Winning the cup is not a new thing: R Ashoka

ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ: ಆರ್ ಅಶೋಕ

ಬೆಂಗಳೂರು; ಕಾಲ್ತುಳಿತದ ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಶಕ್ತಿಗಳ ತಿಕ್ಕಾಟ ‌ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ. ಅವರ ಕುಟುಂಬದವರಿಗೆ ಸಾಂತ್ವನ ಹೇಳಬೇಕಿದ್ದವರು ಕಪ್ ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಆ ನಂತರವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಟುಕ, ಕಲ್ಲಿನ ಹೃದಯದವರು ಎಂದು ದೂರಿದರು.

ಕಾನೂನನ್ನು ಪೊಲೀಸ್ ಅಧಿಕಾರಿಗಳು ಜಾರಿ ಮಾಡುತ್ತಾರೆ. 4-6-2025 ರಂದು ವಿಧಾನಸೌಧದ ಪೊಲೀಸರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಹಾಗೂ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗಲಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದನ್ನು ನಿಷೇಧಿಸಬೇಕು ಎಂದೂ ಹೇಳಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರ್ಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಆಕ್ರೋಶ ಹೊರಹಾಕಿದರು.

ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ. ಡ್ರೋನ್ ಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರ್ಕಾರ ಹರಿದು ಬಿಸಾಡಿದೆ.

ವೇದಿಕೆಯಲ್ಲಿ 20-30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನು ಸಂಪೂರ್ಣ ಉಲ್ಲಂಘಿಸಿದ್ದು, 11 ಆಟಗಾರರು ಸೇರಿದಂತೆ ಒಟ್ಟು 200 ಜನರು ವೇದಿಕೆಯಲ್ಲಿದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ ಎಂದು ದೂರಿದರು.

ಇಷ್ಟೆಲ್ಲ ಕಾನೂನು ಉಲ್ಲಂಘನೆ ಮಾಡಿದ್ದರೂ, ಕೊನೆಗೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಸ್ತೆಯಲ್ಲಿ ನಿಂತು ಟ್ರಾಫಿಕ್‌ ನಿಯಂತ್ರಿಸುತ್ತಿದ್ದ ಪೊಲೀಸರ ವಿರುದ್ಧ ಕ್ರಮ ವಹಿಸಲಾಗಿದೆ. ಠಾಣೆ ಪೊಲೀಸರನ್ನು ಕೂಡ ಅಮಾನತು ಮಾಡಿದ್ದಾರೆ ಎಂದರು.

ವಿಶೇಷ ಅಧಿವೇಶನ ಕರೆಯಿರಿ

ಸರ್ಕಾರ ಮಾಡಿದ ತಪ್ಪುಗಳ ಬಗ್ಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಮೂರು ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಯಾವ ತನಿಖೆ ನಿಜ ಎಂದು ಗೊತ್ತಾಗಿಲ್ಲ. ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕಿದೆ. ಈ ಕುರಿತು ನಾವೆಲ್ಲರೂ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.

ಸರ್ಕಾರ ಪಾಪರ್ ಆಗಿಲ್ಲ ಎಂದಾದರೆ 1 ಕೋಟಿ ರೂ. ಪರಿಹಾರ ನೀಡಲಿ. ನಾವೆಲ್ಲರೂ ಒಂದು ತಿಂಗಳ ಸಂಬಳವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಿದ್ದೇವೆ ಎಂದು ತಿಳಿಸಿದರು.

ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ

ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ. ಪ್ರತಿ ರಾಜ್ಯಗಳ ತಂಡ ಕಪ್ ಗೆದ್ದಾಗಲೂ ಈ ರೀತಿಯ ಘಟನೆ ನಡೆದಿಲ್ಲ‌. ಯಾವುದೇ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಹೋಗಿ ಪ್ರಚಾರ ಪಡೆದಿಲ್ಲ ಎಂದರು.

ರಾಜಕೀಯ

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

ಸಿಎಂ, ಡಿಸಿಎಂ, ಸಚಿವ ಸಂಪುಟ ಮತ್ತು ಈ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112450"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು ಪರಾರಿ

ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು

ಕೃಷಿ ಜಮೀನುಗಳಲ್ಲಿನ ಬೋರ್ವೆಲ್ ಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು (Cable wire) ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು (Thieves) ಬೆನ್ನತ್ತಿದ ರೈತರು, ವಾಹನವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

[ccc_my_favorite_select_button post_id="112373"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!