ಬೆಂಗಳೂರು: ಬೆಂಗಳೂರಿನಲ್ಲಿ ನಡೆದ RCB ವಿಜಯೋತ್ಸವ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಮಹತ್ವದ ನಿರ್ಣಯ ಕೈಗೊಂಡಿದ್ದಾರೆ.
ಹೌದು ಇದೀಗ ಬಂದ ಮಾಹಿತಿ ಅನ್ವಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು.