ದೊಡ್ಡಬಳ್ಳಾಪುರ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

Doddaballapura: Site inspection for the Pradhan Mantri Krishi Sinchai Yojana

ದೊಡ್ಡಬಳ್ಳಾಪುರ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ – ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ (Pradhan Mantri Krishi Sinchai Yojana) ರಾಜ್ಯದ್ಯಾಂತ ಅನುಷ್ಠಾನ ಮಾಡಲು 2025-26 ನೇ ಸಾಲಿನಿಂದ 15 ಜಲಾನಯನ ಯೋಜನೆಗಳಿಗೆ ಅನುಮತಿ ದೊರೆತಿದೆ‌

ಇದರಲ್ಲಿ ದೊಡ್ಡಬಳ್ಳಾಪುತ ತಾಲ್ಲೂಕಿನ 2500 ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವನ್ನು ಉಪಚರಿಸಲು ಕೇಂದ್ರ ಭೂಸಂಪನ್ಮೂಲ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ರೈತರ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಮದುರೆ ಮತ್ತು ದೊಡ್ಡಬೆಳವಂಗಲ ಹೋಬಳಿಯ ಗ್ರಾಮಗಳ ಜಲಾನಯನ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಸದರಿ ಯೋಜನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ 18 ಗ್ರಾಮಗಳಲ್ಲಿ ಮಾತ್ರ ಈ ಯೋಜನೆಯಡಿ ಆಯ್ಕೆಯಾಗಿದ್ದು, ವಿಸ್ಕೃತ ಯೋಜನಾ ವರದಿಯನ್ನು ಈ ಮಾಹೆಯಲ್ಲಿ ಸಲ್ಲಿಸಬೇಕಾಗಿರುವುದರಿಂದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಡಾ. ರಾಘವೇಂದ್ರ. ಪಿ ಅವರು ತಿಳಿಸಿದರು.

ಈ ಯೋಜನೆಯಡಿ ಕೃಷಿ ಹೊಂಡ, ಕಂದಕ ಬದು, ಕೃಷಿ ಅರಣ್ಯ, ಖುಷ್ಕಿ ತೋಟಾಗಾರಿಕೆ ಹಾಗೂ ನಾಲ ಬದು, ತಡೆಅಣೆ, ಪಶುಗಳಿಗೆ ಮೇವು ಅಭಿವೃದ್ದಿ ಹಾಗೂ ಉಚಿತ ಪಶು ಆರೋಗ್ಯ ಶಿಬಿರಗಳ ಆಯೋಜನೆ ಮತ್ತು ಇನ್ನಿತರ ಕಾರ್ಯಕ್ರಮಗಳನ್ನು ಆಯಾ ಗ್ರಾಮಗಳ ರೈತರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗುವುದು.

ಜಲಾನಯನ ಅಭಿವೃದ್ಧಿ ಘಟಕ ಯೋಜನೆಯಲ್ಲಿ ಭೂರಹಿತರು ಸಹ ಸ್ವಸಹಾಯ ಸಂಘ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಜೀವನೋಪಾಯ ಕೌಶಲ್ಯ ತರಬೇತಿ ಪಡೆದು, ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.

ಈ ಯೋಜನೆಯ ಕ್ರಿಯಾಯೋಜನೆಯನ್ನು ಎಲ್ಲಾ ಗ್ರಾಮಗಳಲ್ಲಿ ಅನುಷ್ಠಾನ ಮಾಡಲು ಅಲ್ಲಿನ ರೈತರು, ಸ್ವಸಹಾಯ ಗುಂಪುಗಳು ಮತ್ತು ಗ್ರಾಮ ಪಂಚಾಯತಿ ಸಹಭಾಗಿತ್ವದ ಅವಶ್ಯಕತೆ ಇರುತ್ತದೆ ಎಂದರು.

ಈ ವೇಳೆ ಮದುರೆ ಕೃಷಿ ಅಧಿಕಾರಿ ಹರಿಶ್ ಕುಮಾರ್, ದೊಡ್ಡಬೆಳವಂಗಲ ಕೃಷಿ ಅಧಿಕಾರಿ ಗೀತಾ ಎನ್, ಜಲಾನಯನ ಸಹಾಯಕರಾದ ಲಕ್ಷ್ಮೀಶ್ ಮತ್ತು ಮಹೇಂದ್ರರವರು ಹಾಗೂ ಗ್ರಾಮಗಳ ರೈತರು ಇದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]