತು. ಅದೇ ಪೊಲೀಸರನ್ನು ಮರುದಿನವೇ ಕರ್ತವ್ಯಕ್ಕೆ ಮತ್ತೆ ನಿಯೋಜಿಸಲಾಗಿದೆ. ಪೊಲೀಸರು ಮರುದಿನ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ನಿರಾಕರಿಸಿದ್ದರು. ಆಗ ಸರ್ಕಾರದಲ್ಲಿರುವವರು ಒತ್ತಾಯಪೂರ್ವಕವಾಗಿ ಸೂಚನೆ ನೀಡಿದ್ದರು.

ಹೈಕೋರ್ಟ್‌ ಇರುವುದರಿಂದ ಇದು ನಿರ್ಬಂಧಿತ ಪ್ರದೇಶವಾಗಿದೆ. ಜನರು ಕೋರ್ಟ್‌ ಮೇಲೆ ಕೂಡ ಹತ್ತಿ ನಿಂತಿದ್ದರು. ಇಂತಹ ಕಡೆ ಕಾರ್ಯಕ್ರಮ ನಡೆಸುವಷ್ಟು ಮುಠ್ಠಾಳತನವನ್ನು ಸರ್ಕಾರ ತೋರಿದೆ. ಇಷ್ಟಾದರೂ, ಇಷ್ಟು ಜನರು ಸೇರುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇವರಿಗೆ ಸ್ವಲ್ಪವೂ ಕಾಮನ್‌ಸೆನ್ಸ್‌ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಪ್ಪು ನಮ್ಮದಲ್ಲ ಎಂದು ಹೇಳಲು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದಾರೆ. ಪೊಲೀಸ್‌ ಇಲಾಖೆಗೆ ಯಾರು ಕಾರ್ಯಕ್ರಮ ನಡೆಸುತ್ತಿದ್ದಾರೆ, ಎಲ್ಲಿಂದ ಜನರನ್ನು ಬಿಡಬೇಕು, ಎಲ್ಲಿ ಬ್ಯಾರಿಕೇಡ್‌ ಹಾಕಬೇಕೆಂಬುದೇ ಗೊತ್ತಿರಲಿಲ್ಲ. ಸಣ್ಣ ಕಾರ್ಯಕ್ರಮ ಮಾಡಿದಾಗಲೇ ಆಂಬ್ಯುಲೆನ್ಸ್‌, ವೈದ್ಯರನ್ನು ಇರಿಸುತ್ತೇವೆ. ಆದರೆ ಇಷ್ಟು ಜನರು ಬಂದಾಗ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನೀಡಬೇಕಿತ್ತು ಎಂದರು.

ಮಧ್ಯಾಹ್ನ 3.45 ಕ್ಕೆ ಪೂರ್ಣಚಂದ್ರ ಎಂಬ ವ್ಯಕ್ತಿ ಸತ್ತಿದ್ದರು. 4.38 ಕ್ಕೆ ದಿವ್ಯ ಎಂಬ ಹುಡುಗಿ ಸತ್ತಿದ್ದಾಳೆ. 4.41 ಕ್ಕೆ ಒಬ್ಬ ವ್ಯಕ್ತಿ ಸತ್ತಿದ್ದಾರೆ. ಕಾರ್ಯಕ್ರಮ ಆರಂಭವಾಗುವ ಮೊದಲೇ ಜನರು ಕಾಲ್ತುಳಿತಕ್ಕೊಳಗಾಗಿ ತೀರಿಹೋಗಿದ್ದಾರೆ. ಎಲ್ಲ ಸಚಿವರು ಹಾಗೂ ಅವರ ಕುಟುಂಬದವರು ಕ್ರಿಕೆಟಿಗರೊಂದಿಗೆ ಫೋಟೋ ತೆಗೆಸಿಕೊಳ್ಳುವಲ್ಲಿ ನಿರತರಾಗಿದ್ದರು.

ಸಚಿವರ ಫೋಟೋ ಶೂಟ್‌ಗಾಗಿ ಅಮಾಯಕ ಯುವಜನರನ್ನು ಬಲಿ ತೆಗೆದುಕೊಳ್ಳಲಾಗಿದೆ. ಜನರು ಸತ್ತ ಸುದ್ದಿ ಗೊತ್ತಾದ ಕೂಡಲೇ ಕಾರ್ಯಕ್ರಮವನ್ನು ಕೂಡಲೇ ರದ್ದು ಮಾಡಬೇಕಿತ್ತು ಎಂದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]