ಕಾಲ್ತುಳಿತ ಪ್ರಕರಣ: ಸಿಎಂ ಆದೇಶಕ್ಕೆ ಪೊಲೀಸ್ ಇಲಾಖೆ ಶಾಕ್.. ಬಿಜೆಪಿ ನಾಯಕರ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಇಂದು ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಲ್ತುಳಿತ ಘಟನೆ (Stampede case) ಸಂಬಂಧಿಸಿದಂತೆ ಅನೇಕ ಕಠಿಣ ಕ್ರಮಗಳಿಗೆ ಆದೇಶಿಸಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು.

ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

  1. ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
  2. ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
  3. ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ.

ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ.

ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್, ಮಹಾದೇವಪ್ಪ ಸೇರಿದಂತೆ ಸಿಬಿಐ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.

ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.

ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದಿದ್ದಾರೆ.

ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು

ಬೆಂಗಳೂರು ನಗರ ಪೊಲೀಸ್ ಕಮಿಷನ‌ರ್: ಬಿ.ದಯಾನಂದ

ಹೆಚ್ಚುವರಿ ಪೊಲೀಸ್ ಆಯುಕ್ತ: ವಿಕಾಸ್ ಕುಮಾರ್ ವಿಕಾಸ್

ಕೇಂದ್ರ ಡಿಸಿಪಿ: ಟಿ.ಶೇಖರ್

ಕಬ್ಬನ್ ಪಾರ್ಕ್ ಎಸಿಪಿ: ಬಾಲಕೃಷ್ಣ

ಕಬ್ಬನ್‌ ಪಾರ್ಕ್‌ ಪೊಲೀಸ್ ಇನ್‌ಸ್ಪೆಕ್ಟರ್: ಗಿರೀಶ್ ಮತ್ತು ಸಿಬ್ಬಂದಿ

ಇನ್ನೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕಠಿಣ ಕ್ರಮದ ಬೆನ್ನಲ್ಲೇ ಬಿಜೆಪಿ ನಾಯಕರಾದ ಆರ್. ಅಶೋಕ್ ಮತ್ತು ಬಿವೈ ವಿಜಯೇಂದ್ರ ಅವರು ಅಮಾನತ್ತಾದ ಪೊಲೀಸ್ ಅಧಿಕಾರಿಗಳ ಪರ ವಕಾಲತ್ತು ವಹಿಸಿ ಟ್ವಿಟ್ ಮಾಡಿದ್ದಾರೆ.

ಆರ್.ಅಶೋಕ್ ಟ್ವಿಟ್

ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಪೊಲೀಸರು ಮೊದಲೇ ಅಪಾಯದ ಮುನ್ಸೂಚನೆ ನೀಡಿದ್ದರು, ಪೊಲೀಸರು ಹೊಣೆಯಲ್ಲ ಎಂದು ಹೇಳಿದ್ದರು.

ಈಗ ಸಿಎಂ ಸಿದ್ದರಾಮಯ್ಯ ಅವರು ಏಕಾಏಕಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಶೀತಲ ಸಮರ, ಮುಸುಕಿನ ಗುದ್ದಾಟವೇ ಈ ದುರಂತಕ್ಕೂ ಕಾರಣವಾಯ್ತಾ? ಎಂದಿದ್ದಾರೆ.

ಬಿ ವೈ ವಿಜಯೇಂದ್ರ

ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ ಹೊತ್ತು, ಆರ್.ಸಿ.ಬಿ ವಿಜಯೋತ್ಸವದ ಆಚರಣೆಗೆ ಮುಂದಾಗಿ, ಇಂತಹ ಬಹುದೊಡ್ಡ ದುರಂತಕ್ಕೆ ಕಾರಣವಾಗಿರುವಾಗ, ತಮ್ಮ ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಸಮಾರಂಭಕ್ಕೂ ಮುನ್ನವೇ ಕಾಲ್ತುಳಿತದಿಂದ ಸಾವು-ನೋವಾಗಿರುವ ಸುದ್ದಿ ತಲುಪಿದರೂ ಭಂಡತನದಿಂದ ಸನ್ಮಾನ ಕಾರ್ಯಕ್ರಮವನ್ನು ಮುಗಿಸಿ, ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಾರ್ಯಕ್ರಮ ಮುಂದುವರೆಸಿ, ಕಾಂಗ್ರೆಸ್ ಸರ್ಕಾರ ಕರುನಾಡಿನಲ್ಲಿ ಕರಾಳ ಇತಿಹಾಸ ಸೃಷ್ಟಿಸಿದೆ.

ಜನರ ಆಕ್ರೋಶವನ್ನು ತಣಿಸಲು ಹಾಗೂ ಉಚ್ಚ ನ್ಯಾಯಾಲಯದ ನ್ಯಾಯದಂಡದಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಕುರ್ಚಿಗೆ ಅಂಟಿ ಕೂರುವ ಸ್ವಾರ್ಥದ ಕ್ರಮವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ, ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಈ ದುರಂತ ಘಟನೆಯ ಜವಾಬ್ದಾರಿ ಹೊತ್ತು ಈ ಕೂಡಲೇ ರಾಜಿನಾಮೆ ನೀಡಲಿ ಎಂದಿದ್ದಾರೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]