ಮೈನಿಂಗ್ ಮತ್ತು ಸ್ಟೀಲ್ ಇಂಡಸ್ಟ್ರೀಸ್ ಹಾಗೂ ಪಾಲುದಾರರ ಜೊತೆ ಸಮಾಲೋಚನಾ ಸಭೆ: ಡಾ.ಇ.ವಿ.ರಮಣ ರೆಡ್ಡಿ

Consultation meeting with mining and steel industries and stakeholders: Dr. E.V. Ramana Reddy

ಬಳ್ಳಾರಿ: ಈ ಭಾಗದ ಕೈಗಾರಿಕೆ ವಲಯಗಳಲ್ಲಿ ಉದ್ಯೋಗ ಸೃಷ್ಟಿಸುವುದರ ಜೊತೆಗೆ ಯುವ ಸಮುದಾಯದಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸಬೇಕು. ಇದಕ್ಕೆ ಕೈಗಾರಿಕೆಗಳೂ ಸಹ ಕೈಜೋಡಿಸಬೇಕು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಪ್ರಾಧಿಕಾರದ ಅಧ್ಯಕ್ಷ ಡಾ.ಇ.ವಿ.ರಮಣ ರೆಡ್ಡಿ (Dr.E.V.Ramana Reddy) ಹೇಳಿದರು.

ಸಂಡೂರು ತಾಲ್ಲೂಕಿನಲ್ಲಿ ಸ್ಕಿಲ್ ಪಾರ್ಕ್/ಅಕಾಡೆಮಿ ಸ್ಥಾಪಿಸುವ ಸಂಬಂಧ ಮೈನಿಂಗ್ ಮತ್ತು ಸ್ಟೀಲ್ ಇಂಡಸ್ಟ್ರೀಸ್ ಹಾಗೂ ಪಾಲುದಾರರ ಜೊತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ನಿಟ್ಟಿನಲ್ಲಿ ಕೈಗಾರಿಕೆ-ಪಾಲುದಾರರೊಂದಿಗೆ ಸಮಾಲೋಚನಾ ಸಭೆ ಆಯೋಜಿಸಲಾಗಿದ್ದು, ಕೈಗಾರಿಕೆಗಳು ಮತ್ತು ಪಾಲುದಾರರ ನಡುವಿನ ಅಂತರವನ್ನು ಕಡಿಮೆ ಮಾಡಲು ಹಾಗೂ ಉದ್ಯೋಗ ಕ್ಷೇತ್ರದಲ್ಲಿನ ಬೇಡಿಕೆಗಳನ್ನು ಪೂರೈಸಲು ಸಹಯೋಗ, ಸಹಭಾಗಿತ್ವ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಬೇಕಿದೆ ಎಂದು ತಿಳಿಸಿದರು.

ಪ್ರಸ್ತುತದಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಪಟ್ಟಿಗಳಿಗೆ ಸೀಮಿತವಾಗಿದ್ದಾರೆ. ಬದಲಾಗಿ ಅವರಿಗೆ ಕೌಶಲ್ಯತೆ ಆಧಾರಿತ ಶಿಕ್ಷಣ ಮೌಲ್ಯವು ನೀಡಬೇಕಿದೆ. ಹಾಗಾಗಿ ಇದಕ್ಕೆ ಕೈಗಾರಿಕೆಗಳ ಸಹಭಾಗಿತ್ವವೂ ಅವಶ್ಯಕತೆ ಇದೆ ಎಂದು ಅಭಿಪ್ರಾಯ ಪಟ್ಟರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕಾ ವಲಯಗಳು ಹೆಚ್ಚಾಗಿದ್ದು, ಉದ್ಯೋಗದಾತರು ಕೌಶಲ್ಯ ಶಿಕ್ಷಣ ಅಳವಡಿಸಬೇಕು. ಜೊತೆಗೆ ಸುರಕ್ಷತೆ ಮತ್ತು ದಕ್ಷತೆಗೆ ಆದ್ಯತೆ ನೀಡಬೇಕು. ಇದಕ್ಕೆ ಬೇಕಾದ ಎಲ್ಲಾ ಅಗತ್ಯ ಸಹಕಾರ ಜಿಲ್ಲಾಡಳಿತ ನೀಡಲಿದೆ ಎಂದು ಹೇಳಿದರು.

ಇದೇ ವೇಳೆ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾರ್ಖಾನೆಗಳ ವ್ಯವಸ್ಥಾಪಕರು ಮತ್ತು ಪಾಲುದಾರರು, ಈ ಭಾಗದ ಯುವಜನತೆಯು ಕೌಶಲ್ಯಾಧಾರಿತ ಶಿಕ್ಷಣ ಹೆಚ್ಚು ಅಳವಡಿಸಿಕೊಳ್ಳಬೇಕಿದೆ ಎಂದು ಅನಿಸಿಕೆ ಹಾಗೂ ಅಭಿಪ್ರಾಯ ಹಂಚಿಕೊಂಡರು.

ಈ ಸಂದರ್ಭದಲ್ಲಿ ಬೆಂಗಳೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಡಾ.ದಿನೇಶ್ ಕುಮಾರ್ ವೈ.ಕೆ., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ ಸೇರಿದಂತೆ ಜಿಲ್ಲೆಯ ವಿವಿಧ ಮೈನಿಂಗ್ ಮತ್ತು ಸ್ಟೀಲ್ ಕಾರ್ಖಾನೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್

ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯಾತೀತವಾಗಿ ಉಳಿಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="121129"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!