ಮರು ಜಾತಿ ಗಣತಿ: ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದ ಆರ್.ಅಶೋಕ

If the sanctity of Chamundeshwari temple is violated, 'Chamundeshwari Chalo'; R. Ashoka

ಬೆಂಗಳೂರು: ಮತ್ತೊಮ್ಮೆ ಜಾತಿ ಸಮೀಕ್ಷೆ ನಡೆಸುವ ತೀರ್ಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಪಾಳಮೋಕ್ಷ ಮಾಡಿದೆ. ಇದು ಸಿಎಂ ಸಿದ್ದರಾಮಯ್ಯ (Cmsiddaramaiah) ಅವರ ಸೋಲು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರು ಜಾತಿ ಸಮೀಕ್ಷೆಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖಭಂಗವಾಗಿ ಸೋಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಗೆಲುವಾಗಿದೆ.

ಈ ವರದಿಯನ್ನು ನಾವೆಲ್ಲರೂ ವಿರೋಧಿಸಿದ್ದೆವು‌. ಕಾಂಗ್ರೆಸ್ ಹೈಕಮಾಂಡ್ ಗೆ ಈ ವರದಿ ಸರಿಯಿಲ್ಲ ಎನ್ನಿಸಿದೆ. ಹೈಕಮಾಂಡ್ ನಿಂದ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷವಾಗಿದೆ.

ಯಾರು ಏನೇ ಮಾಡಿದರೂ ವರದಿ ಜಾರಿ ಮಾಡುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು‌‌. ಈಗ ಅವರು ಹೇಳಿದಂತೆ ನಡೆದುಕೊಳ್ಳದೇ ಇರುವುದರಿಂದ ರಾಜೀನಾಮೆ ಕೊಡುವುದು ಸೂಕ್ತ. 160 ಕೋಟಿ ರೂ. ವ್ಯರ್ಥವಾಗಿದ್ದು, ಮರು ಸಮೀಕ್ಷೆ ನಡೆಸಲು ಇವರ ಬಳಿ ಹಣವಿಲ್ಲ. ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಕನ್ನಡಿಗರ ಪ್ರಶ್ನೆಗಳು

ಸಿಎಂ ಸಿದ್ದರಾಮಯ್ಯನವರಿಗೆ ಕನ್ನಡಿಗರ ಪರವಾಗಿ, ಆರ್.ಅಶೋಕ ಪ್ರಶ್ನೆಗಳನ್ನು ಕೇಳಿದ್ದಾರೆ.

ಹೈಕಮಾಂಡ್ ಶಂಖದಿಂದ ಬಂದರೆ ಮಾತ್ರ ತೀರ್ಥವೇ?

ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು ಸಿಎಂ ಸಿದ್ದರಾಮಯ್ಯ ಇಷ್ಟೆಲ್ಲಾ ಹಠ ಹಿಡಿದಿದ್ದರು. ಆದರೆ ಹೈಕಮಾಂಡ್ ತಪರಾಕಿ ಹಾಕಿದಾಕ್ಷಣ, ಮರು ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದಾರೆ. ಇದರಿಂದ ಒಂದು ವಿಷಯ ಸ್ಪಷ್ಟವಾಗುತ್ತದೆ. ಇವರಿಗೆ ರಾಜ್ಯದ ಜನರ ಮೇಲೆ, ಮಠಾಧೀಶರು, ಸಮುದಾಯಗಳ ಮುಖಂಡರ ಮೇಲೆ ವಿಶ್ವಾಸವಿಲ್ಲ. ಇವರು ಏನಿದ್ದರೂ ಹೈಕಮಾಂಡ್‌ ವಾಕ್ಯ ಪರಿಪಾಲಕ ಅಲ್ಲವೇ?

ಸಮೀಕ್ಷೆ ನಡೆಸುವವರು ಯಾರು?

ಸಿಎಂ ಸಿದ್ದರಾಮಯ್ಯನವರು 90 ದಿನಗಳ ಕಾಲಮಿತಿಯಲ್ಲಿ ಸಮೀಕ್ಷೆ ನಡೆಸುವ ಬಗ್ಗೆ ಹಲವು ಗಂಭೀರ ಪ್ರಶ್ನೆಗಳು ಎದುರಾಗಿವೆ. ಪ್ರಸ್ತುತ ಸನ್ನಿವೇಶದಲ್ಲಿ ಈ ಸಮೀಕ್ಷೆ ಹೇಗೆ ಸಾಧ್ಯ ಎಂಬುದು ಜನಸಾಮಾನ್ಯರ ಆತಂಕವಾಗಿದೆ.

