ಸಂಚಾರ ನಿಯಮ ಉಲ್ಲಂಘಿಸಿದವರಿಗೆ ದಂಡ: ದೊಡ್ಡಬಳ್ಳಾಪುರ ಪೊಲೀಸರು ಆರಂಭಿಸಬೇಕಿದೆ ಈ ಕ್ರಮ

Doddaballapura Police should follow this action

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರಿಗೆ ವಿಶ್ವನಾಥಪುರ ಠಾಣೆ ಪೊಲೀಸರು (Police) ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.

ವಾಹನ ಸವಾರರು ಸಂಚಾರನಿಯಮ ಉಲ್ಲಂಘನೆ ಮಾಡುತ್ತಿರುವ ಕುರಿತು ದೂರು ಹೆಚ್ಚಾದ ಹಿನ್ನೆಲೆಯಲ್ಲಿ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಕೆಪಿಎಸ್ ಶಾಲೆ ಮುಂಭಾಗ ಹಾದುಹೋಗುವ ರಾಹೆ 648ರಲ್ಲಿ ವಿಶ್ವನಾಥಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಟಿ. ಶ್ರೀನಿವಾಸ್‌ ನೇತೃತ್ವದಲ್ಲಿ ಪೊಲೀಸರು ಬ್ಯಾರಿಗೇಡ್‌ಗಳನ್ನು ಅಳವಡಿಸಿ, ಅತಿವೇಗ ವಾಹನಗಳ ತಪಾಸಣೆ ಮತ್ತು ಹೆಲೈಟ್ ಧರಿಸದೆ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಸಂಚಾರ ನಿಯಮ ಪಾಲಿಸುವಂತೆ ಸೂಚಿಸಿದರು. ಜತೆಗೆ ದಂಡ ವಿಧಿಸಿದರು.

ಪಿಐ ಟಿ.ಶ್ರೀನಿವಾಸ್ ಅವರು ಮಾತನಾಡಿ, ವಿಶ್ವನಾಥಪುರ ಪೊಲೀಸರ ಕಾರಾಚರಣೆ ಹದಿಹರೆಯದ, ಪರವಾನಿಗೆ ಇಲ್ಲದೆ, ಹೆಜ್ಜೆಟ್ ಧರಿಸದೆ ರಸ್ತೆಗಿಳಿದ ದ್ವಿಚ ಕ್ರವಾಹನ ಸವಾರರಿಗೆ ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು. ಕಾರು, ಇನ್ನಿತರೆ ವಾಹನಗಳ ಚಾಲಕರಿಗೆ ಸೀಟ್‌ಬೆಲ್ಟ್ ಉಪಯೋಗಿ ಸಲು ಸೂಚಿಸಿದರು.

ಸಂಚಾರ ನಿಯಮಗಳ ಕಡ್ಡಾಯ ಪಾಲನೆ ಚಾಲಕರ ಆದ್ಯ ಕರ್ತವ್ಯವಾಗಿರ ಬೇಕು ಎಂದು ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ವಿಶ್ವನಾಥಪುರ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿ ವಾಸ್, ವೆಂಕಟಾಚಲಯ್ಯ, ಹೆಡ್ ಕಾನ್ಸ್ ಟೆಬಲ್ ದೇವರಾಜ್, ನಾಗೇಶ್, ಹರಿಪ್ರ ಸಾದ್, ಈಶ್ವರ್, ಸಿಬ್ಬಂದಿ ಉಮೇಶ್, ನಾಗೇಶ್, ಅನಿಲ್, ಇದ್ದರು.

ವಿಶ್ವನಾಥಪುರ ಠಾಣೆ ಪೊಲೀಸರು ರಸ್ತೆ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರು ಮತ್ತು ಚಾಲಕರಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಿದರು.

ದೊಡ್ಡಬಳ್ಳಾಪುರ ಪೊಲೀಸರು ಅಳವಡಿಸಿಕೊಳ್ಳಿ: ದೊಡ್ಡಬಳ್ಳಾಪುರ ತಾಲೂಕು ಟೋಲ್ ಕೇಂದ್ರಗಳಿಂದ ಸುತ್ತುವರಿದಿದ್ದು, ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಓಡಾಟ ಹೆಚ್ಚಾಗಿದೆ.

ಅಂತೆಯೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಅಪಘಾತ ಪ್ರಕರಣಗಳು ತೀವ್ರವಾಗಿದ್ದು, ವಾಹನ ಸವಾರರ ನಿರ್ಲಕ್ಷ್ಯ ಪ್ರಮುಖ ಕಾರಣ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ವಿಶ್ವನಾಥಪುರ ಪೊಲೀಸರಂತೆ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ, ದೊಡ್ಡಬೆಳವಂಗಲ ವ್ಯಾಪ್ತಿಯ ಪೊಲೀಸರು ಬೇಕಾಬಿಟ್ಟಿ ವಾಹನ ಚಲಾವಣೆ ಮಾಡುವ ವಾಹನ ಸಾವರರಿಗೆ ದಂಡ ವಿಧಿಸಿ ಬಿಸಿ ಮುಟ್ಟಿಸಿದರೆ, ಅಪಘಾತ ಪ್ರಕರಣಗಳನ್ನು ತಡೆಯಲು ಸಾಧ್ಯವಾಗಬಹುದು ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]