Fake news… Home Minister G. Parameshwara lashes out at the media

ಸುಳ್ಳು ಸುದ್ದಿ… ಮಾಧ್ಯಮಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ತರಾಟೆ| Video ನೋಡಿ

ಬೆಂಗಳೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸುವ ಕುರಿತಂತೆ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ (Dr.G.Paramaeshwara) ಅವರು ತಿಳಿಸಿದರು.

ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಸ್ಮಾರ್ಟ್ ಸಿಟಿಯಿಂದ 5 ಕೋಟಿ ರೂ. ಒದಗಿಸಿಕೊಂಡಿದ್ದೇವೆ.

ರಾಷ್ಟ್ರೀಯ ಹೆದ್ದಾರಿಯ ಸ್ಥಳೀಯ ನಿರ್ದೇಶಕರು ಆಗುವುದಿಲ್ಲ ಎಂದು ನಮಗೆ ತಿಳಿಸಿದ್ದರು. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿಯಾಗಬೇಕಿದೆ. ಕೇಂದ್ರದ ಸಚಿವರಾದ ವಿ.ಸೋಮಣ್ಣ ಅವರು ನಮ್ಮ ಜಿಲ್ಲೆಯ ಸಂಸದರು. ಕೇಂದ್ರದ ಭೂಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರಿಗೆ‌ ವಿ.ಸೋಮಣ್ಣ ಅವರ ಮೂಲಕ ಮನವಿ ನೀಡಿ, ಅನುಮತಿಯನ್ನು ಕೊಡಿಸುವಂತೆ ಕೇಳಿದ್ದೇನೆ. ಅನುಮತಿ ಕೊಟ್ಟರೆ ತುಮಕೂರಿನ ಆರಂಭದಲ್ಲಿ ಸ್ವಾಗತ ಕಮಾನು ನಿರ್ಮಿಸುತ್ತೇವೆ ಎಂದು ತಿಳಿಸಿದರು.

ನಮ್ಮ ಜಿಲ್ಲೆಗೆ ಕೇಂದ್ರದ ಅನೇಕ ಯೋಜನೆಗಳು ಆಗಬೇಕಿದೆ. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಅನೇಕ ಯೋಜನೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಇದರಲ್ಲಿ ನಮ್ಮ ತಾಲ್ಲೂಕು ಸೇರಿದ್ದು, ಅವರೊಂದಿಗೆ ಚರ್ಚಿಸಿದ್ದೇನೆ ಎಂದರು.

ತುಮಕೂರು ನಗರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವುದರಿಂದ ಪ್ರಯಾಣದ ವೇಳೆ ಯಾರಿಗೂ ಗೊತ್ತಾಗುವುದಿಲ್ಲ. ಸ್ವಾಗತ ಕಮಾನು ನಿರ್ಮಿಸಿದರೆ ಗೊತ್ತಾಗುತ್ತದೆ. ಈ ನಿಟ್ಟಿನಲ್ಲಿ 5 ಕೋಟಿ ರೂ. ಹಣ ಒದಗಿಸಿಕೊಂಡಿದ್ದೇವೆ ಎಂದು ಹೇಳಿದರು.

ತುಮಕೂರಿಗೆ ಮೆಟ್ರೋ ಯೋಜನೆ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನಗಳು ಏನಾಗುತ್ತದೆ ಎಂಬುದನ್ನು ನೋಡಿ ಸಚಿವ ವಿ.ಸೋಮಣ್ಣ ಮಾತನಾಡುತ್ತೇನೆ. ತುಮಕೂರಿಗೆ ಮೆಟ್ರೋ ಅಗತ್ಯ ಇದೆ ಎಂದು ಸೋಮಣ್ಣ ಅವರು ಹೇಳಿದ್ದಾರೆ. ಸಬ್ ಅರ್ಬನ್ ಯೋಜನೆಯು ಆಗಲಿ. ಎರಡು ಯೋಜನೆಗಳು ಆದರೆ ತಪ್ಪಿಲಿ ಎಂದರು.

ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದೆ. 20 ಸಾವಿರ ಎಕರೆಯಲ್ಲಿ ಇಂಡಸ್ಟ್ರೀಯಲ್ ಹಬ್ ಮಾಡಿದ್ದೇವೆ. ಬಹಳ ಜನ ತುಮಕೂರನ್ನು ವಿಸ್ತರಣೆ ಮಾಡಬೇಕು ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ.‌ ಬೆಂಗಳೂರಿಗೆ ತುಮಕೂರು 70 ಕಿ.ಮೀ.ನಲ್ಲಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಂಡರೆ ಅಭಿವೃದ್ಧಿ ದೃಷ್ಟಿಯಿಂದ ಅನುಕೂಲವಾಗುತ್ತದೆ. ನಾವು ಕೂಡ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಹೇಮಾವತಿ ಕೆನಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಬೇಡ ಎಂದು ತಿಳಿಸಿದ್ದೇನೆ‌. ಸಭೆ ಕರೆಯಬೇಕು ಎಂದು ಹೇಳಿದ್ದಾರೆ‌. ಈ ಬಗ್ಗೆ ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಆನಂತರ ಸಭೆ ಕರೆಯುವುದರ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ ಎಂಬುದನ್ನು ಅಧಿಕಾರಿಗಳು ನನಗೆ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ.

ಆ ಭಾಗದ ಜನರು ಎನ್‌ಐಎ ತನಿಖೆಗೆ ವಹಿಸುವಂತೆ ಮಾತನಾಡುತ್ತಿದ್ದರು. ಯಾರಾದರು ಮನವಿ ಮಾಡಿರಬಹುದು. ಸಂಸದರು, ಶಾಸಕರು ಹೇಳಿಕೊಂಡಿರಬಹುದು. ಕೇಂದ್ರ ಗೃಹ ಇಲಾಖೆಯಿಂದ ನಮಗೆ ಪತ್ರ ಬಂದಿದೆ ಎಂದು ಸ್ಪಷ್ಟಪಡಿಸಿದರು.

ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರನ್ನು ಕೇಳಿಲ್ಲ

ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು.

ಖಾತೆ ಬದಲಾವಣೆ ಕುರಿತಂತೆ ನಿಮಗೆ (ಮಾಧ್ಯಮಗಳು) ಯಾರು ಹೇಳಿದರು. ಒಂದು ವೇಳೆ ನಿಮ್ಮ ಕಿವಿಗೆ ಬಿತ್ತು ಅಥವಾ ಯಾರೋ ಹೇಳಿದರು‌ ಎಂಬ ಮಾತು ಬಂದಾಗ ನನ್ನನ್ನು ನೇರವಾಗಿ ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದಲ್ಲವೆ. ಸುದ್ದಿ ಮಾಡುವ ಮೊದಲು ನನ್ನನ್ನು ನೇರವಾಗಿ ಕೇಳಬಹುದಲ್ಲವೇ ಎಂದರು.

ನಾನು 30 ವರ್ಷದಿಂದ ನಿಮ್ಮೊಂದಿಗೆ ಸಂಯಮದಿಂದ ನಡೆದುಕೊಂಡಿದ್ದೇನೆ. ನೀವು ಅಷ್ಟೇ ಗೌರವಿಸಿದ್ದೀರಿ. ಇದಕ್ಕೆ ನಾನು ಅಭಾರಿಯಾಗಿದ್ದೇನೆ. ವ್ಯಕ್ತಿಯ ವ್ಯಕ್ತಿತ್ವವನ್ನು ನಾಶ ಮಾಡುವುದು ಒಳ್ಳೆಯದಾಗಿ ಕಾಣಿಸುವುದಿಲ್ಲ, ಮಾಧ್ಯಮಗಳಿಗೆ ಶೋಭೆ ತರುವುದಿಲ್ಲ ಎಂದರು.

ನಾನು ನನ್ನ ಶ್ರೀಮತಿಯವರು ಸೇರಿದಂತೆ ಯಾರ ಬಳಿಯೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಖಾತೆ ಬದಲಾಯಿಸುವಂತೆ ಆಪ್ತರ ಬಳಿ ಹೇಳಿದರು, ಮುಖ್ಯಮಂತ್ರಿಯವರ ಬಳಿ ಕೇಳಿದರು. ಅವರು ಸುಮ್ಮನೆ ಇರಿ ಎಂದು ಎಂದೆಲ್ಲ ಸುದ್ದಿ ಮಾಡಲಾಗಿದೆ. ಇದನ್ನು ಯಾರು ಹೇಳಿದರು. ಸುದ್ದಿ ಮಾಡುವ ಮೊದಲೇ ಸ್ಪಷ್ಟನೆ ಪಡೆದುಕೊಳ್ಳಬೇಕಿತ್ತು ಎಂದು ಹೇಳಿದರು.