ಶಾಲೆಗಳು ಈಗಾಗಲೇ ಆರಂಭವಾಗಿವೆ. ಇಂತಹ ಸಮಯದಲ್ಲಿ ಸಮೀಕ್ಷೆಯಂತಹ ಬೃಹತ್ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿದರೆ, ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಬುಡಮೇಲಾಗುತ್ತವೆ. ಮಕ್ಕಳ ಭವಿಷ್ಯದ ಮೇಲೆ ಇದು ನೇರ ಪರಿಣಾಮ ಬೀರಲಿದೆ. ಹಾಗಾದರೆ, ಈ 90 ದಿನಗಳಲ್ಲಿ ಸಮೀಕ್ಷೆಯನ್ನು ನಡೆಸಲು ಸರ್ಕಾರ ಯಾರನ್ನು ನಿಯೋಜಿಸಲಿದೆ?

ಆನ್‌ಲೈನ್ ಸಮೀಕ್ಷೆ – ಅವಿವೇಕದ ಕ್ರಮವಲ್ಲವೇ

ಆನ್‌ಲೈನ್ ಮೂಲಕ ಸಮೀಕ್ಷೆ ನಡೆಸುವ ಚಿಂತನೆ ಮತ್ತೊಂದು ಅವಿವೇಕದ ಕ್ರಮವೆಂದು ತೋರುತ್ತಿದೆ. ಅನೇಕ ಅಕ್ಷರಸ್ಥರೇ ಇಂದಿಗೂ ಆನ್‌ಲೈನ್ ವ್ಯವಸ್ಥೆಯಿಂದ ದೂರ ಇರುವಾಗ, ಇಂತಹ ಸಮೀಕ್ಷೆ ಹೇಗೆ ಸಾಧ್ಯ? ಇದರಿಂದ ಮಾಹಿತಿಯ ನಿಖರತೆ ಮತ್ತು ಗುರುತು ಪತ್ತೆ ಹೇಗೆ ಸಾಧ್ಯವಾಗುತ್ತದೆ? ತಪ್ಪು ದಾಖಲಾತಿಗಳನ್ನು ತಡೆಯಲು ಸರ್ಕಾರ ಏನು ಕ್ರಮ ತೆಗೆದುಕೊಳ್ಳಲಿದೆ?

ತೆರಿಗೆದಾರರ 167 ಕೋಟಿ ರೂ. ದುಂದುವೆಚ್ಚಕ್ಕೆ ಹೊಣೆ ಯಾರು?

ಜಾತಿ ಜನಗಣತಿಗಾಗಿ ಈಗಾಗಲೇ ಖರ್ಚಾದ ಈ ಬೃಹತ್ ಮೊತ್ತಕ್ಕೆ ಯಾರು ಹೊಣೆಗಾರರು? ಈ ಹಿಂದೆ ಸಿದ್ಧಪಡಿಸಿದ್ದ ಕಾಂತರಾಜು-ಜಯಪ್ರಕಾಶ್ ಹೆಗ್ಡೆ ಅವರ ‘ಚೌಚೌ ವರದಿ’ಗೆ ಈಗ ಎಳ್ಳು-ನೀರು ಬಿಟ್ಟಂತಾಗಿದೆ. ಆ ವರದಿಗೆ ತೆರಿಗೆದಾರರ 167 ಕೋಟಿ ರೂ. ವೆಚ್ಚವಾಗಿದೆ. ಈ ಹಣವನ್ನು ಯಾರಿಂದ ವಸೂಲಿ ಮಾಡುತ್ತಾರೆ?

ಐಪಿಎಲ್ ವಿಜಯೋತ್ಸವ ದುರಂತ ಮರೆಮಾಚಲು ಬೃಹತ್ ನಾಟಕವೇ?

ಈ ಎಲ್ಲ ಬೆಳವಣಿಗೆಗಳಿಗಿಂತ ಮಿಗಿಲಾಗಿ, ಮುಖ್ಯಮಂತ್ರಿಗಳು ಮತ್ತು ಅವರ ಹೈಕಮಾಂಡ್ ಸೇರಿಕೊಂಡು, ಇತ್ತೀಚಿನ ಐಪಿಎಲ್ ವಿಜಯೋತ್ಸವ ದುರಂತವನ್ನು ಮರೆಮಾಚಲು ಮತ್ತೊಂದು ಬೃಹತ್ ನಾಟಕ ಆರಂಭಿಸಿರುವ ಅನುಮಾನಗಳು ದಟ್ಟವಾಗಿವೆ. ಇದು ನಿಜಕ್ಕೂ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವೇ?

