Yettinahole Project: CM Siddaramaiah makes important statement in Gauribidanur

ಎತ್ತಿನಹೊಳೆ ಯೋಜನೆ: ಗೌರಿಬಿದನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಗೌರಿಬಿದನೂರು: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.

ಇಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ: ಮರು ಗಣತಿ

ಜಾತಿ ಗಣತಿ ಬಗ್ಗೆ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ. ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದರು.

ಗ್ರೇಟರ್ ಬೆಂಗಳೂರಿಗೆ ತುಮಕೂರು: ಸಚಿವ ಸಂಪುಟದಲ್ಲಿ ಚರ್ಚೆ

ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು.

30 ದಿನಗಳಲ್ಲಿ ವರದಿ

ಕಾಲ್ತುಳಿತ ಪ್ರಕರಣದಲ್ಲಿ ಅನೇಕ ಆಯೋಗ ರಚನೆಯಾಗಿದ್ದು ಇವು ತಾರ್ಕಿಕ ಅಂತ್ಯ ಕಾಣುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ ಎಂದರು.

ಪಕ್ಷದ ವರಿಷ್ಠರ ತೀರ್ಮಾನ

ಕಾಂತರಾಜ ಆಯೋಗ ವರದಿ ಬಗ್ಗೆ ಪಕ್ಷದ ವರಿಷ್ಠರ ನಿರ್ಧಾರ ಮುಖ್ಯಮಂತ್ರಿಗಳಿಗೆ ನಿರಾಸೆ ತಂದಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಪಕ್ಷದ ವರಿಷ್ಠರು ನಿರ್ಧಾರ ಮಾಡಿದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ತೀರ್ಮಾನವಲ್ಲ ಎಂದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ

ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿ ಖಾಲಿ ಇರುವಡೆಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇನ್ನು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು, ಅವರ ವೇತನವನ್ನು ಹೆಚ್ಚಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ನಮ್ಮ ಸರ್ಕಾರ ಒತ್ತುನೀಡಿದೆ ಎಂದರು.

ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ

ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿ ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ

ಜಲ ಜೀವನ್ ಯೋಜನೆಯಡಿ ರಾಜ್ಯ ಸರ್ಕಾರ 50% ಅನುದಾನ ನೀಡಿದ್ದಾರೆ 30% ಮಾತ್ರ ಕೇಂದ್ರ ಸರ್ಕಾರ ನೀಡುತ್ತದೆ. 20% ಫಲಾನುಭವಿಗಳು ನೀಡುತ್ತಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ರಾಜ್ಯ ಸರ್ಕಾರದ ಪಾಲು ಹೆಚ್ಚಿದ್ದರೂ ಆಯುಷ್ಮಾನ್ ಭಾರತ್ ಯೋಜನೆ ಎನ್ನುತ್ತಾರೆ. ಅನೇಕ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಧಾನ ಮಂತ್ರಿಗಳ ಹೆಸರಿರುತ್ತದೆ. ಕುಸುಮ್ ಬಿ ಯೋಜನೆಯಡಿ 30% ಕೇಂದ್ರದಿಂದ ಬರುತ್ತದೆ. ಒಪ್ಪದೇ ಹೋದರೆ ಅದೂ ಬರುವುದಿಲ್ಲ. ರೈತರಿಗೆ ಒಳ್ಳೆಯದಾಗಬೇಕು, ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಇದನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.

ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣವಾಗಲಿದೆ

ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಮುಕ್ತಾಯವಾಗಬಹುದು ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಭಾಗದ ಸಚಿವರು, ಶಾಸಕರು, ಹಾಗೂ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲಾಗಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಳೆದ ವರ್ಷ 52000 ಕೋಟಿ ರೂ.ಗಳ ಬಂಡವಾಳ ವೆಚ್ಚ ಇತ್ತು. ಈ ವರ್ಷ 83 ಸಾವಿರ ಕೋಟಿಯಾಗಿದೆ ಎಂದರು. 31000 ಕೋಟಿ ಬಂಡವಾಳ ವೆಚ್ಚ ಒಂದು ವರ್ಷದಲ್ಲಿ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರ ದಿವಾಳಿ ಹೇಗೆ ಆಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಐವತ್ತು ಸಾವಿರಕ್ಕೂ ಹೆಚ್ಚು ಅನುದಾನ ಒದಗಿಸಲಾಗಿದೆ ಎಂದರು.

ಎರಡು ವರ್ಷಗಳಲ್ಲಿ 242 ಭರವಸೆಗಳನ್ನು ಈಡೇರಿಸಿದೆ

ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿದ್ದು, ಕೇಂದ್ರ ಸರ್ಕಾರ 600 ಭರವಸೆಗಳನ್ನು ನೀಡಿ ಶೇ.10ರಷ್ಟನ್ನೂ ಅನುಷ್ಠಾನ ಮಾಡಿಲ್ಲ ಎಂದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110310"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!