ನಮ್ಮನ್ನು ಅಭಿಮಾನಿಗಳು, ಜನ ಅನುಕರಿಸುವವರು ಇದ್ದಾರೆ. ಕ್ಷೇತ್ರದ ಮತದಾರರು ಏನೆಂದುಕೊಳ್ಳುತ್ತಾರೆ. ಮುಂದೆ ಈ ರೀತಿ ಊಹಾಪೋಹಾ ಸುದ್ದಿ ನಿಮ್ಮ ಕಿವಿಗೆ ಬಿದ್ದಾಗ ನನ್ನನ್ನು ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದು.

ನಾನು ಯಾವತ್ತು ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಬೆಂಗಳೂರಿನಲ್ಲಿ ದುರದೃಷ್ಟಕರ ಘಟನೆ ನಡೆದಿದೆ. ಇಂತಹ ಘಟನೆಗಳಾಗಬಾರದು. ಈ ಘಟನೆಯಿಂದ ನಾವು ನೋವನ್ನು ಅನುಭವಿಸುತ್ತಿದ್ದೇವೆ. ಇಂತಹ ಸವಾಲುಗಳನ್ನು ಎದುರಿಸಬೇಕು.

ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರು ಸೇರಿದಂತೆ ಯಾರ ಬಳಿಯೂ ಮಾತನಾಡೇ ಇಲ್ಲ. ಇದೆಲ್ಲ ಸತ್ಯಕ್ಕೆ ದೂರವಾಗಿದ್ದು. ಈ ವಿಚಾರವನ್ನು ಯಾರು ಕೂಡ ಗಣನೆಗೆ ತೆಗೆದುಕೊಳ್ಳಬಾರದು ಎಂದು ಮನವಿ‌ ಮಾಡಿದರು.

ಕಾಲ್ತುಳಿತ ಘಟನೆಯ ಬಗ್ಗೆ ನಾನು ಏನನ್ನು ಮಾತನಾಡುವುದಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಾದೀಶರಾದ ಮೈಕೆಲ್ ಡಿ.ಕುನ್ಹಾ ಅವರ ಏಕವ್ಯಕ್ತಿ ಆಯೋಗಕ್ಕೆ ವಹಿಸಿದ್ದೇವೆ. ಅವರು ತನಿಖೆ ಮಾಡಿ ವರದಿ ಕೊಡುತ್ತಾರೆ. ನಾವು ಹೇಳಿಕೆ ಕೊಟ್ಟರೆ ಬೇರೆ ರೀತಿಯ ಪರಿಣಾಮ ಬೀರುತ್ತದೆ. ತನಿಖೆ ವೇಳೆ ನಮ್ಮನ್ನು ಕೇಳಿದರೆ ಹೇಳುತ್ತೇವೆ. ಈಗ ಹೇಳಿಕೆ ನೀಡಿದರೆ ತನಿಖೆಯ ದಿಕ್ಕು ಬೇರೆ ಕಡೆ ಹೋಗುತ್ತದೆ ಎಂದರು.

ದೆಹಲಿಗೆ ಕರೆದಿಲ್ಲ

ಪಕ್ಷದ ವರಿಷ್ಟರು ನನ್ನನ್ನು ದೆಹಲಿಗೆ ಕರೆದಿಲ್ಲ. ಫೋನ್‌ನಲ್ಲಿ ಮಾತನಾಡುತ್ತಿರುತ್ತಾರೆ. ಘಟನೆಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೇಳುತ್ತಾರೆ. ಸಿಎಂ, ಡಿಸಿಎಂ ಅವರನ್ನು ಕೇಳಿ ಮಾಹಿತಿ‌ ಪಡೆಯುತ್ತಾರೆ ಎಂದು ತಿಳಿಸಿದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!