ಸರ್ಕಾರಕ್ಕೆ ನಿಜಕ್ಕೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಮೊದಲು ಸಾರ್ವಜನಿಕ ಚರ್ಚೆ ನಡೆಸಬೇಕು. ಹಾಗೆಯೇ, ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ, ಎಲ್ಲರ ಅಭಿಪ್ರಾಯಗಳನ್ನು ಆಲಿಸಬೇಕು. ಸಮಗ್ರವಾಗಿ ಎಲ್ಲ ಸಿದ್ಧತೆಗಳನ್ನು ಮುಗಿಸಿ, ಈ ಶೈಕ್ಷಣಿಕ ವರ್ಷ ಮುಗಿದ ಬಳಿಕವಷ್ಟೇ ಶಿಕ್ಷಕರನ್ನು ಬಳಸಿಕೊಂಡು ಸಮೀಕ್ಷೆ ನಡೆಸಬೇಕು‌‌. ಇದು ರಾಜ್ಯದ ಹಿತದೃಷ್ಟಿಯಿಂದ ಅತಿ ಅವಶ್ಯಕ ಎಂದು ಆರ್.ಅಶೋಕ ಒತ್ತಾಯಿಸಿದ್ದಾರೆ‌.

ತಾರ್ಕಿಕ ಅಂತ್ಯಕ್ಕೆ ತಲುಪಿದ ಹೋರಾಟ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪೊಪ್ಪಿಕೊಂಡಿದ್ದರು.

ಜಾರಿ ನಿರ್ದೇಶನಾಲಯ ಬಹಳ ತಡವಾಗಿ ದಾಳಿ ಮಾಡಿದೆ. ಈ ಹಗರಣದ ಹಣ ಲೋಕಸಭಾ ಚುನಾವಣೆ ಬಳಕೆಯಾಗಿದೆ ಎಂದು ತನಿಖೆಯಿಂದ ಗೊತ್ತಾಗಿದೆ. ಬಡವರ ಹಣ ತಿಂದ ಕಾಂಗ್ರೆಸ್ ನಾಯಕರಿಗೆ ಶಿಕ್ಷೆಯಾಗಬೇಕು.

ಇಡಿಯ ಈ ಕೆಲಸವನ್ನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ನವರು ಇದು ದ್ವೇಷದ ರಾಜಕಾರಣ ಎನ್ನುತ್ತಾರೆ. ಆದರೆ ಹಗರಣ ನಡೆದಿದೆ ಎಂದು ಸಿಎಂ ಒಪ್ಪಿಕೊಂಡಿರುವಾಗ ದ್ವೇಷ ಬರಲು ಹೇಗೆ ಸಾಧ್ಯ? ಬಿಜೆಪಿ ನಡೆಸಿದ ಹೋರಾಟ ಈಗ ತಾರ್ಕಿಕ ಅಂತ್ಯಕ್ಕೆ ತಲುಪಿದೆ ಎಂದರು.

187 ಕೋಟಿ ರೂ. ಹಗರಣ ನಡೆದಿದೆ ಎಂಬುದು ಗೊತ್ತಾಗಿದೆ ಅಂದಮೇಲೆ ಇದಕ್ಕೆ ಕಾರಣರಾದವರ ಹೆಸರನ್ನು ಬಹಿರಂಗಪಡಿಸಲಿ. ಸುಮ್ಮನೆ ಬಿಜೆಪಿಯನ್ನು ತೆಗಳುವುದು ಸರಿಯಲ್ಲ.

ಕಾಂಗ್ರೆಸ್ ನಾಯಕರ ಸೂಚನೆ ಮೇರೆಗೆ ಮಾಜಿ ಸಚಿವ ನಾಗೇಂದ್ರ ಹಣ ವರ್ಗಾವಣೆ ಮಾಡಿದ್ದರು. ಅವರ ಭಯದಿಂದಾಗಿ ಅವರನ್ನು ಮತ್ತೆ ಸಚಿವರಾಗಿ ಮಾಡಲು ಸಿದ್ಧತೆ ನಡೆದಿದೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]